ಶಿವಮೊಗ್ಗ: ಡೆಂಗ್ಯೂ ನಿಯಂತ್ರಣಕ್ಕಾಗಿ ಏನೇನು ಮಾಡಬೇಕು?
ಶಿವಮೊಗ್ಗ, ಜುಲೈ. 19: ನೀರು ಸಂಗ್ರಹಿಸುವ ಪರಿಕರಗಳನ್ನು ಪ್ರತಿ ಶುಕ್ರವಾದಂದು ಖಾಲಿ ಮಾಡಿ, ಸ್ವಚ್ಚಗೊಳಿಸಿ, ಒಣಗಿಸಿ ಹೊಸದಾಗಿ ನೀರು ತುಂಬಿಸಬೇಕು ಮತ್ತು ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡುವ ಮೂಲಕ ಡೆಂಗ್ಯೂ ನಿಯಂತ್ರಣದಲ್ಲಿ ಕೈಜೋಡಿಸಬೇಕು ಎಂದು ಶಿವಮೊಗ್ಗ ಜಿ.ಪಂ ಸಿಇಓ ಎನ್.ಹೇಮಂತ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಸರ್ಕಾರ ಪ್ರತಿ ಶುಕ್ರವಾರವನ್ನು ಡೆಂಗ್ಯೂ ಹರಡುವ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಚಟುವಟಿಕೆಯ ದಿನವಾಗಿ ಅನುಷ್ಟಾನಗೊಳಿಸಲು ಸೂಚಿಸಿದ್ದು ಈ ಹಿನ್ನೆಲೆಯಲ್ಲಿ ಜುಲೈ 19 ರ ಶುಕ್ರವಾರದಂದು ಜಿ.ಪಂ ಸಿಇಓ ರವರು ಆಜಾದ್ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳ ಮನೆಗಳಿಗೆ ತೆರಳಿ ಸಾರ್ವಜನಿಕರಲ್ಲಿ ಈ ಕುರಿತು ಅರಿವು ಮೂಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ರೋಗ ಪ್ರಸರಣ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಜ್ವರ ನಿಯಂತ್ರಣ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಮನೆ ಮನೆಗೆ ಆಶಾ, ಅಂಗನವಾಡಿ, ಆರೋಗ್ಯ ಕಾಯಕರ್ತರು ತೆರಳಿ ಲಾರ್ವಾ ಸಮೀಕ್ಷೆ ಹಾಗೂ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಇಲಾಖೆ ಜೊತೆ ಸಾರ್ವಜನಿಕರು ಪೂರ್ಣ ಸಹಕಾರ ನೀಡಿದರೆ ನಿಯಂತ್ರಣ ಪರಿಣಾಮಕಾರಿ ಆಗುತ್ತದೆ.
ಸಾರ್ವಜನಿಕರು ತಮ್ಮ ಮನೆಗಳು ಹಾಗೂ ಸಿಬ್ಬಂದಿ ವರ್ಗದವರು ಕಚೇರಿಗಳು, ಶಾಲಾ, ಕಾಲೇಜುಗಳಲ್ಲಿ ನೀರು ತುಂಬುವ ಪರಿಕರಗಳನ್ನು ಸ್ವಚ್ಚವಾಗಿ ತೊಳೆದು ಒಣಗಿಸಿ, ಪುನಃ ಭರ್ತಿ ಮಾಡಬೇಕು. ಅವಶ್ಯವಿರುವ ನೀರಿಗೆ ಮುಚ್ಚಬೇಕು. ಈಡಿಸ್ ಸೊಳ್ಳೆ ಶುದ್ದ ನೀರಿನಲ್ಲೇ ಉತ್ಪತ್ತಿಯಾಗುವ ಕಾರಣ ಈ ಎಲ್ಲ ಕ್ರಮಗಳನ್ನು ವಹಿಸಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದ್ದಾರೆ.
ಡಿಹೆಚ್‍ಓ ಡಾ.ನಟರಾಜ್ ಮಾತನಾಡಿ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ನಿರ್ಮೂಲನಾ ದಿನವನ್ನಾಗಿ ಆಚರಿಸುವ ಮೂಲಕ ಜನರಲ್ಲಿ ಇದೊಂದು ದೈನಂದಿನ ಅಭ್ಯಾಸದಂತಾಗಿ ವರ್ತನೆಯಲ್ಲಿ ಶಾಶ್ವತ ಬದಲಾವಣೆ ತರುವ ಉದ್ದೇಶ ಹೊಂದಲಾಗಿದೆ. ಪ್ರತಿಯೊಬ್ಬರೂ ಇಲಾಖೆಯೊಂದಿಗೆ ಸಹಕರಿಸಬೇಕು. ತಮ್ಮ ಮನೆ ಸುತ್ತಮುತ್ತ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು.

ತೊಟ್ಟಿ, ಡ್ರಂ ಇತರೆ ಸಂಗ್ರಹ ಪರಿಕರಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಉಜ್ಜಿ ತೊಳೆದು ಒಣಗಿಸಿ ಮತ್ತೆ ಭರ್ತಿ ಮಾಡಬೇಕು. ಟೈರು, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಇತ್ಯಾದಿಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ವಿಲೇವಾರಿ ಮಾಡಬೇಕು. ಸೊಳ್ಳೆ ನಿರೋಧಕಗಳು ಮತ್ತು ಸೊಳ್ಳೆ ಪರದೆಯನ್ನು ಬಳಸಬೇಕು ಎಂದು ತಿಳಿಸಿದ್ದಾರೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications