ಕಾಂಗ್ರೆಸ್‌ನಲ್ಲಿ ಜಾತಿಗೊಬ್ಬರು ಸಿಎಂ ರೇಸ್‌ನಲ್ಲಿದ್ದಾರೆ; ಈಶ್ವರಪ್ಪ
ಶಿವಮೊಗ್ಗ, ಜುಲೈ 04; "ಕಾಂಗ್ರೆಸ್ ಪಕ್ಷದಲ್ಲಿ ಪಂಚ ಕೌರವರಿದ್ದಾರೆ. ಜಾತಿಗೊಬ್ಬರು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿದ್ದಾರೆ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಭಾನುವಾರ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರಿಣಿ ಸಭೆಯಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಯ ಬಡಿದಾಟ ನಡೆಯುತ್ತಿದೆ" ಎಂದು ಆರೋಪಿಸಿದರು.
"ಸಮಾಜವಾದ, ಸಾಮಾಜಿಕ ನ್ಯಾಯದ ವಿಚಾರವನ್ನು ಸಿದ್ದರಾಮಯ್ಯ ಬಾಯಿ ಮಾತಿಗೆ ಹೇಳುತ್ತಾರೆ. ಅವರು ಕೂಡ ಸಿಎಂ ರೇಸ್‌ನಲ್ಲಿದ್ದಾರೆ. ವ್ಯಕ್ತಿ ಪೂಜೆ ಮಾಡಬಾರದು ಎಂದು ಡಿ. ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ಚಾಮರಾಜನಗರದ ಕಾರ್ಯಕರ್ತರಿಂದ ತಾವೇ ಮುಂದಿನ ಸಿಎಂ ಎಂದು ಘೋಷಣೆ ಕೂಗಿಸಿಕೊಳ್ಳುತ್ತಾರೆ" ಎಂದು ಲೇವಡಿ ಮಾಡಿದರು.

"ದಲಿತ ಸಿಎಂ ಎಂದು ಡಾ. ಜಿ. ಪರಮೇಶ್ವರ, ಅಲ್ಪಸಂಖ್ಯಾತ ಸಿಎಂ ಎಂದು ತನ್ವೀರ್ ಸೇಠ್ ಸೇರಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಜಾತಿಗೊಬ್ಬರು ಸಿಎಂ ರೇಸ್‌ನಲ್ಲಿದ್ದಾರೆ" ಎಂದು ಈಶ್ವರಪ್ಪ ಹೇಳಿದರು.
ಸಂಘಟನೆ ವಿಚಾರದ ಮಹತ್ವದ ಚರ್ಚೆ; ಬಿಜೆಪಿ ಪಕ್ಷ ಸಂಘಟನೆ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಸಂಸದ ಬಿ. ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ. ಡಿ. ಮೇಘರಾಜ್ ಮುಂತಾದವರು ಪಾಲ್ಗೊಂಡಿದ್ದರು.












Click it and Unblock the Notifications