ಸೊರಬ: ಕರ್ತವ್ಯದಲ್ಲಿದ್ದಾಗಲೇ ಉಪ ತಹಶೀಲ್ದಾರ್ಗೆ ಹೃದಯಾಘಾತ, ಸಾವು
ಶಿವಮೊಗ್ಗ, ಏಪ್ರಿಲ್ 7: ಹೃದಯಾಘಾತ ಸಂಭವಿಸಿ ಕರ್ತವ್ಯ ನಿರತ ಉಪ ತಹಶೀಲ್ದಾರ ಒಬ್ಬರು ಅಸುನೀಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿ ನಾಡಕಚೇರಿಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಉಪ ತಹಶೀಲ್ದಾರ ಚನ್ನಕೇಶವ (45) ಮೃತರಾಗಿದ್ದು, ಬುಧವಾರ ಮಧ್ಯಾಹ್ನ ಕರ್ತವ್ಯದಲ್ಲಿ ಇರುವಾಗ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಆನವಟ್ಟಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಚನ್ನಕೇಶವ ಅವರು ಕೊನೆಯುಸಿರೆಳೆದಿದ್ದಾರೆ. ಉಪ ತಹಶೀಲ್ದಾರ ಚನ್ನಕೇಶವ ಅವರು ಸಾಗರದ ಶ್ರೀಧರ ನಗರ ನಿವಾಸಿಯಾಗಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

1998ರಲ್ಲಿ ಗ್ರಾಮ ಲೆಕ್ಕಿಗರಾಗಿ ಕಂದಾಯ ಇಲಾಖೆಗೆ ಸೇರ್ಪಡೆಯಾಗಿದ್ದ ಅವರು, ವಿವಿಧ ಹಂತದ ಪದೋನ್ನತಿ ಹೊಂದಿ ಉಪ ತಹಶೀಲ್ದಾರ ಆಗಿದ್ದರು. ಸೊರಬ ಪಟ್ಟಣದ ತಾಲೂಕು ಕಚೇರಿಯಲ್ಲಿ ಶಿರಸ್ತೆದಾರರಾಗಿ ಸಹ ಕರ್ತವ್ಯ ಸಲ್ಲಿಸಿದ್ದರು.

Recommended Video

ಸಂತಾಪ ಸೂಚಿಸಿದ ಶಾಸಕ ಕುಮಾರ್ ಬಂಗಾರಪ್ಪ
ಉಪ ತಹಶೀಲ್ದಾರ ಚನ್ನಕೇಶವ ಅವರ ನಿಧನಕ್ಕೆ ಸೊರಬ ಶಾಸಕ ಎಸ್. ಕುಮಾರ್ ಬಂಗಾರಪ್ಪ, ಸರ್ಕಾರಿ ನೌಕರರ ಸಂಘ, ಕಂದಾಯ ಇಲಾಖೆಯ ನೌಕರರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಯವರು ಸಂತಾಪ ಸೂಚಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications