ಶಿವಮೊಗ್ಗದ ಎಫ್‌ಎಂ ಇನ್ನು ಮೊಬೈಲ್‌ನಲ್ಲಿಯೂ ಲಭ್ಯ
ಶಿವಮೊಗ್ಗ, ಜನವರಿ 24: ಶಿವಮೊಗ್ಗದ ರೆಡಿಯೋ ಕಾರ್ಯಕ್ರಮಗಳನ್ನು ಕೆಲವೇ ದಿನಗಳಲ್ಲಿ ಸುಮಾರು 100 ಕಿ.ಮೀ. ಪ್ರದೇಶದ ವ್ಯಾಪ್ತಿಯವರೆಗೆ ಯಾವುದೇ ಡೇಟಾ ಕೇಬಲ್‌ಗಳ ಸಹಾಯವಿಲ್ಲದೇ ಆಲಿಸಬಹುದಾಗಿದೆ. ಅಲ್ಲದೇ ಜನರು ತಮ್ಮ ಮೊಬೈಲ್ ಪೋನ್‌ಗಳಲ್ಲಿಯೂ ಶಿವಮೊಗ್ಗದ ಎಫ್ಎಂ ಕಾರ್ಯಕ್ರಮಗಳನ್ನು ಕೇಳಬಹುದಾಗಿದೆ. ಈ ಕುರಿತು ಶಿವಮೊಗ್ಗದ ಸಂಸದ ಬಿ. ವೈ. ರಾಘವೇಂದ್ರ ಮಾಹಿತಿಯನ್ನು ನೀಡಿದ್ದಾರೆ.
ಶಿವಮೊಗ್ಗ ನಗರದ ಎಂ.ಆರ್.ಎಸ್.ಸಮೀಪದ ದೂರದರ್ಶನ ಮರುಪ್ರಸಾರ ಕೇಂದ್ರದಲ್ಲಿ ಎಫ್ಎಂ ರೆಡಿಯೋ ಆರಂಭಿಸಲು ಕೆನಡಾದಿಂದ ತರಿಸಲಾಗಿದ್ದ ಅತ್ಯಧಿಕ ತರಂಗಾಂತರಗಳನ್ನು ಸೂಸುವ ಟ್ರಾನ್ಸ್‌ಮೀಟರ್ ಅಳವಡಿಕೆ ಹಾಗೂ ಪೂಜಾ ಸಮಾರಂಭದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಪಾಲ್ಗೊಂಡಿದ್ದರು.

ಬಿ. ವೈ. ರಾಘವೇಂದ್ರ ಮಾತು: ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ, "ಪ್ರಸ್ತುತ ಭದ್ರಾವತಿ ಕೇಂದ್ರದಲ್ಲಿ 1 ಕಿ. ವ್ಯಾ. ಸಾಮರ್ಥ್ಯದ ಟ್ರಾನ್ಸ್‌ಮೀಟರ್ ಅಳವಡಿಸಲಾಗಿದೆ. ನಗರದ ಈ ನೂತನ ಪ್ರಸಾರ ಕೇಂದ್ರದಲ್ಲಿ 10ಕೋಟಿ ರೂ.ಗಳ ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಕೆನಡಾದಿಂದ ತರಿಸಿರುವ 10 ಕಿ. ವ್ಯಾ. ಸಾಮರ್ಥ್ಯದ ಟ್ರಾನ್ಸಿಸ್ಟರ್ ಅಳವಡಿಸಲಾಗುತ್ತಿದೆ" ಎಂದರು.
"ಇನ್ನು ಕೆಲವೇ ದಿನಗಳಲ್ಲಿ ಸುಮಾರು 100 ಕಿ. ಮೀ. ಪ್ರದೇಶದ ವ್ಯಾಪ್ತಿಯವರೆಗೆ ಯಾವುದೇ ಡೇಟಾ ಕೇಬಲ್‌ಗಳ ಸಹಾಯವಿಲ್ಲದೇ ರೆಡಿಯೋ ಕಾರ್ಯಕ್ರಮ ಆಲಿಸಬಹುದಾಗಿದೆ. ಅಲ್ಲದೇ ತಮ್ಮ ಮೊಬೈಲ್‌ನಲ್ಲಿಯೂ ಎಫ್ಎಂ ಕಾರ್ಯಕ್ರಮಗಳನ್ನು ಕೇಳಬಹುದಾಗಿದೆ. ಭದ್ರಾವತಿ ಆಕಾಶವಾಣಿ ವಜ್ರಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಎಫ್ಎಂ ಆರಂಭಗೊಳ್ಳುತ್ತಿರುವುದು ಶುಭ ಸಂಕೇತ" ಎಂದು ಹೇಳಿದರು.
ಸಚಿವ ಡಾ. ಎಲ್. ಮುರುಗನ್ ಮಾತನಾಡಿ, "ಈಗಾಗಲೇ ಭದ್ರಾವತಿಯಲ್ಲಿ ವ್ಯವಸ್ಥಿತವಾದ ಆಕಾಶವಾಣಿ ಕೇಂದ್ರವಿದ್ದು, ಅದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಉದ್ದೇಶಿತ ಎಫ್ಎಂ ರೆಡಿಯೋ ಕೇಂದ್ರದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತ ಧ್ವನಿಮುದ್ರಣ ಘಟಕ ಆರಂಭಕ್ಕೆ ಅಗತ್ಯವಾದ ನೆರವನ್ನು ಕೇಂದ್ರ ಸರ್ಕಾರದಿಂದ ಒದಗಿಸಿಕೊಟ್ಟು, ಅತ್ಯಲ್ಪ ಅವಧಿಯಲ್ಲಿ ಲೋಕಾರ್ಪಣೆಗೊಳಿಸಲಾಗುವುದು" ಎಂದು ಭರವಸೆ ನೀಡಿದರು.
"ದೇಶದ ಎಲ್ಲಾ ಆಕಾಶವಾಣಿ ಕೇಂದ್ರಗಳನ್ನು ಜನರ ಆಶೋತ್ತರಗಳಿಗೆ ಪೂರಕವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಅದಕ್ಕಾಗಿ ಕೇಂದ್ರ ಸರ್ಕಾರವು ಕಳೆದ ಸಾಲಿನಲ್ಲಿ 2500 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಮೂಲಭೂತ ಸೌಲಭ್ಯಗಳೊಂದಿಗೆ ಅತ್ಯಾಧುನಿಕ ತಂತ್ರಾಂಶಗಳನ್ನು ಅಳವಡಿಸಿದೆ" ಎಂದರು.
"ಪ್ರಸ್ತುತ ರಾಜ್ಯದ ಕೋಲಾರ, ರಾಣೆಬೆನ್ನೂರು, ಬೀದರ್ ಮತ್ತು ಉಡುಪಿ ಜಿಲ್ಲೆಗಳಿಗೂ ಅತ್ಯಧಿಕ ತರಂಗಾಂತರಗಳನ್ನು ಸೂಸುವ ಟ್ರಾನ್ಸ್‌ಮೀಟರ್ ಅಳವಡಿಸಲಾಗುತ್ತಿದೆ. ಇದರಿಂದಾಗಿ ಆಕಾಶವಾಣಿ ಕೇಂದ್ರಗಳು ಇನ್ನಷ್ಟು ಸಮರ್ಥವಾಗಿ ಕಾರ್ಯನಿರ್ವಹಿಸಲಿವೆ. ಕ್ರಿಯಾಶೀಲ ಸಂಸದ ಬಿ. ವೈ. ರಾಘವೇಂದ್ರ ಅವರ ಒತ್ತಾಸೆಯಂತೆ ಎಫ್ಎಂ ರೇಡಿಯೋ ಕೇಂದ್ರವನ್ನು ಅಭಿವೃದ್ಧಿಪಡಿಸಲು ಅಗತ್ಯ ಸಹಕಾರವನ್ನು ನೀಡಲಾಗುವುದು" ಎಂದು ಸಚಿವರು ತಿಳಿಸಿದರು.
"ಆಕಾಶವಾಣಿಯು ಈ ದೇಶದ ಸಾಂಪ್ರದಾಯಿಕ, ಕಲೆ, ಸಾಹಿತ್ಯ, ಸಂಗೀತವನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಮಹತ್ವದ ಕಾರ್ಯನಿರ್ವಹಿಸುತ್ತಿದೆ. ಸ್ಥಳೀಯ ಕಲಾವಿದರಿಗೆ ವೇದಿಕೆಗಳನ್ನು ಒದಗಿಸಿ, ಅವರ ಕಲೆಯನ್ನು ಜಗತ್ತಿಗೆ ಪರಿಚಯಿಸುವ ಕಾರ್ಯದಲ್ಲಿ ಸಕ್ರಿಯವಾಗಿದೆ. ಇದರೊಂದಿಗೆ ಇಂದಿನ ಜನಾಂಗಕ್ಕೆ ಪೂರಕವಾದ ಇನ್ನಷ್ಟು ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಿ, ಪ್ರಸಾರಗೊಳಿಸಲು ಆಕಾಶವಾಣಿ ಬದ್ದವಾಗಿದೆ" ಎಂದು ಹೇಳಿದರು.
"ದೂರದ ಗುಡ್ಡ-ಬೆಟ್ಟ ಪ್ರದೇಶಗಳಲ್ಲಿಯೂ ಆಕಾಶವಾಣಿ ತನ್ನ ಇರುವಿಕೆಯನ್ನು ಮತ್ತೆ ಮತ್ತೆ ಪರಿಚಯಿಸಲಿದೆ. ಆಕಾಶವಾಣಿ ನಾಡಿನ ಸುದ್ದಿಗಳನ್ನು ಮಾತ್ರವಲ್ಲದೇ ಮನೋರಂಜನಾ ಮಾಧ್ಯಮವಾಗಿಯೂ ಕಾರ್ಯನಿರ್ವಹಿಸುತ್ತಿದೆ. ಇದರೊಂದಿಗೆ ಜನರ ಸಂಪರ್ಕ ಮಾಧ್ಯಮವಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸಿ, ಪ್ರಸಾರ ಮಾಡುವ ಮೂಲಕ ಪರಿಚಿತವಾಗಿದೆ" ಎಂದು ತಿಳಿಸಿದರು.
2024ರ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭದ್ರಾವತಿ ಆಕಾಶವಾಣಿ ಕೇಂದ್ರವನ್ನು 10 ಕಿಲೋ ವ್ಯಾಟ್ ಎಫ್ಎಂ ಪ್ರಸರಣ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಇದು ಶಿವಮೊಗ್ಗ ಜನರ ಬಹುದಿನದ ಬೇಡಿಕೆ ಆಗಿತ್ತು. 1 ಕಿಲೋ ವ್ಯಾಟ್ ಇದ್ದ ಶಿವಮೊಗ್ಗದ ಭದ್ರಾವತಿ ಕೇಂದ್ರ 10 ಕಿಲೋ ವ್ಯಾಟ್‌ಗೆ ಅಭಿವೃದ್ಧಿಗೊಳ್ಳುತ್ತಿರುವುದು ಮಲೆನಾಡು ಭಾಗಕ್ಕೆ ಸಿಕ್ಕ ಗೌರವವಾಗಿತ್ತು.
ಸದ್ಯ ಶಿವಮೊಗ್ಗ ಮತ್ತು ಭದ್ರಾವತಿ ವ್ಯಾಪ್ತಿಯಲ್ಲಿ ಆಕಾಶವಾಣಿ ಮತ್ತು ಎಫ್ಎಂ ರೆಡಿಯೋ ಸುಮಾರು 1 ಕೆವಿ ಟ್ರಾನ್ಸ್‌ಮೀಟರ್ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ಉನ್ನತೀಕರಣದ ನಂತರ ಇದರ ವ್ಯಾಪ್ತಿ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಅಕ್ಕಪಕ್ಕದ 8 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ. ಕಾರಿನಲ್ಲಿ ಸಂಚಾರ ನಡೆಸುವಾಗಲೂ ಎಫ್‌ಎಂ ಕೇಳಬಹುದಾಗಿದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications