ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ಸಂಗ್ರಹಾಲಯದ ಮೇಲೆ ಅರಣ್ಯ ಅಧಿಕಾರಿಗಳ ದಾಳಿ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಡಿಸೆಂಬರ್ 23: ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ಮ್ಯೂಸಿಯಂ ಸೀಜ್ ಮಾಡಿದ್ದಾರೆ. ಬೆಂಗಳೂರು ಮತ್ತು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಬೆಳಗ್ಗೆಯಿಂದ ಪರಿಶೀಲನಾ ಕಾರ್ಯ ನಡೆಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸೋಮಿನಕೊಪ್ಪ ಸಮೀಪದ ಪಶುವೈದ್ಯಕೀಯ ಮಹಾವಿದ್ಯಾಲಯದ ರೋಗಶಾಸ್ತ್ರ ಮ್ಯೂಸಿಯಂ ಒಂದರಲ್ಲಿ ಪರಿಶೀಲನೆ ನಡೆಸಲಾಗಿದ್ದು, ಸುಮಾರು ಹತ್ತು ಅಧಿಕಾರಿಗಳ ತಂಡ ದಾಳಿ ಮತ್ತು ಪರಿಶೀಲನೆ ನಡೆಸಿತು.

ಶಿವಮೊಗ್ಗ ಮತ್ತು ಬೆಂಗಳೂರಿನಿಂದ ಆಗಮಿಸಿರುವ ಅರಣ್ಯಾಧಿಕಾರಿಗಳ ತಂಡ ದಾಳಿಯಲ್ಲಿ ಪಾಲ್ಗೊಂಡಿದೆ. ಎಸಿಎಫ್ ವೀರೇಶ್ ಗೌಡ ಪೊಲೀಸ್ ಪಾಟೀಲ್ ಅವರ ನೇತೃತ್ವದಲ್ಲಿ ಅರಣ್ಯ ಅಪರಾಧ ನಿಯಂತ್ರಣ ವಿಭಾಗದ ಅಧಿಕಾರಿಗಳು ಬೆಂಗಳೂರಿನಿಂದ ಬಂದಿದ್ದಾರೆ. ಇನ್ನು ಎಫ್ಒ ರವೀಂದ್ರ ಕುಮಾರ್ ಅವರ ನೇತೃತ್ವದಲ್ಲಿ ಶಿವಮೊಗ್ಗದ ತಂಡ ದಾಳಿಯಲ್ಲಿ ಪಾಲ್ಗೊಂಡಿತ್ತು.

 ಮ್ಯೂಸಿಯಂ ಮೇಲೆ ದಾಳಿಗೆ ಕಾರಣವೇನು?

ಮ್ಯೂಸಿಯಂ ಮೇಲೆ ದಾಳಿಗೆ ಕಾರಣವೇನು?

ಪಶು ವೈದ್ಯಕೀಯ ಮಹಾವಿದ್ಯಾಲಯದ ಲ್ಯಾಬ್‌ನಲ್ಲಿ ಷೆಡ್ಯೂಲ್ 1ಕ್ಕೆ ಸೇರಿದ ಪ್ರಾಣಿಗಳ ಅಂಗಗಳನ್ನು ಇಡಲಾಗಿದೆ ಎಂದು ಹೇಳಲಾಗುತ್ತಿದೆ. ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಅಂಗಗಳನ್ನು ಇಟ್ಟುಕೊಂಡಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ದೂರು ಬಂದಿದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮ್ಯೂಸಿಯಂನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

 ಪ್ರಾಣಿಗಳ ಅಂಗ ಇಲ್ಲಿಗೆ ಬಂದಿದ್ದು ಹೇಗೆ?

ಪ್ರಾಣಿಗಳ ಅಂಗ ಇಲ್ಲಿಗೆ ಬಂದಿದ್ದು ಹೇಗೆ?

ಅರಣ್ಯ ಇಲಾಖೆ ವೈದ್ಯರು ವಿವಿಧ ಅರಣ್ಯಗಳಲ್ಲಿ ಮೃತಪಟ್ಟ ಪ್ರಾಣಿಗಳ ಮರಣೋತ್ತರ ಪರೀಕ್ಷೆ ನಡೆಸುತ್ತಾರೆ. ಪಶುವೈದ್ಯಕೀಯ ಮಹಾವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳು ಕೂಡ ಈ ಮರಣೋತ್ತರ ಪರೀಕ್ಷೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಇಂತಹ ಸಂದರ್ಭ ವಿದ್ಯಾರ್ಥಿಗಳ ಅಧ್ಯಯನದ ದೃಷ್ಟಿಯಿಂದ ಪ್ರಾಣಿಗಳ ಕೆಲವು ಅಂಗಗಳನ್ನು ತಂದು ಸಂಗ್ರಹಾಲಯದಲ್ಲಿ ಸಂಗ್ರಹಿಸಿ ಇಡಲಾಗುತ್ತದೆ.

ಷೆಡ್ಯೂಲ್ 1ರಲ್ಲಿ ಬರುವ ಪ್ರಾಣಿಗಳ ಅಂಗಗಳನ್ನು ಸಂಗ್ರಹಿಸುವುದು ಅಪರಾಧ. ಅಧ್ಯಯನ ದೃಷ್ಟಿಯಿಂದ ಇವುಗಳನ್ನು ತಂದು ಇಟ್ಟುಕೊಳ್ಳುವುದಕ್ಕೆ ಅರಣ್ಯ ಇಲಾಖೆಯ ಅನುಮತಿ ಕಡ್ಡಾಯ. ಕೇವಲ ಮೌಕಿಕ ಅನುಮತಿ ಮೇರೆಗೆ ಅಂಗಗಳನ್ನು ತಂದು ಇಟ್ಟುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬೆಂಗಳೂರಿನಲ್ಲಿರುವ ಅರಣ್ಯ ಅಪರಾಧ ನಿಯಂತ್ರಣ ವಿಭಾಗಕ್ಕೆ ದೂರು ನೀಡಲಾಗಿದೆ.

 ಏನಿದು ಷೆಡ್ಯೂಲ್ 1 ಪ್ರಾಣಿಗಳು?

ಏನಿದು ಷೆಡ್ಯೂಲ್ 1 ಪ್ರಾಣಿಗಳು?

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಪ್ರಕಾರ ಪ್ರಾಣಿಗಳನ್ನು ಐದು ಷೆಡ್ಯೂಲ್‌ಗಳಲ್ಲಿ ವಿಂಗಡಿಸಲಾಗಿದೆ. ಷೆಡ್ಯೂಲ್ 1ರಲ್ಲಿ ಮೂರು ವಿಭಾಗಗಳಿವೆ. ಪ್ರಾಣಿಗಳು, ಜಲಚರಗಳು ಮತ್ತು ಪಕ್ಷಿಗಳು ಎಂದು ವಿಭಾಗಿಸಲಾಗಿದೆ. ಹುಲಿ, ಚಿರತೆ, ಕಾಡು ಕೋಣ ಸೇರಿದಂತೆ 41 ಪ್ರಾಣಿಗಳು ಈ ಭಾಗದಲ್ಲಿವೆ. ಇವುಗಳ ಅಂಗಗಳನ್ನು ಸಂಗ್ರಹಿಸುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪ್ರಕಾರ ಅಪರಾಧವಾಗಲಿದೆ.

 ‘ವಸ್ತುಗಳನ್ನು ಸೀಜ್ ಮಾಡಿದ್ದೇವೆ’

‘ವಸ್ತುಗಳನ್ನು ಸೀಜ್ ಮಾಡಿದ್ದೇವೆ’

ಇನ್ನು ದಾಳಿ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಎಫ್ಒ ರವೀಂದ್ರ ಕುಮಾರ್, ಪ್ರಾಣಿಗಳ ಮರಣೋತ್ತರ ಪರೀಕ್ಷೆ ಸಂದರ್ಭ ಕೆಲವು ವಸ್ತುಗಳನ್ನು ತಂದು ಲ್ಯಾಬ್‌ನಲ್ಲಿ ಇಟ್ಟುಕೊಂಡಿದ್ದಾರೆ. ಅನುಮತಿ ಪಡೆದು ಇವುಗಳನ್ನು ತಂದಿಟ್ಟುಕೊಳ್ಳಬೇಕಿತ್ತು. ಆದರೆ ಯಾವುದೇ ಅನುಮತಿ ಪಡೆದಿರುವ ಹಿನ್ನೆಲೆಯಲ್ಲಿ ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

 ಪ್ರಾಣಿಗಳ ಅಂಗಗಳನ್ನು ಅನುಮತಿ ಇಲ್ಲದೆ ಸಂಗ್ರಹ

ಪ್ರಾಣಿಗಳ ಅಂಗಗಳನ್ನು ಅನುಮತಿ ಇಲ್ಲದೆ ಸಂಗ್ರಹ

ಶಿವಮೊಗ್ಗದ ಸೋಮಿನಕೊಪ್ಪದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯವು ರಾಜ್ಯದ ಪ್ರಮುಖ ಕಾಲೇಜುಗಳಲ್ಲಿ ಒಂದಾಗಿದೆ. ಸದ್ಯ ಇಲ್ಲಿ ಮುನ್ನೂರಕ್ಕು ಹೆಚ್ಚು ವಿದ್ಯಾರ್ಥಿಗಳು ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಬೃಹತ್ ಕ್ಯಾಂಪಸ್‌ನೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ಆದರೆ ಷೆಡ್ಯೂಲ್ 1ರಲ್ಲಿ ಬರುವ ಪ್ರಾಣಿಗಳ ಅಂಗಗಳನ್ನು ಅನುಮತಿ ಇಲ್ಲದೆ ಸಂಗ್ರಹಿಸಿರುವ ಕಳಂಕಕ್ಕೆ ತುತ್ತಾಗಿದೆ.

English summary
Forest Department officials on Thursday attacked the Museum of Veterinary College at Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X