ಸಮ್ಮಿಶ್ರ ಸರ್ಕಾರವನ್ನು ಸ್ಮಶಾನಕ್ಕೆ ಕಳಿಸುತ್ತೇವೆ: ಕೆ.ಎಸ್. ಈಶ್ವರಪ್ಪ
Recommended Video

ಶಿವಮೊಗ್ಗ, ಸೆಪ್ಟೆಂಬರ್ 21: ರಾಜ್ಯದಲ್ಲಿ ಗೂಂಡಾ ಸರ್ಕಾರ ಅಸ್ತಿತ್ವದಲ್ಲಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಗೂಂಡಾಗಳಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಕರೆತರಲು ಆಮಿಷವೊಡ್ಡಲಾಗುತ್ತಿದೆ ಎಂಬ ಸುಳ್ಳು ಆರೋಪ ಮಾಡಿ ಯಡಿಯೂರಪ್ಪ ಅವರ ನಿವಾಸದ ಎದುರು ಉದ್ದೇಶಪೂರ್ವಕವಾಗಿ ಗಲಾಟೆ ನಡೆಸಲಾಗಿದೆ.
ಸಮ್ಮಿಶ್ರ ಸರ್ಕಾರವನ್ನು ಸ್ಮಶಾನಕ್ಕೆ ಕಳುಹಿಸಿ ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡ್ತೀವಿ ಎಂದು ಈಶ್ವರಪ್ಪ ಹೇಳಿದರು.

ಗುರುವಾರ ಕೂಡ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಈಶ್ವರಪ್ಪ, ಕುಮಾರಸ್ವಾಮಿ ಜಗತ್ತಿನ ಅತಿ ದುಷ್ಟ ಮುಖ್ಯಮಂತ್ರಿ ಎಂದು ಟೀಕಿಸಿದ್ದರು.
ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಜನರಿಗೆ ದಂಗೆ ಏಳಿ ಎಂದು ಕರೆ ನೀಡಿದ್ದಾರೆ. ಅವರು ಕ್ರೂರ ಮುಖ್ಯಮಂತ್ರಿ. ಬಿಜೆಪಿ ಜತೆ ಸರ್ಕಾರ ರಚಿಸಿದಾಗ 20 ತಿಂಗಳು ಅಧಿಕಾರದಲ್ಲಿ ಇದ್ದರು. ಈಗ ಮುಖ್ಯಮಂತ್ರಿಯಾಗಿ ಮೂರು ತಿಂಗಳಿನಲ್ಲಿಯೇ ಆ ಸ್ಥಾನದ ಗೌರವ ಹಾಳು ಮಾಡಿದ್ದಾರೆ. ಅವರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಅವರು ಕೂಡಲೇ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದ್ದರು.












Click it and Unblock the Notifications