Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣ, ಮಲೆನಾಡಿನ ಜನಕ್ಕೆ ಶುಭ ಸುದ್ದಿ

ಶಿವಮೊಗ್ಗ, ಅಕ್ಟೋಬರ್ 26: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದ ಜನರಿಗೆ ಡಿಜಿಸಿಎ ಶುಭಸುದ್ದಿಯೊಂದನ್ನು ನೀಡಿದೆ. ಶಿವಮೊಗ್ಗ ಹೊರವಲಯದಲ್ಲಿರುವ ವಿಮಾನ ನಿಲ್ದಾಣದ ಲೈಸೆನ್ಸ್ ಅವಧಿಯನ್ನು ಒಂದು ವರ್ಷದ ಕಾಲ ವಿಸ್ತರಣೆ ಮಾಡಿ ಆದೇಶಿಸಿದೆ. ಕರ್ನಾಟಕ ಸರ್ಕಾರವೇ ನಿರ್ವಹಣೆ ಮಾಡುತ್ತಿರುವ ರಾಜ್ಯದ ಏಕೈಕ ಏರ್‌ಪೋರ್ಟ್ ಎಂಬ ಹೆಗ್ಗಳಿಕೆ ಶಿವಮೊಗ್ಗದ್ದು. ಪ್ರಧಾನಮಂತ್ರಿ ನರೇಂದ್ರ ಮೋದಿ ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿರುವ ವಿಮಾನ ನಿಲ್ದಾಣವನ್ನು 27.02.2023ರಂದು ಲೋಕಾರ್ಪಣೆ ಮಾಡಿದ್ದರು.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಣೆ ಮಾಡಿದೆ. ಈ ಹಿಂದೆ ನೀಡಲಾಗಿದ್ದ ಲೈಸೆನ್ಸ್ ಅವಧಿ ಮಂಗಳವಾರಕ್ಕೆ ಮುಕ್ತಾಯವಾಗಿತ್ತು. ಲೈಸೆನ್ಸ್ ಅವಧಿಯನ್ನು ವಿಸ್ತರಣೆ ಮಾಡಿರುವ ಕುರಿತು ಶಿವಮೊಗ್ಗ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಡಿಜಿಸಿಎ ಮಾಹಿತಿಯನ್ನು ನೀಡಿದೆ.

DGCA Renews Shivamogga Airport Licenses For One Year

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಡಿಜಿಸಿಎ ಲೈಸೆನ್ಸ್ ನೀಡಿದ ಬಳಿಕ 27.02.2023ರಂದು ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಾಗಿತ್ತು. ಲೈಸೆನ್ಸ್ ಅವಧಿ 2024ರ ಆಗಸ್ಟ್ 23ರ ತನಕ ಇತ್ತು. ಬಳಿಕ ಒದೊಂದೆ ತಿಂಗಳು ಲೈಸೆನ್ಸ್ ವಿಸ್ತರಣೆ ಮಾಡುತ್ತಾ ಬರಲಾಗಿತ್ತು. ಲೈಸೆನ್ಸ್ ಅವಧಿ ಪೂರ್ಣಗೊಳ್ಳುತ್ತಿದ್ದಂತೆಯೇ ಡಿಜಿಸಿಎಗೆ ಮನವಿ ಮಾಡಿ ಅದನ್ನು ವಿಸ್ತರಣೆ ಮಾಡಿಕೊಂಡು ಬರಲಾಗುತ್ತಿತ್ತು.

ಒಂದು ವರ್ಷದ ಅವಧಿಗೆ ವಿಸ್ತರಣೆ: ಸೆಪ್ಟೆಂಬರ್‌ನಲ್ಲಿ ಡಿಜಿಸಿಎ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಡಿಜಿಸಿಎ ಮಾರ್ಗಸೂಚಿ ಅನ್ವಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ವಿಮಾನ ನಿಲ್ದಾಣದ ನಿರ್ವಹಣೆ ನೋಡಿಕೊಳ್ಳುವ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮಕ್ಕೆ 20 ಲಕ್ಷ ರೂ. ದಂಡವನ್ನು ವಿಧಿಸಿತ್ತು ಮತ್ತು ವಿಮಾನ ನಿಲ್ದಾಣದ ಲೈಸೆನ್ಸ್ ಅನ್ನು ಅಕ್ಟೋಬರ್ 23ರ ತನಕ ವಿಸ್ತರಣೆ ಮಾಡಿತ್ತು.

ಈಗ ಡಿಜಿಸಿಎ ನಿಯಮಾವಳಿ ಅನ್ವಯ ಸುರಕ್ಷತಾ ಕ್ರಮಗಳನ್ನು ಕೈಗೊಂಡ ಹಿನ್ನಲೆಯಲ್ಲಿ ವಿಮಾನ ನಿಲ್ದಾಣದ ಲೈಸೆನ್ಸ್ ಅನ್ನು 2025ರ ಅಕ್ಟೋಬರ್ 23ರ ತನಕ ವಿಸ್ತರಣೆ ಮಾಡಿದೆ. ಈ ಕುರಿತು ಶಿವಮೊಗ್ಗ ವಿಮಾನ ನಿಲ್ದಾಣ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮಕ್ಕೆ ಮಾಹಿತಿ ನೀಡಲಾಗಿದೆ. ನಿಗಮ ಶಿವಮೊಗ್ಗ ವಿಮಾನ ನಿಲ್ದಾಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳುತ್ತಿದೆ.

ಯಡಿಯೂರಪ್ಪ ಕನಸು: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಬೇಕು. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಯ ಜನರಿಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂಬುದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕನಸು.

2019ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಆಗ ಶಿವಮೊಗ್ಗ ವಿಮಾನ ನಿಲ್ದಾಣ ಯೋಜನೆಗೆ ಇದ್ದ ಅಡೆತಡೆ ನಿವಾರಣೆ ಮಾಡಿ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿದರು. ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿಸುಮಾರು 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣಗೊಂಡಿತು. ಕರ್ನಾಟಕದ ವಿಮಾನ ನಿಲ್ದಾಣಗಳಲ್ಲೇ ಅತಿ ಉದ್ದದ ರನ್ ವೇ ಹೊಂದಿರುವ 3ನೇ ವಿಮಾನ ನಿಲ್ದಾಣ ಇದಾಗಿದೆ.

ಬಿ. ಎಸ್. ಯಡಿಯೂರಪ್ಪ ಹುಟ್ಟುಹಬ್ಬದಂದೇ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಾಯಿತು. 27.02.2023 ವಿಮಾನ ನಿಲ್ದಾಣ ಉದ್ಘಾಟನೆಗೊಂಡಿತು. ಇಂಡಿಗೋ ಏರ್‌ಲೈನ್ಸ್ 31.08.2023ರಿಂದ ಬೆಂಗಳೂರು-ಶಿವಮೊಗ್ಗ ಮಾರ್ಗದಲ್ಲಿ ಮೊದಲು ವಿಮಾನ ಸೇವೆಯನ್ನು ಆರಂಭಿಸಿತು. ಸದ್ಯ ಶಿವಮೊಗ್ಗ ನಗರದಿಂದ ಮೂರು ವಿಮಾನಯಾನ ಸಂಸ್ಥೆಗಳು ವಿವಿಧ ನಗರಕ್ಕೆ ವಿಮಾನ ಸೇವೆಯನ್ನು ನೀಡುತ್ತಿವೆ.

ಏರ್ ಬಸ್ ಮಾದರಿಯ ವಿಮಾನವನ್ನು ಲ್ಯಾಂಡ್ ಮಾಡುವಂತಹ ಸೌಕರ್ಯಗಳನ್ನು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಡಲಾಗುತ್ತಿದೆ. ಹವಾಮಾನ ವೈಪರೀತ್ಯ ಮತ್ತು ರಾತ್ರಿ ವೇಳೆಯೂ ವಿಮಾನವನ್ನು ಲ್ಯಾಂಡ್ ಮಾಡಲು ಸಾಧ್ಯವಾಗುವಂತೆ ವಿಮಾನ ನಿಲ್ದಾಣದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಇದು ಪೂರ್ಣಗೊಂಡರೆ ರಾತ್ರಿ ವೇಳೆಯೂ ನಗರಕ್ಕೆ ವಿಮಾನಗಳು ಆಗಮಿಸಬಹುದು.

ಸದ್ಯ ಶಿವಮೊಗ್ಗ-ಬೆಂಗಳೂರು, ಶಿವಮೊಗ್ಗ-ಗೋವಾ, ಶಿವಮೊಗ್ಗ-ಹೈದರಾಬಾದ್, ಶಿವಮೊಗ್ಗ-ಚೆನ್ನೈ, ಶಿವಮೊಗ್ಗ-ತಿರುಪತಿ ನಡುವೆ ವಿಮಾನಗಳು ಹಾರಾಟವನ್ನು ನಡೆಸುತ್ತಿವೆ. ಶಿವಮೊಗ್ಗ-ಮುಂಬೈ ಮತ್ತು ಶಿವಮೊಗ್ಗ-ದೆಹಲಿ ನಡುವೆ ವಿಮಾನ ಸೇವೆ ಆರಂಭಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+