ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂಗಾರು ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತ ಸಜ್ಜು: ಶಿವಮೊಗ್ಗ ಡಿಸಿ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್ 2: ಮುಂಗಾರಿನ ಅವಧಿಯಲ್ಲಿ ಉಂಟಾಗಬಹುದಾದ ಎಲ್ಲಾ ಸಂಭಾವ್ಯ ಅಪಾಯಗಳನ್ನು ಎದುರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಶಿವಮೊಗ್ಗದ ಪೊಲೀಸ್ ಠಾಣೆ ಸೀಲ್ ಡೌನ್, ಕಾರಣ?ಶಿವಮೊಗ್ಗದ ಪೊಲೀಸ್ ಠಾಣೆ ಸೀಲ್ ಡೌನ್, ಕಾರಣ?

ಕಳೆದ ಮುಂಗಾರು ಅವಧಿಯಲ್ಲಿ ಉಂಟಾಗಿರುವ ಅತಿವೃಷ್ಟಿ ಹಿನ್ನೆಲೆಯಲ್ಲಿ, ಈ ಬಾರಿ ಮೊದಲೇ ಎಲ್ಲಾ ಸಿದ್ಧತೆಗಳನ್ನು ನಡೆಸಬೇಕು. ಜಿಲ್ಲಾಡಳಿತದ ಬಳಿ ಲಭ್ಯವಿರುವ ಬೋಟು, ರಕ್ಷಣಾ ಕವಚಗಳು, ಎಲ್ಲಾ ಸಾಧನ-ಸಲಕರಣೆಗಳನ್ನು ಪರಿಶೀಲಿಸಬೇಕು ಎಂದರು.

District Administration Ready To Face Monsoon Disaster : Shivamogga DC

ಅತಿವೃಷ್ಟಿಯಿಂದ ಹಾನಿಗೊಳಗಾಗುವ ಗ್ರಾಮಗಳನ್ನು ಈಗಲೇ ಗುರುತಿಸಬೇಕು. ತಾಲ್ಲೂಕಿನಲ್ಲಿ ಲಭ್ಯವಿರುವ ರಕ್ಷಣಾ ಸಾಮಾಗ್ರಿ, ಸಲಕರಣೆಗಳ ಪಟ್ಟಿಯನ್ನು ಸಿದ್ಧಪಡಿಸಿ, ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಮಳೆಗೆ ಸುಲಭವಾಗಿ ಕುಸಿಯಬಹುದಾದ ಮನೆ, ಕಟ್ಟಡಗಳನ್ನು ಗುರುತಿಸಿ ತೆರವು ಅಥವಾ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಕೆರೆ ಹೂಳು ತೆಗೆದು, ಮರುಜೀವ ಕೊಟ್ಟು ಮಾದರಿಯಾದ ಗ್ರಾಮಸ್ಥರುಕೆರೆ ಹೂಳು ತೆಗೆದು, ಮರುಜೀವ ಕೊಟ್ಟು ಮಾದರಿಯಾದ ಗ್ರಾಮಸ್ಥರು

ಜಿಲ್ಲಾಡಳಿತದ ವತಿಯಿಂದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ 6 ಬೋಟುಗಳು, 25 ರಕ್ಷಣಾ ಕವಚಗಳು, ಮುರಿದು ಬೀಳುವ ಮರಗಳನ್ನು ತೆರವುಗೊಳಿಸಲು 50 ಟ್ರೀ ಕಟ್ಟರ್ ಗಳನ್ನು ನೀಡಲಾಗಿದೆ. ಇದರೊಂದಿಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಲು ಹಲವಾರು ಸಾಹಸಿ ಸಂಘ ಸಂಸ್ಥೆಗಳು ಮುಂದೆ ಬಂದಿದ್ದು, ಎಲ್ಲರ ಸಹಕಾರವನ್ನು ಪಡೆಯಬೇಕು. ಇದಕ್ಕಾಗಿ ಸಂಘ-ಸಂಸ್ಥೆಗಳ ವಿವರ, ಅವರಲ್ಲಿ ಲಭ್ಯವಿರುವ ರಕ್ಷಣಾ ಸಲಕರಣೆಗಳ ವಿವರಗಳನ್ನು ಪಟ್ಟಿ ಮಾಡಬೇಕು ಎಂದರು.

District Administration Ready To Face Monsoon Disaster : Shivamogga DC

ಪ್ರವಾಹ ನೀರು ಸುಲಭವಾಗಿ ನುಗ್ಗಬಹುದಾದ ತಗ್ಗು ಪ್ರದೇಶದಲ್ಲಿರುವ ಜನರಿಗೆ ಈಗಾಗಲೇ ಸೂಚನೆಗಳನ್ನು ನೀಡಬೇಕು. ಒಂದು ವೇಳೆ ಜನರನ್ನು ತುರ್ತಾಗಿ ಸ್ಥಳಾಂತರಿಸುವ ಸಂದರ್ಭ ಬಂದರೆ ಅವರಿಗೆ ತಾತ್ಕಾಲಿಕ ಪುನರ್ವಸತಿಗಾಗಿ ಎಲ್ಲಾ ತಾಲೂಕುಗಳಲ್ಲಿ ಈಗಲೇ ಗುರುತಿಸಿ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಾಳಿ, ಮಳೆಗೆ ಉರುಳಿ ಬೀಳುವ ವಿದ್ಯುತ್ ಕಂಬಗಳನ್ನು ತಕ್ಷಣ ದುರಸ್ತಿ ಮಾಡಲು ಸಿದ್ದತೆ ಮಾಡಬೇಕು. ಇದಕ್ಕಾಗಿ ಅಗತ್ಯ ಪ್ರಮಾಣದ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳು, ತಂತಿಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಮಳೆಯಿಂದ ಸಾವು-ನೋವುಗಳು ಸಂಭವಿಸದಂತೆ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಹೇಳಿದರು.

ಅತಿವೃಷ್ಟಿ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಕೆರೆಯಲ್ಲಿ ಆಯೋಜಿಸಲಾಗಿರುವ ತರಬೇತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರು ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಮತ್ತಿತರರು ಇದ್ದರು.

English summary
Shivamogga DC KB Shivakumar instructed the officials to take precautions to deal with all possible hazards during the monsoon season.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X