• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿಕಾರಿಪುರದಲ್ಲಿ ವಿದ್ಯುತ್ ತಂತಿ‌ ತುಳಿದು ರೈತ ಸಾವು

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಆಗಸ್ಟ್ 7: ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದ ಅನಾಹುತಗಳು ಸಂಭವಿಸುತ್ತಿದ್ದು, ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ.

ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ಗ್ರಾಮದ ರೈತ ಲೇಕಪ್ಪ ಬಿನ್ ದುರ್ಗಪ್ಪ (45) ಇಂದು ಮುಂಜಾನೆ ತಮ್ಮ‌ ಜಮೀನಿಗೆ ಹೋಗಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ವಿದ್ಯುತ್ ಕಂಬದ ಮುಖ್ಯ ತಂತಿ ತುಂಡಾಗಿ ನೆಲಕ್ಕೆ ಬಿದ್ದಿದ್ದು, ಜಮೀನಿನಲ್ಲಿ ನೀರು ತುಂಬಿದ್ದರಿಂದ ದುರ್ಗಪ್ಪ ಅವರಿಗೆ ತಂತಿ ಕಂಡಿಲ್ಲ. ಈ ಸಂದರ್ಭ ವಿದ್ಯುತ್ ತಂತಿ ತುಳಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಎಂ.ಪಿ ಕವಿರಾಜ್ ಹಾಗೂ ಗ್ರಾಮ ಲೆಕ್ಕಿಗ ನಾಗರಾಜ್ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

English summary
Farmer died by electric shock in chikkamagadi village of Shikaripur taluk. The tragedy occurred when farmer Lekappa bin Durgappa (45) went to his farm this morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X