ಸಾಗರದಲ್ಲಿ ಸಿಲಿಂಡರ್ ಸಾಗಣೆ ಲಾರಿ ಸ್ಫೋಟ, ಚಾಲಕ ಸಜೀವ ದಹನ

ಶಿವಮೊಗ್ಗ, ನವೆಂಬರ್ 15: ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಸ್ಫೋಟಗೊಂಡಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪದ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ, ಲಾರಿಯು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಸಿಲಿಂಡರ್ ಸ್ಫೋಟಗೊಂಡಿದ್ದು, ಚಾಲಕ ಕೃಷ್ಣಮೂರ್ತಿ ಬೆಂಕಿಯಲ್ಲೇ ಬೆಂದು ಹೋಗಿದ್ದಾರೆ. ಕೃಷ್ಣಮೂರ್ತಿ ಭದ್ರಾವತಿಯ ಮಾವಿನಕಟ್ಟೆ ಗ್ರಾಮದವರು ಎನ್ನಲಾಗಿದ್ದು, ಬೆಳಗ್ಗೆ ಸುಮಾರು 4.30ಗೆ ಈ ಘಟನೆ ನಡೆದಿದೆ.

ಇಂಡಿಯನ್ ಗ್ಯಾಸ್ ಕಂಪನಿಗೆ ಸೇರಿದ್ದ ಲಾರಿ ಇದಾಗಿದ್ದು, ಸಾಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Driver live blazes after LPG cylinders filled lorry burnt in fire accident

ಸ್ಫೋಟದಿಂದ ಆ ಮಾರ್ಗದಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು, ಕ್ರಮೇಣವಾಗಿ ಯಥಾಸ್ಥಿತಿಗೆ ಮರಳಿದೆ, ಕೃಷ್ಣಮೂರ್ತಿ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಬೆಳಗಿನ ಜಾವ ಮಂಜುಮುಸುಕಿದ್ದರಿಂದ ಅಥವಾ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಈ ಅನಾಹುತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+