ಶಿವಮೊಗ್ಗ; ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಶಿವಮೊಗ್ಗ, ಡಿಸೆಂಬರ್ 23: ಶಿವಮೊಗ್ಗ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಲಲಿತಾ (22) ಎಂಬ ವಿದ್ಯಾರ್ಥಿನಿ ಸಿಮ್ಸ್‌ನ ವಿದ್ಯಾರ್ಥಿನಿ ನಿಲಯದ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿಯ ಶಿಕ್ಷಕ ವೆಂಕಟೇಶ್ ಅವರ ಪುತ್ರಿ ಲಲಿತಾ ರಾತ್ರಿ 2 ಗಂಟೆ ಬಳಿಕ ಕೊಠಡಿಯಿಂದ ಹೊರಗೆ ಬಂದಿರಲಿಲ್ಲ.
ಲಲಿತಾಳ ಗೆಳತಿ ಟೆರೇಸ್ ಮೇಲೆ ಓದಲು ಹೋಗಿದ್ದರು. ವಾಪಸ್ ಬಂದು ಬಾಗಿಲು ಬಡಿದರೂ ತೆರೆದಿರಲಿಲ್ಲ. ನಿದ್ದೆ ಮಾಡಿರಬಹದು ಎಂದು ಸುಮ್ಮನಾಗಿದ್ದರು. ಬೆಳಗ್ಗೆಯೂ ಬಾಗಿಲು ತೆರೆಯದಿದ್ದಾಗ ಅನುಮಾನ ಬಂದು ನೋಡಿದ್ದಾರೆ.

ಆಗ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹಾಸ್ಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು ಹಾಗೂ ಸಿಮ್ಸ್ ವೈದ್ಯಾಧಿಕಾರಿಗಳು ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಲಲಿತಾ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು. ಕಳೆದ ಒಂದು ವರ್ಷದಿಂದ ಯಾರ ಜೊತೆಗೂ ಸರಿಯಾಗಿ ಸೇರುತ್ತಿರಲಿಲ್ಲ. ಸದಾ ಒಂಟಿಯಾಗಿರುತ್ತಿದ್ದರು ಎಂಬ ಮಾಹಿತಿ ಇದೆ.












Click it and Unblock the Notifications