ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಗೆ ಆಗಮಿಸುವಂತೆ ಕಾಂಗ್ರೆಸ್ ಶಾಸಕರಿಗೆ ಆಹ್ವಾನ ನೀಡಿದ ಈಶ್ವರಪ್ಪ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್.07 : ಸಚಿವ ಸಂಪುಟ ರಚನೆ ಬಳಿಕ ಕಾಂಗ್ರೆಸ್ ಶಾಸಕರು ತಮ್ಮ ಪಕ್ಷದ ಬಗ್ಗೆ ನಿರಾಶೆ ಹೊಂದಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಡಿಯೂರಪ್ಪ ಬಹುಮತ ಸಾಬೀತುಪಡಿಸಬೇಕು. ನಾವು ನಿಮ್ಮ ಜೊತೆ ಇದ್ದೇವೆ ಎಂದು ಕೆಲ‌ ಕಾಂಗ್ರೆಸ್ ಶಾಸಕರು ಹೇಳಿದ್ದರು. ಆದರೆ ಅಂದು ಅವರನ್ನು ಬಂಧನದಲ್ಲಿಡಲಾಗಿತ್ತು. ಈಗ ಆ ಶಾಸಕರ ಆಕ್ರೋಶ ಭುಗಿಲೆದ್ದಿದೆ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ಸಮಯ ಅಸಮಾಧಾನ ಸಾಮಾನ್ಯ: ಕುಮಾರಸ್ವಾಮಿಸಂಪುಟ ವಿಸ್ತರಣೆ ಸಮಯ ಅಸಮಾಧಾನ ಸಾಮಾನ್ಯ: ಕುಮಾರಸ್ವಾಮಿ

ಇದೀಗ ಕಾಂಗ್ರೆಸ್ ಪಕ್ಷ ಬೆತ್ತಲಾಗಿದೆ. ಕಾಂಗ್ರೆಸ್ ಬಗ್ಗೆ ನಿರಾಸೆ ಹೊಂದಿರುವುದಾಗಿ ಶಾಸಕರು ನೇರವಾಗಿ ಹೇಳುತ್ತಿದ್ದಾರೆ. ಮುಂದೇನು ಮಾಡಬೇಕು ಎಂಬ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂಬ ಕಾರಣಕ್ಕೆ ಶಾಸಕರು ನಿರಾಶರಾಗಿಲ್ಲ . ಬದಲಾಗಿ ಕಾಂಗ್ರೆಸ್ ಪಕ್ಷದ ನಡೆಯಿಂದ ಬೇಸರಗೊಂಡಿದ್ದಾರೆ.

Eshwarappa says Congress MLAs disappointed

ಹೀಗೆ ಬೇಸರಗೊಂಡಿರುವ ಕಾಂಗ್ರೆಸ್ ಶಾಸಕರು ರಾಷ್ಟ್ರ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಮೋದಿ ಆಡಳಿತ ಮೆಚ್ಚಿ ಬಿಜೆಪಿಗೆ ಆಗಮಿಸುವಂತೆ ಕೆ.ಎಸ್. ಈಶ್ವರಪ್ಪ ಆಹ್ವಾನ ನೀಡಿದರು.

English summary
MLA K S Eshwarappa said Congress MLAs disappointed with their party after cabinet formation. MLAs are saying directly about the Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X