ಶಿವಮೊಗ್ಗದ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ

ಶಿವಮೊಗ್ಗ, ಡಿಸೆಂಬರ್ 17: ನೈಋತ್ಯ ರೈಲ್ವೆ ಶಿವಮೊಗ್ಗಕ್ಕೆ ಸಂಚಾರ ನಡೆಸುವ ವಿವಿಧ ಹಬ್ಬವ ವಿಶೇಷ ರೈಲುಗಳ ಸೇವೆಯನ್ನು ವಿಸ್ತರಣೆ ಮಾಡಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಸಾಮಾನ್ಯ ರೈಲುಗಳು ರದ್ದುಗೊಂಡಿದ್ದು, ವಿಶೇಷ ರೈಲುಗಳು ಮಾತ್ರ ಸಂಚಾರ ನಡೆಸುತ್ತಿದೆ.

10 ದಿನಗಳ ಅವಧಿಗೆ ಹಬ್ಬದ ವಿಶೇಷ ರೈಲುಗಳನ್ನು ಓಡಿಸುವುದಾಗಿ ನೈಋತ್ಯ ರೈಲ್ವೆ ಮೊದಲು ತಿಳಿಸಿತ್ತು. ಈಗ ರೈಲುಗಳ ಸೇವೆಯನ್ನು 2021ರ ಜನವರಿ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಮೈಸೂರು-ತಾಳಗುಪ್ಪ, ತಾಳಗುಪ್ಪ-ಮೈಸೂರು, ಬೆಂಗಳೂರು-ತಾಳಗುಪ್ಪ ಸೂಪರ್ ಫಾಸ್ಟ್ ಇಂಟರ್ ಸಿಟಿ, ತಾಳಗುಪ್ಪ-ಬೆಂಗಳೂರು ಸೂಪರ್ ಫಾಸ್ಟ್ ಇಂಟರ್ ಸಿಟಿ ರೈಲುಗಳ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ.

Festival Special Trains Service Extended Till January 2021

ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಈ ಕುರಿತು ಆದೇಶ ಹೊರಡಿಸಿದೆ. ರೈಲುಗಳ ಸಂಚಾರವನ್ನು ವಿಸ್ತರಣೆ ಮಾಡಲಾಗಿದ್ದು, ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ವಿಸ್ತರಣೆಯಾದ ರೈಲುಗಳ ಪಟ್ಟಿ

* ರೈಲು ನಂಬರ್ 06227 ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್ ರಾತ್ರಿ ರೈಲು 2021ರ ಜನವರಿ 30ರ ತನಕ ಸಂಚಾರ ನಡೆಸಲಿದೆ. 06228 ಸಂಖ್ಯೆಯ ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರಾತ್ರಿ ರೈಲು ಜನವರಿ 31ರ ತನಕ ಸಂಚಾರ ನಡೆಸಲಿದೆ.

* ರೈಲು ನಂಬರ್ 06529 ಬೆಂಗಳೂರು-ತಾಳಗುಪ್ಪ ಇಂಟರ್ ಸಿಟಿ ಸೂಪರ್ ಫಾಸ್ಟ್‌ ರೈಲು ಸೇವೆಯನ್ನು 2021ರ ಜನವರಿ 30ರ ತನಕ ವಿಸ್ತರಣೆ ಮಾಡಲಾಗಿದೆ. 06530 ಸಂಖ್ಯೆಯ ತಾಳಗುಪ್ಪ-ಬೆಂಗಳೂರು ಇಂಟರ್ ಸಿಟಿ ಸೂಪರ್ ಫಾಸ್ಟ್‌ ರೈಲು ಜನವರಿ 31ರ ತನಕ ಓಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+