ಶಿವಮೊಗ್ಗ : ಸಾಗರದಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ಶಿವಮೊಗ್ಗ, ಫೆ. 23 : ಮಕ್ಕಳಿಬ್ಬರನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಸಾಗರದಲ್ಲಿ ನಡೆದಿದೆ. ಸಾಗರ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಮೃತಪಟ್ಟವರನ್ನು ಸುರೇಶ್ (38), ಗಾಯತ್ರಿ (28), ಶಾಲಿನಿ (3), ಇಂದ್ರಜಿತ್ ಎಂದು ಗುರುತಿಸಲಾಗಿದೆ. ಮಕ್ಕಳಿಬ್ಬರನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. [ಚಿಕ್ಕಮಗಳೂರು : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ]

Suicide

ಸೋಮವಾರ ಬೆಳಗ್ಗೆ ಸುರೇಶ್ ಅವರು ಮನೆಯಿಂದ ಹೊರಬಾರದ್ದನ್ನು ನೋಡಿದ ಅಕ್ಕ-ಪಕ್ಕದ ಮನೆಯವರು ಕಿಟಕಿ ಮೂಲಕ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಾಗರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ. ಸುರೇಶ್ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಆರ್ಥಿಕ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣ ಎಂದು ಬರೆದಿದ್ದಾರೆ. [ಮೈಸೂರು : ಸತ್ತಂತೆ ನಾಟಕವಾಡಲು ಹೋಗಿ ಹೆಣವಾದ]

ಸುರೇಶ್ ಅಡಿಕೆ ವ್ಯಾಪಾರಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ವ್ಯಾಪಾರದಲ್ಲಿ ನಷ್ಟ ಉಂಟಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+