ಶಿವಮೊಗ್ಗ; ನ.25ರಿಂದ 3 ಮಾರ್ಗದಲ್ಲಿ ವಿಮಾನ ಹಾರಾಟ
ಶಿವಮೊಗ್ಗ, ಅಕ್ಟೋಬರ್ 27: ಮಲೆನಾಡಿನ ಜನರಿಗೆ ಕೇಂದ್ರ ವಿಮಾನಯಾನ ಸಚಿವಾಲಯ ಸಿಹಿಸುದ್ದಿ ನೀಡಿದೆ. ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಿಂದ ಸದ್ಯ ಬೆಂಗಳೂರು ನಗರಕ್ಕೆ ಮಾತ್ರ ವಿಮಾನ ಸೇವೆ ಇದೆ. ನವೆಂಬರ್‌ನಲ್ಲಿ ಇನ್ನೂ 3 ಮಾರ್ಗದಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ.
ಶಿವಮೊಗ್ಗದ ಸಂಸದ ಬಿ. ವೈ. ರಾಘವೇಂದ್ರ ಫೇಸ್‌ಬುಕ್ ಪೋಸ್ಟ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣದ ಕುರಿತು ಎರಡು ಅಪ್‌ಡೇಟ್ ನೀಡಿದ್ದಾರೆ. ಇದರಲ್ಲಿ ರಾತ್ರಿ ವೇಳೆ ವಿಮಾನ ಲ್ಯಾಂಡ್ ಆಗುವ ಸೌಲಭ್ಯ, ಹೊಸ ಮಾರ್ಗದಲ್ಲಿ ವಿಮಾನ ಸಂಚಾರದ ಮಾಹಿತಿ ಸೇರಿದೆ.

ಸಂಸದರ ಫೇಸ್‌ಬುಕ್ ಪೋಸ್ಟ್; ಸಂಸದ ಬಿ. ವೈ. ರಾಘವೇಂದ್ರ ಫೇಸ್‌ಬುಕ್ ಪೋಸ್ಟ್‌ನಲ್ಲಿ, 'ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಲು ಸಜ್ಜಾಗುತ್ತಿದೆ ಶಿವಮೊಗ್ಗ ವಿಮಾನ ನಿಲ್ದಾಣ. ರಾತ್ರಿ ವೇಳೆಯೂ ಇಲ್ಲಿಂದ ಹಾರಲಿವೆ ವಿಮಾನಗಳು' ಎಂದು ಹೇಳಿದ್ದಾರೆ.
'ಡಿಸೆಂಬರ್ ವೇಳೆಗೆ ಶಿವಮೊಗ್ಗ ವಿಮಾನ ನಿಲ್ದಾಣ ತನ್ನ ಸಂಚಾರ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಿಕೊಳ್ಳಲಿದೆ. ಇನ್ನೆರಡು ತಿಂಗಳಲ್ಲಿ ರಾತ್ರಿ ವೇಳೆಯೂ ಇಲ್ಲಿಂದ ವಿಮಾನಗಳ ಹಾರಾಟ ಶುರುವಾಗಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ನೈಟ್ ಲ್ಯಾಂಡಿಂಗ್‌ಗೆ 2ನೇ ಹಂತದ ಒಪ್ಪಿಗೆಯೂ ಸಿಕ್ಕಿದ್ದು, ಇನ್ನೊಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ' ಎಂದು ತಿಳಿಸಿದ್ದಾರೆ.
ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಲು ಸಜ್ಜಾಗುತ್ತಿದೆ ಶಿವಮೊಗ್ಗ ವಿಮಾನ ನಿಲ್ದಾಣ. ರಾತ್ರಿ ವೇಳೆಯೂ ಇಲ್ಲಿಂದ ಹಾರಲಿವೆ ವಿಮಾನಗಳು!
— B Y Raghavendra (@BYRBJP) October 26, 2023
ಡಿಸೆಂಬರ್ ವೇಳೆಗೆ ಶಿವಮೊಗ್ಗ ವಿಮಾನ ನಿಲ್ದಾಣ ತನ್ನ ಸಂಚಾರ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಿಕೊಳ್ಳಲಿದೆ. ಇನ್ನೆರಡು ತಿಂಗಳಲ್ಲಿ ರಾತ್ರಿ ವೇಳೆಯೂ ಇಲ್ಲಿಂದ ವಿಮಾನಗಳ ಹಾರಾಟ ಶುರುವಾಗಲಿದೆ.
ಈ… pic.twitter.com/JaUXd8u4zm
ಇದೇ ಪೋಸ್ಟ್‌ನಲ್ಲಿ ರಾಘವೇಂದ್ರ, '4 ಮಾರ್ಗಗಳಿಗೆ ವಿಮಾನಯಾನ ಸೇವೆಗೆ ಅನುಮತಿ ಸಿಕ್ಕಿದ್ದು, ಈಗಾಗಲೇ ಶಿವಮೊಗ್ಗ-ಬೆಂಗಳೂರು ಸಂಚಾರ ಆರಂಭವಾಗಿದೆ. ನವೆಂಬರ್ 25 ರಿಂದ ಹೈದರಾಬಾದ್, ಗೋವಾ, ತಿರುಪತಿಗೂ ಇಲ್ಲಿಂದ ವಿಮಾನ ಸಂಚಾರ ಆರಂಭವಾಗಲಿದೆ' ಎಂದು ಹೇಳಿದ್ದಾರೆ.
ಕರ್ನಾಟಕದ 9ನೇ ಮತ್ತು ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ ಶಿವಮೊಗ್ಗ ವಿಮಾನ ನಿಲ್ದಾಣದ್ದು. ಈ ವಿಮಾನ ನಿಲ್ದಾಣವನ್ನು ಸುಮಾರು 450 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಈ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆ ಸಹ ವಿಮಾನ ಲ್ಯಾಂಡ್ ಆಗುವ ವ್ಯವಸ್ಥೆ ಇದೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡಬೇಕು ಎಂಬ ಪ್ರಸ್ತಾವನೆ ಇದೆ. ಈ ವಿಮಾನ ನಿಲ್ದಾಣದಿಂದ ಚಿಕ್ಕಮಗಳೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.
ಬೆಂಗಳೂರು ಹೊರತುಪಡಿಸಿದರೆ ಅತಿ ಉದ್ದದ ರನ್ ವೇ ಹೊಂದಿರುವ ರಾಜ್ಯದ ವಿಮಾನ ನಿಲ್ದಾಣವಿದಾಗಿದೆ. ಏರ್‌ಬಸ್ 320 ಮಾದರಿಯ ವಿಮಾನಗಳು ಕೂಡ ಇಳಿಯುವ ವ್ಯವಸ್ಥೆ ಇಲ್ಲಿದೆ. ಸದ್ಯ ಬೆಂಗಳೂರಿನಿಂದ ಮಾತ್ರ ಶಿವಮೊಗ್ಗಕ್ಕೆ ವಿಮಾನ ಸಂಪರ್ಕವಿದೆ. ಮುಂದಿನ ಒಂದು ವರ್ಷ ಕಾಲ ಶಿವಮೊಗ್ಗ-ಬೆಂಗಳೂರು ನಡುವೆ ಪ್ರಯಾಣಿಸುವ ಪ್ರತಿಯೊಬ್ಬರ ಟಿಕೆಟ್ ಮೇಲೆ 500 ರೂ. ಸಬ್ಸಿಡಿಯನ್ನು ರಾಜ್ಯ ಸರ್ಕಾರ ನೀಡಲಿದೆ.
ಶಿವಮೊಗ್ಗ-ಬೆಂಗಳೂರು ನಡುವಿನ ವಿಮಾನದ ಶೇ 85ರಷ್ಟು ಸೀಟುಗಳು ಭರ್ತಿಯಾಗುತ್ತಿವೆ. ಸಂಜೆ ಹೊತ್ತಿನಲ್ಲಿ ಮತ್ತೊಂದು ವಿಮಾನ ಸಂಚಾರ ಆರಂಭಿಸಲು ಸಹ ಸಿದ್ಧತೆಗಳು ನಡೆಯುತ್ತಿವೆ. ಅದಕ್ಕಾಗಿ ನೈಟ್ ಲ್ಯಾಂಡಿಂಗ್ ಕಾಮಗಾರಿಗಳು ಪೂರ್ಣಗೊಳ್ಳಬೇಕಿದೆ.
ಈ ವರ್ಷದ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ್ದರು. ಆಗಸ್ಟ್ 31ರಂದು ವಿಮಾನ ಸೇವೆ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ದೆಹಲಿ ಸೇರಿದಂತೆ ದೇಶದ ನಾನಾ ನಗರಗಳಿಗೆ ಶಿವಮೊಗ್ಗದಿಂದ ನೇರ ವಿಮಾನ ಸೇವೆ ಆರಂಭವಾಗುವ ನಿರೀಕ್ಷೆ ಇದೆ.
ಉಡಾನ್ ಯೋಜನೆಗೆ ಶಿವಮೊಗ್ಗ ವಿಮಾನ ನಿಲ್ದಾಣ ಸೇರಿಸಬೇಕು. ಕೋಲ್ಕತ್ತಾ, ದೆಹಲಿ ಮತ್ತು ಮುಂಬೈಗೆ ವಿಮಾನ ಸೇವೆ ಆರಂಭಿಸಬೇಕು ಎಂದು ಮನವಿ ಸಹ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಪ್ರಸ್ತಾವನೆಗೆ ಇನ್ನೂ ಒಪ್ಪಿಗೆ ನೀಡಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications