ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಬೇಡ, MSIL ಅಂಗಡಿಗೆ ಅವಕಾಶ ಕೊಡಬೇಡಿ

|
Google Oneindia Kannada News

ಶಿವಮೊಗ್ಗ, ಫೆಬ್ರವರಿ 2: ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮದ್ಯ ಮಾರಾಟಗಾರರು, ಆನ್‌ಲೈನ್‌ ಮೂಲಕ ಮದ್ಯ ಮಾರಾಟ ಮಾಡುವ ಪ್ರಸ್ತಾವನೆಯನ್ನು ಸರ್ಕಾರ ಕೂಡಲೆ ಕೈಬಿಡಬೇಕು ಎಂದು ಒತ್ತಾಯಿಸಿದರು.

ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಭಾರಿ ಗೋಲ್ಮಾಲ್; ರಸ್ತೆ ತಡೆಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಭಾರಿ ಗೋಲ್ಮಾಲ್; ರಸ್ತೆ ತಡೆ

ಐದು ಸಾವಿರ ಅಥವಾ ಅದಕ್ಕಿಂತಲೂ ಹೆಚ್ಚು ಜನಸಂಖ್ಯೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಎಲ್ 6ಎ, ಸಿಎಲ್ 7 ಲೈಸೆನ್ಸ್ ಅನ್ನು ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡುವ ಆದೇಶ ರದ್ದುಪಡಿಸಬೇಕು. ಹೊಸ ಎಂಎಸ್ಐಎಲ್ ಮಳಿಗೆಗಳಿಗೆ ಅವಕಾಶ ನೀಡಬಾರದು. ಕೋವಿಡ್ ಸಂದರ್ಭ ಮದ್ಯ ಮಾರಾಟಗಾರರಿಗೆ ಆಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

Shivamogga: Dont Liquor Sales In Online: Wine Merchants Association

ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟಗಾರರಿಂದ ಲಂಚಕ್ಕಾಗಿ ಗಂಭೀರ ತೊಂದರೆ ನೀಡುತ್ತಿರುವುದನ್ನು ತಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

Shivamogga: Dont Liquor Sales In Online: Wine Merchants Association

ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಸಿ.ಎಂ.ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ಪದಾಧಿಕಾರಿಗಳು, ಮದ್ಯ ಮಾರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

English summary
The Wine Merchants Association staged a protest in Shivamogga demanding that the government abandon its proposal to sell liquor online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X