• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗ: ಸೋಮವಾರದ ಕರ್ನಾಟಕ ಬಂದ್ ಗೆ ಸಹಕರಿಸಲು ರೈತ ಸಂಘ ಕರೆ

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಸೆಪ್ಟೆಂಬರ್ 27: ಎಪಿಎಂಸಿ ಮಸೂದೆ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಸೆಪ್ಟೆಂಬರ್ 28ರ ಸೋಮವಾರದಂದು ರೈತರು, ಕಾರ್ಮಿಕರು ವಿವಿಧ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷ ಎಚ್.ಆರ್ ಬಸವರಾಜಪ್ಪ, ""ಸೆಪ್ಟೆಂಬರ್ 28 ರಂದು ಬೆಳಗ್ಗೆ 6 ರಿಂದ 6 ಗಂಟೆಯವರೆಗೆ ಕರ್ನಾಟಕ ಬಂದ್ ಮಾಡಲಾಗುತ್ತದೆ. ವರ್ತಕರು, ಆಟೋ ಚಾಲಕರು, ಕಾರ್ಮಿಕರು, ರೈತರು, ವ್ಯಾಪಾರಿಗಳು, ಉದ್ಯೋಗ ಕಳೆದುಕೊಂಡವರು ಈ ಪ್ರತಿಭಟನೆಗೆ ಸಹಕಾರ ನೀಡಬೇಕು'' ಎಂದು ಮನವಿ ಮಾಡಿದರು.

ಸೋಮವಾರ ಕರ್ನಾಟಕ ಬಂದ್; ಏನಿರುತ್ತೆ, ಏನಿರಲ್ಲ?

ಈ ಬಂದ್ ವಿಶೇಷವಾಗಿದ್ದು, ಒಂದು ದಿನ ನಾವು, ನಮ್ಮ ಕಾರ್ಯಕರ್ತರು ಮೋಟರ್ ಸೈಕಲ್ ಜಾಥಾ ಮಾಡುತ್ತೇವೆ. ಒಂದು ದಿನ ಬಂದ್ ಮಾಡುವಂತೆ ನಿಮ್ಮಲ್ಲಿ ಮನವಿ ಮಾಡುತ್ತೇವೆ ಎಂದರು.

ಸೋಮವಾರ ಬೆಳಿಗ್ಗೆ 10 ಗಂಟೆಗೆ ಬಸ್ ನಿಲ್ದಾಣದಿಂದ ಬೃಹತ್ ಜಾಥಾ ನಡೆಯಲಿದ್ದು, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ನೀಡಲಿದ್ದೇವೆ ಎಂದು ತಿಳಿಸಿದರು.

English summary
On Monday, September 28, various organizations of farmers and workers called on the Karnataka Bandh to oppose the APMC Bill and the Land Reform Act Amendment Bill.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X