ಬಿಜೆಪಿ ಪಕ್ಷಕ್ಕೆ ತಿನ್ನುವ ಅನ್ನ ಜೀರ್ಣವಾಗುತ್ತಿಲ್ಲ: ಕಾಂಗ್ರೆಸ್ ಮಾಜಿ ಶಾಸಕ

ಶಿವಮೊಗ್ಗ, ಅಕ್ಟೋಬರ್ 5: ಸುಗ್ರೀವಾಜ್ಞೆ ಮೂಲಕ ಕೃಷಿ ಮಸೂದೆಯನ್ನು ಜಾರಿಗೊಳಿಸಲು ಹೊರಟಿರುವ ಬಿಜೆಪಿ ಸರ್ಕಾರ, ದೇಶದ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಆರೋಪಿಸಿದ್ದಾರೆ.

ಈ ಬಗ್ಗೆ ದೇಶದಲ್ಲೆಡೆ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಮಾಡುತ್ತಿದ್ದರೂ ಇವರಿಗೆ(ಬಿಜೆಪಿಗೆ) ತಿನ್ನುವ ಅನ್ನ ಜೀರ್ಣವಾಗುತ್ತಿಲ್ಲವೆಂಬುದು ಖಚಿತಗೊಳ್ಳುತ್ತದೆ ಎಂದು ಕೆಪಿಸಿಸಿ ವಕ್ತಾರರೂ ಆಗಿರುವ ಕೆ.ಬಿ ಪ್ರಸನ್ನಕುಮಾರ್ ಟೀಕಿಸಿದ್ದಾರೆ.

ಕೆ.ಬಿ ಪ್ರಸನ್ನಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿದೆ ಎಂದ ಮಾತ್ರಕ್ಕೆ ಜಾರಿಗೊಳಿಸಬೇಕೆಂಬ ಕಾನೂನು ಇದೆಯಾ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಪ್ರಣಾಳಿಕೆಯಲ್ಲಿರುವ ಸ್ವಾಮಿನಾಥನ್ ವರದಿ ಯಾಕೆ ಇನ್ನೂ ಜಾರಿಗೊಳಿಸಿಲ್ಲ ಎಂದು ಪ್ರಶ್ನಿಸಿದರು.

Shivamogga Former MLA KB Prasannakumar Reacted About Agriculture Bill

ಕೃಷಿ ಮಸೂದೆಯ ಬಗ್ಗೆ ಚರ್ಚೆ ಮಾಡದೆ ಮಸೂದೆ ಜಾರಿಗೊಳಿಸುತ್ತಿರುವ ಬಿಜೆಪಿ ಪುನರ್ ಪರಿಶೀಲಿಸಬೇಕು ಹಾಗೂ ಮಸೂದೆಯನ್ನು ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಕೃಷಿ ಮಸೂದೆಗೆ ತಿದ್ದುಪಡಿ ತರುವ ಮೂಲಕ ಜಾರಿಗೊಳ್ಳುತ್ತಿರುವ ಬಿಜೆಪಿ ಅಂಗ ಎನಿಸಿಕೊಂಡಿರುವ ಭಾರತೀಯ ಕಿಸಾನ್ ಮಂಚ್ ಏಕೆ ಪ್ರತಿಭಟಿಸುತ್ತಿದೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷ ಈ ಮಸೂದೆನ್ನು ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ರೇಸ್ ನಲ್ಲಿರುವವರು ಹೇಳುತ್ತಿದ್ದಾರೆ. ಹಾಗಾದರೆ ಕೇಂದ್ರ ಮಂತ್ರಿ ಪದವಿ ತ್ಯಜಿಸಿ ಶಿರೋಮಣಿ ಅಕಾಲಿದಳ ಯಾಕೆ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಸಚಿವ ಈಶ್ವರಪ್ಪನವರನ್ನು ಪರೋಕ್ಷವಾಗಿ ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಸಹೋದರ ಸುರೇಶ್ ಮನೆಯ ಮೇಲೆ ಸಿಬಿಐ ದಾಳಿ ನಡೆಸಿರುವುದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿರುವ ಪ್ರಸನ್ನಕುಮಾರ್, ಶಿರಾ ಮತ್ತು ರಾಜರಾಜೇಶ್ವರಿ ನಗರದ ಬೈ ಎಲೆಕ್ಷನ್ ಎದುರಿಸಲು ಆಗದ ಬಿಜೆಪಿ ಡಿ.ಕೆ ಶಿವಕುಮಾರ್ ಮತ್ತು ಡಿ.ಕೆ ಸುರೇಶ್ ಮನೆಯ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+