E-Khata: ಇ-ಖಾತಾ ಅಭಿಯಾನ: ಆಸ್ತಿ ಮಾಲೀಕರಿಗೆ ಮಾಹತ್ವದ ಮಾಹಿತಿ

ಶಿವಮೊಗ್ಗ, ಮಾರ್ಚ್‌ 04: ಕರ್ನಾಟಕ ಸರ್ಕಾರ ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಇ-ಖಾತಾ ಅಭಿಯಾನ ಆರಂಭಿಸಿದೆ. ಇ-ಖಾತಾ ಪಡೆಯಲು ಯಾವುದೇ ಗಡುವು ನಿಗದಿ ಮಾಡಿಲ್ಲ. ಆದ್ದರಿಂದ ಜನರು ಯಾವುದೇ ಊಹಾಪೋಹಗಳಿಗೆ ಕಿವಿಗೊಟ್ಟು ಮಧ್ಯವರ್ತಿಗಳಿಂದ ಕಿರುಕುಳ ಅನುಭವಿಸುವುದು ಬೇಡ ಎಂದು ಸರ್ಕಾರ ಹೇಳಿದೆ. ಅಲ್ಲದೇ ಇ-ಆಸ್ತಿ ಅಭಿಯಾನದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಕರೆ ನೀಡಿದೆ.

ಶಿವಮೊಗ್ಗ ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ ಇ-ಆಸ್ತಿ ಅಭಿಯಾನ ಕುರಿತು ಚರ್ಚಿಸಲು ಮಹಾನಗರ ಪಾಲಿಕೆ, ಡಿಯುಡಿಸಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳೊಂದಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಭೆಯನ್ನು ನಡೆಸಿದರು.

E Khata Campaign Direction For Property Owners

ಗುರುದತ್ತ ಹೆಗಡೆ ಮಾತನಾಡಿ, "ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಆಸ್ತಿ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು" ಎಂದು ಹೇಳಿದರು.

ಇ-ಖಾತೆ ಪಡೆಯುವುದು ಹೇಗೆ?; ಕರ್ನಾಟಕ ಪೌರಸಭೆಗಳ ತೆರಿಗೆ ನಿಯಮ 2025 ಮತ್ತು ಕರ್ನಾಟಕ ಮಹಾನಗರಪಾಲಿಕೆ ತೆರಿಗೆ ನಿಯಮ 2025 ಅನ್ನು ಜಾರಿಗೆ ತಂದಿದ್ದು ಇದರಂತೆ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎ-ಖಾತಾ ಮತ್ತು ಬಿ-ಖಾತೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ದಿನಾಂಕ 10-09-2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿವೇಶನ/ ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಲಿದ್ದು ಇಂತಹ ಪ್ರಕರಣಗಳ ವ್ಯಾಪ್ತಿಗೆ ಬರುವ ಆಸ್ತಿ ಮಾಲೀಕರು ತಮ್ಮ ವ್ಯಾಪ್ತಿಯ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ನಿಗದಿತ ದಾಖಲೆಗಳನ್ನು ಸಲ್ಲಿಸಿ ಇ-ಖಾತೆಗಳನ್ನು ಪಡೆಯಬಹುದು.

ಇ-ಖಾತೆ ಮಾಡಿಸುವಲ್ಲಿ ಇಸಿ ಪಡೆಯಲು ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿರುವುದು ಕಂಡು ಬಂದಿದೆ. ಆದ್ದರಿಂದ ಇಸಿಗೆ ಅರ್ಜಿ ಸಲ್ಲಿಸಿದ 3 ದಿನಗಳ ಒಳಗೆ ಹಾಗೂ ಗರಿಷ್ಟ 1 ವಾರದೊಳಗೆ ಇಸಿ ನೀಡಬೇಕು ಹಾಗೂ ಆಸ್ತಿ ಮಾಲೀಕರ ವ್ಯವಹಾರದ ನಂತರದ ಒಂದು ವರ್ಷದ ಇಸಿ ಹಾಗೂ ಆನ್‌ಲೈನ್ ಇಸಿ ಯನ್ನು ಪರಿಗಣಿಸುವಂತೆ ತಿಳಿಸಿದ ಅವರು ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡದೇ, ಇಸಿ ಪಡೆಯಲು ಸಮರ್ಪಕವಾಗಿ ಮಾಹಿತಿಯನ್ನು ಮಾಲೀಕರಿಗೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

ಈ ವಿಷಯದಲ್ಲಿ ಯಾವುದೇ ದೂರುಗಳು ಬಾರದಂತೆ ಎಚ್ಚರಿಕೆ ವಹಿಸಿ, ಇ-ಖಾತಾ ಅಭಿಯಾನವನ್ನು ಸಕ್ರಿಯವಾಗಿ ಕೈಗೊಳ್ಳಬೇಕು. ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಂಡು ಸಾರ್ವಜನಿಕರಿಗೆ ಉತ್ತಮವಾಗಿ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಎ-ಖಾತೆ, ಬಿ-ಖಾತೆ ಪಡೆಯುವ ಕುರಿತು ಜನದಟ್ಟಣೆ ಇರುವ ಕಡೆ ಫ್ಲೆಕ್ಸ್, ಹೋರ್ಡಿಂಗ್‌, ಕಸದ ವಾಹನದಲ್ಲಿ ಜಿಂಗಲ್ಸ್, ಆಟೋ ಪ್ರಚಾರ, ಕರಪತ್ರಗಳ ಮೂಲಕ ವ್ಯಾಪಕವಾಗಿ ಪ್ರಚಾರ ನೀಡಬೇಕು. ಹಾಗೂ ಸಹಾಯವಾಣಿ ಮೂಲಕ ಇ-ಖಾತೆ ಪಡೆಯಲು ಮಾಲೀಕರಿಗೆ ಸಹಕರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಪಟ್ಟಣ ಪಂಚಾಯಿತಿ ವ್ಯಾಪ್ತಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನಾಂಕ 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಟ್ಟಣ ಪಂಚಾಯಿತಿ ಕಛೇರಿಯನ್ನು ಸಂಪರ್ಕಿಸಬಹುದು.

ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೋಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ ಅಗತ್ಯವಿದೆ.

ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸಬೇಕು.

ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿನಾಂಕ 10/09/2024ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸಬೇಕು. ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+