Get Updates
Get notified of breaking news, exclusive insights, and must-see stories!

Shikaripura: ಶಿಕಾರಿಪುರದಲ್ಲಿ ಬಿವೈ ವಿಜಯೇಂದ್ರ, ನಾಗರಾಜಗೌಡ ನಡುವೆ ಭಾರೀ ಪೈಪೋಟಿ

ಶಿವಮೊಗ್ಗ, ಮೇ 13: ಶಿವಮೊಗ್ಗದ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ವಿಜಯೇಂದ್ರ ಮತ್ತು ಪಕ್ಷೇತರರಾಗಿ ಸ್ಪರ್ಧಿಸಿರುವ ನಾಗರಾಜ ಗೌಡ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಕೇವಲ ಒಂದೂವರೆ, ಎರಡು ಸಾವಿರ ಮತಗಳ ಅಂತರದಲ್ಲಿ ಮುನ್ನಡೆ, ಹಿನ್ನಡೆಯಲ್ಲಿ ಇಬ್ಬರು ಇದ್ದು, ಶಿಕಾರಿಪುರದಲ್ಲಿ ಯಾರು ಗೆಲುವು ಸಾಧಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ಚುನಾವಣಾ ಆಯೋಗದ ಮಾಹಿತಿಯಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ 10.50ರ ಸುಮಾರಿಗೆ 19936 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿರುವ ನಾಗರಾಜ ಗೌಡ ವಿರುದ್ಧ 15603 ಮತಗಳನ್ನು ಪಡೆದಿದ್ದಾರೆ.

Election Result 2023

9 ಗಂಟೆ ಸುಮಾರಿಗೆ ಪಕ್ಷೇತರ ಅಭ್ಯರ್ಥಿ ನಾಗರಾಜ ಗೌಡ ಮುನ್ನಡೆ ಸಾಧಿಸಿದ್ದರು, ಬಳಿಕ ಬಿವೈ ವಿಜಯೇಂದ್ರ ಮುನ್ನಡೆಯನ್ನು ಗಳಿಸಿದ್ದು, ಹಿಂದೆ ನೋಡಿಲ್ಲ. ಈವರೆಗೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಕೇವಲ 1320 ಮತಗಳನ್ನಷ್ಟೇ ಪಡೆದುಕೊಂಡಿದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ ಒಟ್ಟು ಹತ್ತು ಅಭ್ಯರ್ಥಿಗಳು ಕಣದಲ್ಲಿದ್ದು, ಸದ್ಯಕ್ಕೆ ಬಿಜೆಪಿಯ ವಿಜಯೇಂದ್ರ ಮತ್ತು ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ನಡುವೆ ತೀವ್ರ ಪೈಪೋಟಿ ಕಾಣಿಸುತ್ತಿದೆ.

ಶಿವಶರಣರ ನಾಡು, ಹಲವು ಐತಿಹಾಸಿಕ ತಾಣಗಳ ಬೀಡು ಶಿಕಾರಿಪುರ ವಿಧಾನಸಭಾ ಕ್ಷೇತ್ರ ರಾಜ್ಯ ರಾಜಕೀಯದಲ್ಲಿ ಪ್ರತಿಷ್ಠಿತ ಕ್ಷೇತ್ರವೆನಿಸಿಕೊಂಡಿದೆ. ಶಿಕಾರಿಪುರ 40 ವರ್ಷಗಳಲ್ಲಿ ಒಮ್ಮೆ ಹೊರತಾಗಿ ನಿರಂತರವಾಗಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಕುಟುಂಬದ ಹಿಡಿತದಲ್ಲೇ ಇದೆ. ರಾಜ್ಯದಲ್ಲಿ ಅತಿಹೆಚ್ಚು ನಾಲ್ಕು ಬಾರಿ ಮುಖ್ಯಮಂತ್ರಿಯಾಗುವ ಅವಕಾಶವನ್ನು ಕ್ಷೇತ್ರದ ಮತದಾರರು ಯಡಿಯೂರಪ್ಪರಿಗೆ ನೀಡಿದ್ದಾರೆ.

Election Result 2023

ಎಂಟು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ ಪ್ರತಿಪಕ್ಷದ ನಾಯಕ, ನಾಲ್ಕು ಬಾರಿ ಮುಖ್ಯಮಂತ್ರಿ, ಹಣಕಾಸು ಸೇರಿದಂತೆ ವಿವಿಧ ಇಲಾಖೆಗಳ ಸಚಿವರೂ ಆಗಿದ್ದ ಯಡಿಯೂರಪ್ಪ ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಹಿರಿಯ ಪುತ್ರ ಬಿ.ವೈ.ರಾಘವೇಂದ್ರರಿಗೆ ರಾಜಕೀಯ ಭದ್ರ ಅಡಿಪಾಯ ಹಾಕಿಕೊಟ್ಟ ಬಿಎಸ್‌ವೈ ಕಿರಿಯ ಪುತ್ರ ಬಿ.ವೈ.ವಿಜಯೇಂದ್ರರನ್ನು ಶಾಸಕ ಮಾಡಬೇಕೆಂಬ ದೊಡ್ಡ ಆಕಾಂಕ್ಷೆ ಹೊಂದಿದ್ದಾರೆ.

ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರರನ್ನು ಕಣಕ್ಕಿಳಿಸಿದ್ದಾರೆ. ನಾಲ್ಕು ದಶಕಗಳಲ್ಲಿ ಇದೇ ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಯಡಿಯೂರಪ್ಪ ಅವರಿಲ್ಲದೆ ಚುನಾವಣೆ ನಡೆಯುತ್ತಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ವಿರುದ್ಧ 35,000 ಮತಗಳಿಂದ ಸೋತಿದ್ದ ಗೋಣಿ ಮಾಲತೇಶ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಕಾಂಗ್ರೆಸ್ ಬಂಡಾಯ ಎಸ್‌ಪಿ ನಾಗರಾಜ ಗೌಡ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಇನ್ನೂ ಹಿಂದಿನ ಚುನಾವಣೆಯ ಲೆಕ್ಕಾಚಾರಗಳನ್ನು ನೊಡುವುದಾದರೆ- 2018ರಲ್ಲಿ ಬಿಜೆಪಿಯಿಂದ ಬಿಎಸ್ ಯಡಿಯೂರಪ್ಪ ಸ್ಪರ್ಧೆ ಮಾಡುವ ಮೂಲಕ 86,983 ಮತಗಳನ್ನು ಪಡೆಯುವ ಮೂಲಕ ಗೆದ್ದು ಬೀಗಿದ್ದರು. ಕಾಂಗ್ರೆಸ್ ಅಭ್ಯರ್ಥಿ ಜಿ ಬಿ ಮಾಲತೇಶ್ ಅವರು 51,586 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕಿಳಿದರು.

ವಿಶೇಷವೆಂದರೆ ಯಡಿಯೂರಪ್ಪ ಅವರು ಬಿಜೆಪಿ ವಿರುದ್ಧ ಮುನಿಸಿಕೊಂಡು ಕೆಜೆಪಿ ಕಟ್ಟಿದಾಗಲೂ ಮತದಾರರು ಅವರ ಕೈ ಹಿಡಿದಿದ್ದರು. 2013ರ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಕೆಜೆಪಿ ಪಕ್ಷದಿಂದ 69,126 ಮತಗಳನ್ನು ಪಡೆಯುವ ಮೂಲಕ ಗೆದ್ದರೆ ಕಾಂಗ್ರೆಸ್‌ನ ಎಚ್.ಎಸ್.ಶಾಂತವೀರಪ್ಪ ಗೌಡ ಅವರು 44,701 ಮತಗಳನ್ನು ಪಡೆಯುವ ಮೂಲಕ ಸೋಲನ್ನು ಅನುಭವಿಸಿದ್ದರು.

ಜೊತೆಗೆ 2008ರಲ್ಲೂ ಬಿ.ಎಸ್.ಯಡಿಯೂರಪ್ಪ 83,491 ಮತಗಳನ್ನು ಪಡೆಯುವ ಮೂಲಕ ಎಸ್‌ಪಿ ಅಭ್ಯರ್ಥಿ ಎಸ್.ಬಂಗಾರಪ್ಪ ಅವರನ್ನು ಸೋಲಿಸಿದ್ದರು. 2004ರ ವಿಧಾನಸಭಾ ಚುನಾವಣೆಯಲ್ಲೂ ಬಿ.ಎಸ್.ಯಡಿಯೂರಪ್ಪ 64,972 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಈ ವೇಳೆ ಕಾಂಗ್ರೆಸ್‌ ಕೆ.ಶೇಖರಪ್ಪ 45,019 ಮತಗಳನ್ನು ಪಡೆಯುವ ಮೂಲಕ ಸೋಲನ್ನು ಅನುಭವಿಸಿದ್ದರು.

ಈ ಹಿಂದೆ ಬಿ.ವೈ. ವಿಜಯೇಂದ್ರ, "2004ರ ಚುನಾವಣೆ ಸಂದರ್ಭದಲ್ಲಿ ಯಾರು ಅಭ್ಯರ್ಥಿಯೆಂಬುದೇ ಗೊತ್ತಿರಲಿಲ್ಲ. ಅಂತಹ ಸಂದರ್ಭದಲ್ಲಿ ನಮ್ಮ ಶಿಕಾರಿಪುರದ ಸ್ವಾಭಿಮಾನಿ ಮತದಾರರು 46 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಬಿ.ಎಸ್. ಯಡಿಯೂರಪ್ಪರನ್ನು ಗೆಲ್ಲಿಸಿದ್ದರು. ನಾನು ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+