ಮಾಜಿ ಎಂಎಲ್‌ಸಿ, ಬಿಜೆಪಿ ನಾಯಕ ಎಂ. ಬಿ. ಭಾನುಪ್ರಕಾಶ್ ವಿಧಿವಶ
ಶಿವಮೊಗ್ಗ, ಜೂನ್ 17: ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ನಾಯಕ ಎಂ. ಬಿ. ಭಾನುಪ್ರಕಾಶ್ ವಿಧಿವಶರಾದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಿಸದೇ ನಿಧನ ಹೊಂದಿದ್ದಾರೆ.
ಸೋಮವಾರ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ಆಯೋಜನೆ ಮಾಡಿತ್ತು. ನಗರದ ಗೋಪಿವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಎಂ. ಬಿ. ಭಾನುಪ್ರಕಾಶ್ ಪಾಲ್ಗೊಂಡಿದ್ದರು.

ಪ್ರತಿಭಟನೆ ನಡೆಸುವಾಗಲೇ ಎಂ. ಬಿ. ಭಾನುಪ್ರಕಾಶ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಭಾನುಪ್ರಕಾಶ್ ವಿಧಿವಶರಾದರು.
ರಾಷ್ಟೀಯ ಸ್ವಯಂ ಸೇವಕ ಸಂಘದ ಸದಸ್ಯರಾಗಿದ್ದ ಎಂ. ಬಿ. ಭಾನುಪ್ರಕಾಶ್ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಬಿಜೆಪಿ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿಯೂ ನೇಮಕ ಮಾಡಿತ್ತು.
ಸರಳ, ಸಜ್ಜನರಾಗಿದ್ದ ಎಂ. ಬಿ. ಭಾನುಪ್ರಕಾಶ್ ಉತ್ತಮ ವಾಗ್ಮಿ. 2001 ರಿಂದ 2005ರ ತನಕ ಗಾಜನೂರು ಗ್ರಾಮದಿಂದ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು.
ಹಲವು ಗಣ್ಯರ ಕಂಬನಿ: ಎಂ. ಬಿ. ಭಾನುಪ್ರಕಾಶ್ ನಿಧನಕ್ಕೆ ಹಲವಾರು ನಾಯಕರು ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ, 'ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರು, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರು, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾಗಿ ಪಕ್ಷವನ್ನು ಶಿಸ್ತು ಬದ್ಧವಾಗಿ ಸಂಘಟಿಸುವಲ್ಲಿ ಅವಿರತ ಶ್ರಮಿಸಿದ ಪ್ರಮುಖರು, ಮಾಜಿ ವಿಧಾನ ಪರಿಷತ್ ಸದಸ್ಯರು, ನನ್ನ ರಾಜಕೀಯ ಮಾರ್ಗದರ್ಶಕರಾಗಿ ಸಲಹೆ ನೀಡಿ ಹರಸಿದ ಶ್ರೀ ಭಾನುಪ್ರಕಾಶ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಅವರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ, ಕುಟುಂಬ ಸದಸ್ಯರಿಗೆ ದುಃಖ ಸಹಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ' ಎಂದು ಸಂತಾಪ ಸೂಚಿಸಿದ್ದಾರೆ.
ಕಾರ್ಕಳದ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್, 'ಭಾರತೀಯ ಜನತಾ ಪಾರ್ಟಿಯ ಹಿರಿಯ ಮುತ್ಸದ್ಧಿ ವಿಧಾನ ಪರಿಷತ್ತಿನ ಮಾಜಿ ಸದಸ್ಯರು, ಮಿತ್ರರು, ಮಾರ್ಗದರ್ಶಕರು ಆದ ಶ್ರೀ ಭಾನುಪ್ರಕಾಶ್ ಜೀ ಅವರು ದೈವಾಧೀನರಾಗಿರುವ ಸುದ್ದಿ ಅತೀವ ದುಃಖ ತಂದಿದೆ. ರಾಷ್ಟ್ರೀಯವಾದಿ ಚಿಂತನೆಯನ್ನು ಬದುಕಿನುದ್ದಕ್ಕೂ ಪಾಲಿಸಿಕೊಂಡು, ಕಾರ್ಯಕರ್ತರಿಗೆ ಆದರ್ಶಪ್ರಾಯರಾಗಿದ್ದ ಇವರ ವ್ಯಕ್ತಿತ್ವ ನಮಗೆಲ್ಲರಿಗೂ ಪ್ರೇರಣೆ. ಅಗಲಿದ ಚೇತನಕ್ಕೆ ಪರಮಾತ್ಮ ಚಿರಶಾಂತಿ ಕರುಣಿಸಲಿ. ಅವರ ಕುಟುಂಬಕ್ಕೆ, ಬಂಧುಗಳಿಗೆ, ಅಭಿಮಾನಿಗಳಿಗೆ ಅವರ ಅಗಲುವಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂಶಾಂತಿ' ಎಂದು ಸಂತಾಪ ಸಂದೇಶ ಪೋಸ್ಟ್ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, 'ಸಹಸ್ರಾರು ಜನರಿಗೆ ಆಶ್ರಯ ನೀಡಿದ ಆಲದ ಮರವೊಂದು ಧರೆಗುರುಳಿತು. ಓಂ ಶಾಂತಿಃ ಶಾಂತಿಃ ಶಾಂತಿ' ಎಂದು ಸಂತಾಪ ಸೂಚಿಸಿದ್ದಾರೆ.
ಬಿ. ಎಸ್. ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾಗ ಎಂ. ಬಿ. ಭಾನುಪ್ರಕಾಶ್ ಅವರನ್ನು ಬಿಜೆಪಿ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಆದರೆ ಯಡಿಯೂರಪ್ಪ ಕಾರ್ಯ ವೈಖರಿ ಟೀಕಿಸಿ, ಉಪಾಧ್ಯಕ್ಷ ಸ್ಥಾನ ಬೇಡ, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಇರುತ್ತೇನೆ ಎಂದು ಹೇಳಿದ್ದರು. ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾಗ ಭಾನುಪ್ರಕಾಶ್ ಅವರಿಗೆ ಮತ್ತೆ ಉಪಾಧ್ಯಕ್ಷ ಸ್ಥಾನವನ್ನು ನೀಡಲಾಗಿತ್ತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications