ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ 21 ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 3: ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕವು ಅಕ್ಟೋಬರ್ 4ರಂದು ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ಸರ್ಕಾರಿ ಪ್ರಾಥಮಿಕ ಶಿಕ್ಷಕರ ಅರ್ಹತಾ ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ನಿರಂತರವಾಗಿ ನಡೆಯುವಂತಾಗಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನುರಾಧ ಜಿ. ತಿಳಿಸಿದರು.

ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಳೆ ಬೆಳಿಗ್ಗೆ 9.30ರಿಂದ 12ರವರೆಗೆ ನಡೆಯುವ ಮೊದಲ ಅಧಿವೇಶನದಲ್ಲಿ 2198 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ 2ರಿಂದ 4.30ರವರೆಗೆ ನಡೆಯುವ ದ್ವಿತೀಯ ಅಧಿವೇಶನದಲ್ಲಿ 5696 ಅಭ್ಯರ್ಥಿಗಳು ಸೇರಿದಂತೆ ಒಟ್ಟು 7894 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಶಿವಮೊಗ್ಗ ಯುವ ವಿಜ್ಞಾನಿಗಳ ಸಂಶೋಧನೆ: 2.45 ಗಂಟೆಯೊಳಗೆ ಕೊರೋನಾ ವೈರಸ್ ನಾಶ!: ಇಲ್ಲಿದೆ ಮಾಹಿತಿಶಿವಮೊಗ್ಗ ಯುವ ವಿಜ್ಞಾನಿಗಳ ಸಂಶೋಧನೆ: 2.45 ಗಂಟೆಯೊಳಗೆ ಕೊರೋನಾ ವೈರಸ್ ನಾಶ!: ಇಲ್ಲಿದೆ ಮಾಹಿತಿ

ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪರೀಕ್ಷಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲು ಉದ್ದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳು ಜನಸಂದಣಿಯಿಂದ ಕೂಡಿರದಂತೆ ನೋಡಿಕೊಳ್ಳಲು ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದ ಅವರು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೊರೊನಾ ಗುಣಲಕ್ಷಣಗಳು ಕಂಡುಬಂದಲ್ಲಿ ಅಥವಾ ಕಂಟೋನ್ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿಯನ್ನು ಸ್ಥಾಪಿಸಲಾಗುವುದು ಎಂದರು.

Shivamogga: District Administration Prepared For TET Exams In 21 Centres

ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪರೀಕ್ಷಾರ್ಥಿಗಳು ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಹೊರಡಿಸಿರುವ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅಗತ್ಯವಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ಕಾಲಕಾಲಕ್ಕೆ ಮಾರ್ಗದರ್ಶನ ನೀಡಲು ಅನುಕೂಲವಾಗುವಂತೆ ಧ್ವನಿವರ್ಧಕ ಬಳಸುವಂತೆ ಸೂಚಿಸಲಾಗಿದೆ ಎಂದರು.

ಉಳಿದಂತೆ ಪರೀಕ್ಷೆಗಳು ನಿರಾಂತಕವಾಗಿ, ಪಾರದರ್ಶಕವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈ ಪರೀಕ್ಷಾ ಕೇಂದ್ರದ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪರೀಕ್ಷಾರ್ಥಿಗಳಲ್ಲದೆ ಇತರೆ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ನಿಷೇದಾಜ್ಞೆ ಹೊರಡಿಸಿದ್ದಾರೆ. ಅಲ್ಲದೇ ಈ ಪ್ರದೇಶದಲ್ಲಿ ಸಾರ್ವಜನಿಕರು ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್, ಜಿಲ್ಲಾ ಖಜಾನಾಧಿಕಾರಿ ಎಚ್.ಎಸ್.ಸಾವಿತ್ರಿ, ಡಯಟ್ ಪ್ರಾಂಶುಪಾಲರಾದ ಸುಮಂಗಳ ಕುಚಿನಾಡ ಸೇರಿದಂತೆ ಪರೀಕ್ಷಾ ಕೇಂದ್ರಗಳ ನೋಡಲ್ ಅಧಿಕಾರಿಗಳು, ನಿಯೋಜಿತ ಅಧಿಕಾರಿ-ಸಿಬ್ಬಂದಿ, ಮಾರ್ಗಾಧಿಕಾರಿಗಳು ಇದ್ದರು.

English summary
Shivamogga District administration prepared well to conduct TET exams in 21 centres on october 4,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X