ಪರಿಷತ್ ಚುನಾವಣೆ: ಬಂಡಾಯವೆದ್ದು ಸೋತ ರಘುಪತಿ ಭಟ್
ಶಿವಮೊಗ್ಗ, ಜೂನ್ 07; ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಘೋಷಣೆಯಾಗಿದೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಬಳಿಕ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ಸೋಲು ಕಂಡಿದ್ದಾರೆ.
ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ 37,627 ಮತಗಳನ್ನು ಪಡೆದು, 24,111 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಡಾ. ಧನಂಜಯ ಸರ್ಜಿಗೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡು ರಘುಪತಿ ಭಟ್ ಬಂಡಾಯ ಎದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಯಾರಿಗೆ ಎಷ್ಟು ಮತಗಳು?: ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ 37,627 ಮತಗಳು. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516 ಮತಗಳು ಮತ್ತು ಕೆ. ರಘುಪತಿ ಭಟ್ 7039 ಮತಗಳನ್ನು ಪಡೆದಿದ್ದಾರೆ.
ಗುರುವಾರ ರಾತ್ರಿ 12.30ರ ತನಕ ಮೈಸೂರಿನಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ನಡೆಯಿತು. 515 ಮತಗಳು ತಿರಸ್ಕಾರಗೊಂಡಿವೆ. ಈ ಕ್ಷೇತ್ರದ ವ್ಯಾಪ್ತಿಗೆ ಶಿವಮೊಗ್ಗ, ದಾವಣಗೆರೆ (ಹೊನ್ನಾಳಿ, ಚನ್ನಗಿರಿ) ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು ಸೇರಿವೆ. ಜೂನ್ 3ರಂದು ಮತದಾನ ನಡೆದಿತ್ತು.
ಕೆ. ರಘುಪತಿ ಭಟ್ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಲ್ಲಿ ಅವರು ಗೆಲುವು ಸಾಧಿಸಿದ್ದರು. ಆದರೆ ಹಾಲಿ ಶಾಸಕರಾಗಿದ್ದರೂ ಸಹ 2023ರ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಿರಲಿಲ್ಲ.
ಆದ್ದರಿಂದ ರಘುಪತಿ ಭಟ್ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಶಿವಮೊಗ್ಗದ ಖ್ಯಾತ ವೈದ್ಯ ಧನಂಜಯ ಸರ್ಜಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿತು.
ಇದರಿಂದಾಗಿ ಅಸಮಾಧಾನಗೊಂಡ ರಘುಪತಿ ಭಟ್ ಬಂಡಾಯ ಎದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು. ನಾಮಪತ್ರ ವಾಪಸ್ ಪಡೆಯದೇ ಅವರು ಚುನಾವಣಾ ಕಣದಲ್ಲಿ ಉಳಿದ ಕಾರಣ ಬಿಜೆಪಿಯ ಶಿಸ್ತು ಸಮಿತಿ ಅವರಿಗೆ ನೋಟಿಸ್ ನೀಡಿತು. ಬಳಿಕ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆಗೊಳಿಸಿ ಆದೇಶ ಹೊರಡಿಸಿತು.
ಲೋಕಸಭೆ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಬಿಜೆಪಿ ಟಿಕೆಟ್ ಪುತ್ರನ ಕೈತಪ್ಪಿದ ಕಾರಣಕ್ಕೆ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ವಿಧಾನ ಪರಿಷತ್ ಚುನಾವಣೆಯಲ್ಲಿ ರಘುಪತಿ ಭಟ್ ಬೆಂಬಲಿಸಿದ್ದರು.
ಬಿಜೆಪಿಯಿಂದ ಉಚ್ಛಾಟನೆಗೊಂಡ ಬಳಿಕ ಮಾತನಾಡಿದ್ದ ರಘುಪತಿ ಭಟ್, "ನಾನು ನರೇಂದ್ರ ಮೋದಿಗೆ ಬೈದಿಲ್ಲ. ರಾಜ್ಯ ನಾಯಕರನ್ನು ಟೀಕೆ ಮಾಡಿಲ್ಲ. ಇಂತಹ ವಜಾಗಳಿಗೆ ನಾನು ತಲೆಬಿಸಿ ಮಾಡಿಕೊಳ್ಳುವುದಿಲ್ಲ. ಬಿಜೆಪಿ ಪಕ್ಷದ ವ್ಯವಸ್ಥೆ ಬಗ್ಗೆ ನನಗೆ ಅಸಮಾಧಾನವಿದೆ" ಎಂದು ಹೇಳಿಕೆ ನೀಡಿದ್ದರು.
"ಪಕ್ಷದ ನಾಯಕರನ್ನು ಟೀಕೆ ಮಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಪಕ್ಷಕ್ಕೆ ಬಂದರು. ಲೋಕಸಭೆ ಚುನಾವಣೆ ಟಿಕೆಟ್ ಪಡೆದು ಸ್ಪರ್ಧೆ ಮಾಡಿದರು. ಇದು ಶಾಶ್ವತ ವಜಾ ಅಲ್ಲ. ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ" ಎಂದು ಹೇಳಿದ್ದರು.
ಬಿಜೆಪಿ ಅಭ್ಯರ್ಥಿಯಾದ ಡಾ. ಧನಂಜಯ ಸರ್ಜಿ ಚನ್ನಗಿರಿ ಮೂಲದವರು. ಶಿವಮೊಗ್ಗ ನಗರದ ಖ್ಯಾತ ವೈದ್ಯರು. 2023ರ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರದ ಬಿಜೆಪಿ ಟಿಕೆಟ್ ಅವರಿಗೆ ಸಿಗಲಿದೆ ಎಂಬ ಸುದ್ದಿ ಹಬ್ಬಿತ್ತು. ಬಳಿಕ ಟಿಕೆಟ್ ಎಸ್. ಎನ್. ಚನ್ನಬಸಪ್ಪಗೆ ನೀಡಲಾಯಿತು. ಅವರು ಚುನಾವಣೆಯಲ್ಲಿ ಗೆದ್ದು, ಕ್ಷೇತ್ರ ಬಿಜೆಪಿ ವಶದಲ್ಲಿಯೇ ಇರುವಂತೆ ಮಾಡಿದ್ದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications