• search
 • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗದಲ್ಲಿ ಕೊರೊನಾ ವೈರಸ್’ಗೆ ಮೊದಲ ಬಲಿ!

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಜೂನ್ 17; ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಂದಾಗಿ ಮೊದಲ ಸಾವು ಸಂಭವಿಸಿದ್ದು, ನಿನ್ನೆ ತಡರಾತ್ರಿ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

   BSY today green signal to Caravan tourism in Bengaluru | Tourism | Oneindia Kannada

   ಶ್ವಾಸಕೋಶ ಹಾಗೂ ಮೂಲವ್ಯಾಧಿ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದ್ದ 56 ವರ್ಷದ ವೃದ್ಧೆಯೊಬ್ಬರು ಕಳೆದ ಮೂರು ದಿನಗಳ ಹಿಂದೆ ಕೊರೊನಾ ವೈರಸ್ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು.

   ಕೊರೊನಾ ಸೋಂಕಿತ ಸ್ವಾಮೀಜಿಗೆ ಆಯುರ್ವೇದ ಚಿಕಿತ್ಸೆ ಕೊಡಿಸಲು ಶಿವಮೊಗ್ಗ ಜಿಲ್ಲಾಡಳಿತ ಸಮ್ಮತಿ

   ಕೊರೊನಾ ವೈರಸ್ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಮೃತ ಸೋಂಕಿತ ಮಹಿಳೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಮತ್ತು ಶುಕ್ರವಾರ ಚಿಕಿತ್ಸೆ ಪಡೆದು, ನಂತರ ಶನಿವಾರ ಚನ್ನಗಿರಿ ಖಾಸಗಿ ಕ್ಲಿನಿಕ್ ನಲ್ಲಿ ಚಿಕತ್ಸೆ ಪಡೆದಿದ್ದರು. ತದನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು.

   ಇವರಿಗೆ ಉಸಿರಾಟ ಸಮಸ್ಯೆ ಇರುವುದರಿಂದ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗಿತ್ತು, ವರದಿಯಲ್ಲಿ ಪಾಸಿಟಿವ್ ಬಂದ ನಂತರ ಮೆಗ್ಗಾನ್ ನ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದ ಸಂದರ್ಭದಲ್ಲಿ ವೃದ್ಧ ಮಹಿಳೆ ಸಾವನ್ನಪ್ಪಿದ್ದಾರೆ.

   ಮಹಿಳೆ ದಾವಣಗೆರೆ ಜಿಲ್ಲೆಯವರಾಗಿದ್ದರಿಂದ ಹಾಗೂ ಮೊದಲು ದಾವಣಗೆರೆ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಿಂದ ಪ್ರಕರಣವನ್ನು ದಾವಣಗೆರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.

   English summary
   The first death due to coronavirus in the Shivamogga district, the death of an old woman late last night.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X