ಶಿವಮೊಗ್ಗ ಜಿಲ್ಲಾಧಿಕಾರಿಗೆ ಕೊರೊನಾ ಪಾಸಿಟಿವ್; ಹೋಂ ಐಸೊಲೇಷನ್

ಶಿವಮೊಗ್ಗ, ಮೇ 4: ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ರೋಗ ಲಕ್ಷಣವಿಲ್ಲದ ಪಾಸಿಟಿವ್ ಬಂದ ಹಿನ್ನೆಲೆ, ಜಿಲ್ಲಾಧಿಕಾರಿಯವರು ಮನೆಯಲ್ಲಿಯೇ ಪ್ರತ್ಯೇಕತೆಗೆ ಒಳಗಾಗಿದ್ದಾರೆ.

ಕೊರೊನಾ ತುರ್ತು ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಿದ್ದ ಅವರು, ಪರಿಸ್ಥಿತಿ ನಿಭಾಯಿಸುವ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದರು. ಮೆಗ್ಗಾನ್ ಆಸ್ಪತ್ರೆಗೂ ಭೇಟಿ ನೀಡುತ್ತಿದ್ದರು. ಈ ನಡುವೆ ಅವರಿಗೆ ಸೋಂಕು ತಗುಲಿದ್ದು, ಮನೆಯಿಂದಲೇ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಳೆದ ವರ್ಷ ಪ್ರಾಥಮಿಕ ಸಂಪರ್ಕಕ್ಕೆ ಒಳಗಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ಹೋಂ ಐಸೊಲೇಷನ್ ಒಳಗಾಗಿದ್ದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದವರೊಬ್ಬರಿಗೆ ಸೋಂಕು ತಗುಲಿತ್ತು. ಈ ಬಾರಿ ರೋಗ ಲಕ್ಷಣವಿಲ್ಲದಿದ್ದರೂ ಪಾಸಿಟಿವ್ ಬಂದ ಹಿನ್ನೆಲೆ ಹೋಂ ಐಸೊಲೇಷನ್ಗೆ ಒಳಗಾಗಿದ್ದಾರೆ.

Shivamogga DC KB Shivakumar Tests Positive For Covid-19

ಬೇಗ ಗುಣಮುಖರಾಗಿ

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ಶೀಘ್ರ ಗುಣವಾಗಲಿ ಎಂದು ಸಂಸದ ಬಿ.ವೈ ರಾಘವೇಂದ್ರ ಹಾರೈಸಿದ್ದಾರೆ. ಈ ಕುರಿತು ಫೇಸ್ ಬುಕ್ ನಲ್ಲಿ ಸಂಸದ ಬಿ.ವೈ ರಾಘವೇಂದ್ರ ಪೋಸ್ಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+