• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ DRDO ಸಂಶೋಧನಾ ಕೇಂದ್ರ: ಉನ್ನತ ವಿಜ್ಞಾನಿಗಳ ತಂಡ ಭೇಟಿ

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಸೆಪ್ಟೆಂಬರ್ 30: ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ DRDO ಸಂಶೋಧನಾ ಕೇಂದ್ರ ಸ್ಥಾಪನೆಗೆ ಪ್ರಯತ್ನಗಳು ನಡೆದಿದ್ದು, ಈ ಕುರಿತು ಹಿರಿಯ ವಿಜ್ಞಾನಿಗಳ ತಂಡ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಸಹ್ಯಾದ್ರಿ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಆರಂಭಿಸುವ ಬಗ್ಗೆ ರಕ್ಷಣಾ ಸಚಿವರು ಈಗಾಗಲೇ ಸಮ್ಮತಿ ಸೂಚಿಸಿದ್ದು, ಪ್ರಾಥಮಿಕ ಪ್ರಕ್ರಿಯೆಗಳು ಆರಂಭವಾಗಿದೆ. ಈ ಸಂಬಂಧ ಉನ್ನತ ಮಟ್ಟದ ವಿಜ್ಞಾನಿಗಳನ್ನೊಳಗೊಂಡ ತಪಾಸಣಾ ತಂಡವು, ಇಂದು ಕುವೆಂಪು ವಿಶ್ವವಿದ್ಯಾಲಯ ಮತ್ತು ಸಹ್ಯಾದ್ರಿ ಕಾಲೇಜಿಗೆ ಭೇಟಿ ನೀಡಿ, ಅಲ್ಲಿರುವ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದೆ.

ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 120 ಕಿ.ಮೀ ಉದ್ದದ ಸೈಕಲ್ ಲೇನ್

ಈ ಕುರಿತು ಮಂಜೂರಾತಿ ನೀಡುವ ಸಂಬಂಧ ಅಗತ್ಯ ಶಿಫಾರಸ್ಸನ್ನು ಮಾಡಲಿದೆ. ಇನ್ನು ಇದಕ್ಕೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದ್ದು, ಇದರ ಯೋಜನಾ ವೆಚ್ಚ 30 ಕೋಟಿ ರೂ. ಎಂದು ಅಂದಾಜಿಸಿದ್ದು, ಇದರ ಸಂಪೂರ್ಣ ಯೋಜನಾ ವೆಚ್ಚವನ್ನು ಕೇಂದ್ರ ಸರ್ಕಾರ ಒದಗಿಸಲಿದೆ.

ಸಂಶೋಧನಾ ಕೇಂದ್ರವು ಪ್ರಾರಂಭವಾಗುವುದರಿಂದ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ. ಸಂಶೋಧನಾ ಕೇಂದ್ರ ಆರಂಭಕ್ಕೆ ಸಂಬಂಧಿಸಿದಂತೆ DRDO ಅಧ್ಯಕ್ಷ ಡಾ.ಕೆ ಪಾಠಕ್ ಸೇರಿದಂತೆ ಉನ್ನತ ಅಧಿಕಾರಿಗಳ ತಂಡದೊಂದಿಗೆ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರು ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ.ವೀರಭದ್ರಪ್ಪ, ಕುಲಸಚಿವರಾದ ಡಾ.ಎಸ್.ಎಸ್ ಪಾಟೀಲ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್ ಮತ್ತಿತರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.

English summary
The DRDO Research Center is being try to established at Sahyadri College, Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X