ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಶಿವಮೊಗ್ಗ, ಜುಲೈ 5: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಜನರಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಕಳೆದ ರಾತ್ರಿ ತೀವ್ರ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅನಾರೋಗ್ಯಕ್ಕೆ ಕಾರಣ ತಿಳಿದುಬಂದಿಲ್ಲ.

2017ರಲ್ಲಿ ಧ್ವಜಾರೋಹಣ ಮಾಡುವಾಗ ಕುಸಿದು ಬಿದ್ದ ಘಟನೆ ನಡೆದಿತ್ತು.












Click it and Unblock the Notifications