ಶಿವಮೊಗ್ಗ; ಮಳೆ ಮುಂಜಾಗ್ರತೆ, ವಿವಿಧ ಸ್ಥಳಗಳಿಗೆ ಡಿಸಿ ಭೇಟಿ

ಶಿವಮೊಗ್ಗ, ಮೇ 28; ನೈಋತ್ಯ ಮುಂಗಾರು ಮಳೆ ಆರಂಭವಾಗಲು ಕೆಲವೇ ದಿನಗಳು ಬಾಕಿ ಇದೆ. ಮುಂಗಾರು ಅವಧಿಯಲ್ಲಿ ಸುರಿಯುವ ಮಳೆ ಅವಾಂತರ ಸೃಷ್ಟಿಸುವ ಪ್ರದೇಶಗಳನ್ನು ಜಿಲ್ಲಾಡಳಿತ ಪಟ್ಟಿ ಮಾಡಿದೆ. ಈ ಸ್ಥಳಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಶಿವಮೊಗ್ಗ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದರು. ಮಳೆಯಿಂದ ಆಗಬಹುದಾದ ಹಾನಿ ತಡೆಯಲು ಸಣ್ಣ ನೀರಾವರಿ ಇಲಾಖೆ, ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

DC Of Shvamogga Visits Places

ನೈಋತ್ಯ ಮುಂಗಾರು ಮಳೆ ಸಮಯದಲ್ಲಿ ಸಮಸ್ಯೆ ಎದುರಿಸಬಹುದಾದ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು. ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ಕೊಟ್ಟರು.

ಹಲವು ಸೂಚನೆಗಳು; ಪಾಲಿಕೆ ವ್ಯಾಪ್ತಿಯ ಎಲ್‍ಬಿಎಸ್ ನಗರದ ಚಾನಲ್‍ಗೆ ಭೇಟಿ ನೀಡಿ, ಚಾನಲ್‍ನಲ್ಲಿರುವ ಗಿಡಗಂಟಿ, ಕಸ ತೆಗೆಸಬೇಕು. ಇಲ್ಲವಾದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ಹೊರಗೆ ನುಗ್ಗುವ ಸಂಭವವಿದ್ದು, ನೀರು ಸರಾಗವಾಗಿ ಹರಿಯಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಿ ಎಂದರು.

DC Of Shvamogga Visits Places

ಶರಾವತಿ ನಗರ ಚಾನಲ್ ಬಳಿ ಭೇಟಿ ನೀಡಿ, ಚರಂಡಿ ಕೊಳಚೆ ನೀರನ್ನು ಚಾನಲ್‍ಗೆ ಬಿಡದಂತೆ ಕ್ರಮ ವಹಿಸಬೇಕೆಂದು ತಿಳಿಸಿದರು. ಗೋಪಿಶೆಟ್ಟಿಕೊಪ್ಪದ ಚಾನೆಲ್ ತಿರುವಿನಲ್ಲಿ ನೀರು ರಭಸವಾಗಿ ಹರಿಯುವುದರಿಂದ ಕಳೆದ ಬಾರಿ ಚಾನಲ್ ಏರಿ ಒಡೆದಿತ್ತು. ಈ ಬಾರಿ ಹಾಗಾಗದಂತೆ ರಾಮೇನಕೊಪ್ಪ ಬಳಿಯ ಕಾನೆಹಳ್ಳಕ್ಕೆ ನೀರು ಹರಿಸುವ ಮೂಲಕ ಆ ರಭಸವನ್ನು ಕಡಿಮೆ ಮಾಡಬಹುದೆಂದು ಸಲಹೆ ಕೊಟ್ಟರು.

ವಿವಿಧ ನಾಲೆಗಳು, ರಾಜ ಕಾಲುವೆ, ಚಾನಲ್, ಚರಂಡಿಗಳನ್ನು ಪರಿಶೀಲಿಸಿ, ಮಳೆ ಆರಂಭವಾಗುವ ಮುನ್ನ ಕಸ, ಮಣ್ಣು, ಹೂಳು ತೆಗೆಸುವಂತೆ ಹಾಗೂ ಇತರೆ ಪರ್ಯಾಯ ವ್ಯವಸ್ಥೆ ಮಾಡಿ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಹಾಯವಾಣಿ ಸ್ಥಾಪನೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಮಳೆಗಾಲದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆಗಳನ್ನು ನೀಡಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ ಅತಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿ, ತೊಂದರೆ ಆಗಿರುವ ಪ್ರದೇಶಗಳನ್ನು ಗುರುತಿಸಿ, ತಹಶೀಲ್ದಾರ್ ಮತ್ತು ಇಓಗಳು ಭೇಟಿ ನೀಡಿ, ಪರಿಶೀಲಿಸಬೇಕು. ಹಾನಿ ಮರುಕಳಿಸದಂತೆ ಈಗಾಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಭೇಟಿ ನೀಡಿ ಕ್ರಮಗಳ ಬಗ್ಗೆ ಪರಿಶೀಲಿಸಬೇಕು ಎಂದು ಹೇಳಿದ್ದಾರೆ.

ಜಿಲ್ಲಾಡಳಿತ ನಗರ ಹಾಗೂ ಗ್ರಾಮ ವ್ಯಾಪ್ತಿಯ ಕೆರೆಗಳನ್ನು ಪರಿಶೀಲಿಸಿ, ಅವುಗಳ ಸುರಕ್ಷತೆ ಖಾತರಿ ಮಾಡಿಕೊಳ್ಳಬೇಕು. ಮಳೆ ನೀರು ಸಂಗ್ರಹ, ಹೆಚ್ಚುವರಿ ನೀರು ಹೊರ ಹಾಕಲು ಸೂಕ್ತ ಮಾರ್ಗ, ಕೆರೆ ಒಡೆಯದಂತೆ ಗಟ್ಟಿಮುಟ್ಟಾಗಿ ಇರುವ ಬಗ್ಗೆ ಗ್ರಾಮ ಪಂಚಾಯತಿ, ಲೋಕೋಪಯೋಗಿ, ಸಣ್ಣ ನೀರಾವರಿ ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿವೆ.

ಮಳೆಗಾಲದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸಲು ಗ್ರಾಮ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ಆರಂಭಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಿ, ನಿರಂತರವಾಗಿ ಸಾರ್ವಜನಿಕರಿಗೆ ಸ್ಪಂದಿಸುವ ವ್ಯವಸ್ಥೆ ಮಾಡಬೇಕೆಂದು ಸೂಚನೆ ಕೊಡಲಾಗಿದೆ.

ಮಳೆ ಬಂದು ಮರಗಳು ಬಿದ್ದು ಹೋದರೆ, ಕೂಡಲೇ ತೆರವು ಗೊಳಿಸಬೇಕು. ವಿದ್ಯುಚ್ಚಕ್ತಿ ಕಂಬಗಳು ಬಿದ್ದು ಹೋದರೆ, ಟ್ರಾನ್‌ಫಾರ್ಮರ್‌ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿಗಳು ಸೂಚನೆ ಕೊಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+