ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ನಾಯಕರ ವಿರುದ್ಧ ಬೇಸರ ಕಿಮ್ಮನೆ ರತ್ನಾಕರ್

|
Google Oneindia Kannada News

ಶಿವಮೊಗ್ಗ, ಜುಲೈ 9: ''ರಾಜ್ಯದಲ್ಲಿ ಸರ್ಕಾರ ಇದೆ ಎಂದು ಅನಿಸುವುದೇ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಒಬ್ಬರು ಕೆಲಸ ಮಾಡುತ್ತಿದ್ದಾರೆ. ಸಚಿವ ಸಂಪುಟದ ಬೇರೆ ಯಾರೂ ಕೆಲಸ ಮಾಡುತ್ತಿಲ್ಲ. ಇಂತಹ ಸರ್ಕಾರ‌ ನಡೆಸುವುದರ ಬದಲು ರಾಜೀನಾಮೆ ನೀಡಿ ಮನೆಗೆ ಹೋಗುವುದು ಉತ್ತಮ'' ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ಲಾಕ್ ಡೌನ್ ಇದ್ದು, ಆ ದಿನ ಸಚಿವರು ಹಾಗೂ ಶಾಸಕರು ಶಂಕು ಸ್ಥಾಪನೆ ಕಾರ್ಯಕ್ರಮ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾಕಷ್ಟು ಜನರು ಸೇರಿಕೊಂಡಿದ್ದರು ಎಷ್ಟರ ಮಟ್ಟಿಗೆ‌ ಸರಿ ಎಂದು ಪ್ರಶ್ನೆ ಮಾಡಿದ್ದಾರೆ

ಕೊರೊನಾ ಉಪಕರಣ ಅಕ್ರಮ ಆರೋಪ: ಯಡಿಯೂರಪ್ಪರನ್ನು ಭಾರೀ ಇಕ್ಕಟ್ಟಿಗೆ ಸಿಲುಕಿಸಿದ ಪೆನ್ ಡ್ರೈವ್ಕೊರೊನಾ ಉಪಕರಣ ಅಕ್ರಮ ಆರೋಪ: ಯಡಿಯೂರಪ್ಪರನ್ನು ಭಾರೀ ಇಕ್ಕಟ್ಟಿಗೆ ಸಿಲುಕಿಸಿದ ಪೆನ್ ಡ್ರೈವ್

''ಸೋಂಕು ಕಾಂಗ್ರೆಸ್ ನವರಿಗೆ ಮಾತ್ರ ಬರುತ್ತದೆಯೇ? ಬಿಜೆಪಿಯವರಿಗೆ ಬರುವುದಿಲ್ಲವೇ? ಹೀಗಾದರೆ‌ ಲಾಕ್ ಡೌನ್ ಮಾಡಿದ್ದು ಯಾರಿಗೆ?'' ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಪ್ರಶ್ನಿಸಿದರು

Former Minister Kimmane Ratnakar Has Expressed Outrage Over Bjp Leaders Over Coronavirus Crisis

''ಸಹಕಾರಿ ಸಂಘದಿಂದ ಆಶಾ ಕಾರ್ಯಕರ್ತೆಯರಿಗೆ ಹಣ ದಾನವಾಗಿ ನೀಡಬೇಕು ಎಂದು ಸರ್ಕಾರ ಆದೇಶಿಸಿದೆ. ರೈತರ ಹಣ ಕಿತ್ತುಕೊಂಡು ಆಶಾ ಕಾರ್ಯಕರ್ತೆಯರಿಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಡೆಯ ವಿರುದ್ಧ ರಾಜ್ಯಾದ್ಯಂತ ಹೋರಾಟ‌ ರೂಪಿಸುತ್ತೇವೆ ಎಂದು ಕಿಮ್ಮನೆ ರತ್ನಾಕರ ಆಕ್ರೋಶ ವ್ಯಕ್ತಪಡಿಸಿದರು.

English summary
Former Minister Kimmane Ratnakar Has Expressed Outrage Over Bjp Leaders Over Coronavirus Crisis.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X