• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗದ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಚಾಲನೆ

|

ಶಿವಮೊಗ್ಗ, ಫೆಬ್ರವರಿ 15: ಶಿವಮೊಗ್ಗದ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳಿಗೆ ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದರು.

ಶಿವಮೊಗ್ಗ ರೈಲ್ವೆ ನಿಲ್ದಾಣ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಕಡದಕಟ್ಟೆ, ಸೋಮಿನಕೊಪ್ಪ ರೈಲ್ವೆ ಮೇಲ್ಸೇತುವೆಗಳು, ಸವಳಂಗ ರಸ್ತೆಯ ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು.

ರಾಜ್ಯ ಬಜೆಟ್ ಕುರಿತು ಶಿಕಾರಿಪುರದಲ್ಲಿ ಸಿಎಂ ಯಡಿಯೂರಪ್ಪ ಮಹತ್ವದ ಮಾತು!

ಡಬಲ್ ಅಲ್ಲ, ಈಗ ಮೂರು ಎಂಜಿನ್

ಡಬಲ್ ಅಲ್ಲ, ಈಗ ಮೂರು ಎಂಜಿನ್

ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ರಾಘವೇಂದ್ರ ಅವರು ಕರ್ನಾಟಕದ ಅಭಿವೃದ್ಧಿಗೆ ಡಬಲ್ ಎಂಜಿನ್ ಗಳಂತೆ. ಕೇಂದ್ರ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಹಾಗಾಗಿ ರಾಜ್ಯಕ್ಕೆ ಮೂರನೇ ಎಂಜಿನ್ ಸಿಕ್ಕಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್ ಹೇಳಿದರು.

ರಾಘವೇಂದ್ರ ಅವರು ನೇರವಾಗಿ ಕರೆ ಮಾಡಬಹುದು

ರಾಘವೇಂದ್ರ ಅವರು ನೇರವಾಗಿ ಕರೆ ಮಾಡಬಹುದು

ಮೂರು ಮೇಲ್ಸೇತುವೆಗಳು 18 ರಿಂದ 20 ತಿಂಗಳಲ್ಲಿ ಮುಕ್ತಾಯವಾಗಬೇಕು ಎಂದು ಸಂಸದ ರಾಘವೇಂದ್ರ ಹೇಳುತ್ತಿದ್ದಾರೆ. ಆದರೆ ಅದಕ್ಕೂ ಮೊದಲೇ ಮೇಲ್ಸೇತುವೆಗಳು ಮುಕ್ತಾಯವಾಗಬೇಕು. ಒಂದು ವೇಳೆ ತಡವಾದರೆ ರಾಘವೇಂದ್ರ ಅವರು ನೇರವಾಗಿ ತಮಗೆ ಕರೆ ಮಾಡಬಹುದು ಎಂದರು. ಶೀಘ್ರದಲ್ಲೇ ತಾಳಗುಪ್ಪ-ಹುಬ್ಬಳ್ಳಿ ನಡುವೆ ರೈಲ್ವೆ ಮಾರ್ಗದ ಸರ್ವೆ ಕಾರ್ಯ ನಡೆಯಲಿದೆ. ಯೋಜನಾ ವರದಿ ಸಿದ್ಧವಾದ ಬಳಿಕ ಮುಖ್ಯಮಂತ್ರಿ ಅವರೊಂದಿಗೆ ಯೋಜನೆ ಕುರಿತು ಚರ್ಚೆ ನಡೆಸುವುದಾಗಿ ತಿಳಿಸಿದರು.

ರೈಲ್ವೆ ಯೋಜನೆಗೆ 683 ಕೋಟಿ

ರೈಲ್ವೆ ಯೋಜನೆಗೆ 683 ಕೋಟಿ

ಶಿವಮೊಗ್ಗದ ಮೂರು ರೈಲ್ವೆ ಮೇಲ್ಸೇತುವೆಗಳ ನಿರ್ಮಾಣ ಕಾರ್ಯದ ಶೇ.50ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತಿದೆ. ಭೂ ಸ್ವಾಧೀನದ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಈ ಮೂರು ಯೋಜನೆಗಾಗಿ 30.50 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಶಿವಮೊಗ್ಗ–ರಾಣೇಬೆನ್ನೂರು ರೈಲ್ವೆ ಮಾರ್ಗ

ಶಿವಮೊಗ್ಗ–ರಾಣೇಬೆನ್ನೂರು ರೈಲ್ವೆ ಮಾರ್ಗ

ರಾಜ್ಯಾದ್ಯಂತ 46 ಲೆವೆಲ್ ಕ್ರಾಸಿಂಗ್ ಗೇಟ್ ಗಳನ್ನು ತೆರವುಗೊಳಿಸಿ, ರಸ್ತೆ ಮೇಲ್ಸೇತುವೆ ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಈ ಯೋಜನೆಗಳ 683 ಕೋಟಿ ರೂ. ಅನುದಾನ ಒದಗಿಸಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 47 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಸ್ವಾತಂತ್ರ್ಯ ನಂತರ ಶಿವಮೊಗ್ಗ ಜಿಲ್ಲೆಗೆ ಮಂಜೂರಾಗಿರುವ ರೈಲ್ವೆ ಮಾರ್ಗ ಶಿವಮೊಗ್ಗ-ರಾಣೇಬೆನ್ನೂರು ರೈಲ್ವೆ ಮಾರ್ಗ ಎಂದು ತಿಳಿಸಿದರು.

ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಸಂಗಮೇಶ್ವರ್, ಆರಗ ಜ್ಞಾನೇಂದ್ರ, ಕುಮಾರ್ ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಇದ್ದರು.

English summary
Union Railway Minister Piyush Goyal and Chief Minister BS Yediyurappa launched the three railway overpass works in Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X