Get Updates
Get notified of breaking news, exclusive insights, and must-see stories!

ಶಿವಮೊಗ್ಗ: ಕಾಂಗ್ರೆಸ್ ನಾಯಕ ಆರ್. ಎಂ. ಮಂಜುನಾಥ ಗೌಡ ಬಂಧಿಸಿದ ಇಡಿ

ಶಿವಮೊಗ್ಗ, ಏಪ್ರಿಲ್ 10: ತೀರ್ಥಹಳ್ಳಿಯ ಕಾಂಗ್ರೆಸ್ ನಾಯಕ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ. ಮಂಜುನಾಥ ಗೌಡರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಸುಮಾರು 62 ಕೋಟಿ ರೂ.ಗಳ ನಕಲಿ ಚಿನ್ನ ಅಡವಿಟ್ಟು ಸಾಲ ಪಡೆದ ವಂಚನೆ ಪ್ರಕರಣದಲ್ಲಿ ಬಂಧನವಾಗಿದೆ. ಮಂಗಳವಾರ ಈ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ, ಶಿವಮೊಗ್ಗ ಸೇರಿ ಹಲವು ಕಡೆ ದಾಳಿಯನ್ನು ಮಾಡಿತ್ತು.

ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ಬುಧವಾರ ವಿಚಾರಣೆಗೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ. ಮಂಜುನಾಥ ಗೌಡ ಹಾಜರಾಗಿದ್ದರು. ಅವರ ವಿಚಾರಣೆ ಬಳಿಕ ಬಂಧಿಸಿದ ಇಡಿ ಅಧಿಕಾರಿಗಳು ಕೋರ್ಟ್‌ಗೆ ಹಾಜರುಪಡಿಸಿ 14 ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಗುರುವಾರದಿಂದ ಪ್ರಕರಣದ ಇಡಿ ತನಿಖೆ ಚುರುಕಾಗಲಿದೆ.

ED Arrested Shivamogga DCC Bank President RM Manjunath Gowda

2014ರಲ್ಲಿ ಶಿವಮೊಗ್ಗ ನಗರದ ಗಾಂಧಿ ಬಜಾರ್‌ನಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಕಲಿ ಚಿನ್ನ ಅಡವಿಟ್ಟು ಸುಮಾರು 62 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣದ ಕುರಿತು ಇಡಿ ತನಿಖೆ ಕೈಗೊಂಡಿದ್ದು, ಬ್ಯಾಂಕ್‌ನ ನಿವೃತ್ತ ಮ್ಯಾನೇಜರ್, ನಿರ್ದೇಶಕರ ಮನೆ ಮೇಲೆ ಸಹ ದಾಳಿ ಮಾಡಿ ಪರಿಶೀಲನೆ ಮಾಡಲಾಗಿತ್ತು.

ಮಂಗಳವಾರ ಶಿವಮೊಗ್ಗದ ಡಿಸಿಸಿ ಬ್ಯಾಂಕ್, ಆರ್. ಎಂ. ಮಂಜುನಾಥ ಗೌಡ ಮತ್ತು ಅವರ ಆತ್ಮೀಕರ ಮನೆ ಮೇಲೆ ಇಡಿ ದಾಳಿ ಮಾಡಿತ್ತು. ಮಂಜುನಾಥ ಗೌಡರನ್ನು ಚಾಮರಾಜಪೇಟೆಯಲ್ಲಿ ವಿಚಾರಣೆ ನಡೆಸಿತ್ತು. ಆದರೆ ಬುಧವಾರ ಇಡಿ ಕಚೇರಿಯಲ್ಲಿ ವಿಚಾರಣೆ ಬಳಿಕ ಬಂಧಿಸಿದೆ. ಈ ಪ್ರಕರಣದಲ್ಲಿ ಈ ಹಿಂದೆಯೂ ಎಸಿಬಿ ಮಂಜುನಾಥ ಗೌಡರನ್ನು ಬಂಧಿಸಿತ್ತು.

ಕಾಂಗ್ರೆಸ್ ನಾಯಕ ಮಂಜುನಾಥ ಗೌಡ: ತೀರ್ಥಹಳ್ಳಿ ಮೂಲದ ಆರ್. ಎಂ. ಮಂಜುನಾಥ ಗೌಡ ಕಾಂಗ್ರೆಸ್ ನಾಯಕ. ಈ ಹಿಂದೆ ಜೆಡಿಎಸ್, ಕೆಜೆಪಿ ಪಕ್ಷದಲ್ಲಿಯೂ ಅವರು ಇದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಆರ್. ಎಂ. ಮಂಜುನಾಥ ಗೌಡ ತೀರ್ಥಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು 40,127 ಮತ ಪಡೆದು ಬಿಜೆಪಿಯ ಆರಗ ಜ್ಞಾನೇಂದ್ರ ವಿರುದ್ಧ ಸೋಲು ಕಂಡಿದ್ದರು.

2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಆರ್. ಎಂ. ಮಂಜುನಾಥ ಗೌಡ ತೀರ್ಥಹಳ್ಳಿಯಲ್ಲಿ ಕಣಕ್ಕಿಳಿದು 35,817 ಮತಗಳನ್ನು ಪಡೆದು ಕಾಂಗ್ರೆಸ್‌ನ ಕಿಮ್ಮನೆ ರತ್ನಾಕರ್ ವಿರುದ್ಧ ಸೋಲು ಕಂಡಿದ್ದರು. 2021ರಲ್ಲಿ ಆರ್. ಎಂ. ಮಂಜುನಾಥ ಗೌಡ ಕಾಂಗ್ರೆಸ್ ಸೇರಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಪಾಲಾಗಿತ್ತು. ಆದರೆ ಅವರು ಸಹ ಸೋಲು ಕಂಡಿದ್ದರು.

ಗಾಂಧಿ ಬಜಾರ್‌ನಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಕಲಿ ಚಿನ್ನ ಅಡವಿಟ್ಟು ಸಾಲ ಪಡೆದ ಪ್ರಕರಣದಲ್ಲಿ ಆರ್. ಎಂ. ಮಂಜುನಾಥ ಗೌಡ ಪ್ರಮುಖ ಆರೋಪಿ. ಈ ಪ್ರಕರಣದಲ್ಲಿ ಈಗಾಗಲೇ ಅವರು ತನಿಖೆ ಎದುರಿಸಿ, ಜೈಲು ಸಹ ನೋಡಿ ಬಂದಿದ್ದಾರೆ. ಇದೇ ಪ್ರಕರಣದಲ್ಲಿ ಮತ್ತೆ ಈಗ ಇಡಿ ಅವರಿಗೆ ಸಂಕಷ್ಟವನ್ನು ತಂದಿದೆ.

ವಂಚನೆ ಪ್ರಕರಣದ ಬಗ್ಗೆ ಮೊದಲು ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಎಸಿಬಿ ತನಿಖೆ ನಡೆದಿತ್ತು. ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದಾಗ ಮಂಜುನಾಥ ಗೌಡ ಹೆಸರು ಕೈ ಬಿಡಲಾಗಿತ್ತು. ಇಡಿ ಸಹ ಇಸಿಐಆರ್ ದಾಖಲಿಸಿಕೊಂಡು ಈ ಬಹುಕೋಟಿ ರೂ. ವಂಚನೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿತ್ತು. ಮಂಜುನಾಥ್ ಗೌಡರಿಗೆ ವಿಚಾರಣೆಗೆ ಬರುವಂತೆ ಸಮನ್ಸ್ ಜಾರಿಗೊಳಿಸಿತ್ತು.

ಇಡಿ ಸಮನ್ಸ್ ಪ್ರಶ್ನಿಸಿ ಮಂಜುನಾಥ್ ಗೌಡರು ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದರು. ಮಾರ್ಚ್‌ನಲ್ಲಿ ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಆದ್ದರಿಂದ ಇಡಿ ತನಿಖೆಗೆ ಇದ್ದ ತಡೆ ತೆರವಾಗಿತ್ತು. ಮಂಗಳವಾರ ಈ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಇಡಿ ಹಲವು ಕಡೆ ದಾಳಿ ಮಾಡಿತ್ತು. ಬುಧವಾರ ಮಂಜುನಾಥ ಗೌಡ ಬಂಧಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+