ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; 4 ದಿನದ ಲಾಕ್‌ಡೌನ್ ಈ ವಾರವೂ ಮುಂದುವರಿಕೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮೇ 18; " ಶಿವಮೊಗ್ಗ ನಗರದಲ್ಲಿ ಕಳೆದ ವಾರ ಜಾರಿಗೊಳಿಸಿದ್ದ 4 ದಿನಗಳ ಸಂಪೂರ್ಣ ಲಾಕ್‌ಡೌನ್ ಈ ವಾರವೂ ಮುಂದುವರೆಯಲಿದೆ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, "ಕಳೆದ ವಾರ ಲಾಕ್‍ಡೌನ್ ಬಿಗಿಗೊಳಿಸಿರುವ ಹಿನ್ನೆಲೆಯಲ್ಲಿ ಕೋವಿಡ್ ಹರಡುವಿಕೆ ಪ್ರಮಾಣ ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಎಲ್ಲರ ಅಭಿಪ್ರಾಯದಂತೆ ಇದನ್ನು ಒಂದು ವಾರ ಕಾಲ ಮುಂದುವರೆಸಲಾಗುವುದು" ಎಂದರು.

ಶಿವಮೊಗ್ಗ ನಗರದಲ್ಲಿ ವಾರದ 4 ದಿನ ಸಂಪೂರ್ಣ ಲಾಕ್ ಡೌನ್ ಶಿವಮೊಗ್ಗ ನಗರದಲ್ಲಿ ವಾರದ 4 ದಿನ ಸಂಪೂರ್ಣ ಲಾಕ್ ಡೌನ್

"ಈ ಬಾರಿ ಎಪಿಎಂಸಿ ಮಾರುಕಟ್ಟೆ ಬೆಳಗ್ಗೆ 7 ಗಂಟೆಯವರೆಗೆ ಹಾಗೂ ಸಗಟು ದಿನಸಿ ವ್ಯಾಪಾರಕ್ಕೆ ಬೆಳಗ್ಗೆ 9 ಗಂಟೆಯವರೆಗೆ ಅವಕಾಶ ನೀಡಲಾಗುವುದು. ಇನ್ನುಳಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅವಶ್ಯಕ ವಸ್ತುಗಳು ಹಾಗೂ ಕೈಗಾರಿಕೆಗಳಿಗೆ ಅನುಮತಿಯನ್ನು ನೀಡಲಾಗಿದೆ" ಎಂದು ಸ್ಪಷ್ಟಪಡಿಸಿದರು.

ಲಾಕ್ ಡೌನ್: ಆರ್ಥಿಕ ಪ್ಯಾಕೇಜ್ ಘೋಷಿಸಲು ಸಿಎಂಗೆ ಎಎಪಿ ಆಗ್ರಹ ಲಾಕ್ ಡೌನ್: ಆರ್ಥಿಕ ಪ್ಯಾಕೇಜ್ ಘೋಷಿಸಲು ಸಿಎಂಗೆ ಎಎಪಿ ಆಗ್ರಹ

K. S. Eshwarappa

3ನೇ ಅಲೆ ಎದುರಿಸಲು ಸಿದ್ಧತೆ; ತಜ್ಞರು ಅಕ್ಟೋಬರ್ ತಿಂಗಳಲ್ಲಿ ಕೋವಿಡ್ ಮೂರನೇ ಅಲೆ ಬರುವ ಬಗ್ಗೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಶಿವಮೊಗ್ಗ; ವಾಹನ ತಪಾಸಣೆ ವೇಳೆ ಕೋವಿಡ್ ಸೋಂಕಿತ ಪ್ರತ್ಯಕ್ಷ ಶಿವಮೊಗ್ಗ; ವಾಹನ ತಪಾಸಣೆ ವೇಳೆ ಕೋವಿಡ್ ಸೋಂಕಿತ ಪ್ರತ್ಯಕ್ಷ

ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಸಂಬಂಧಿಕರಿಗೆ ಯಾವುದೇ ಕಾರಣಕ್ಕೂ ವಾರ್ಡ್‌ ಒಳಗೆ ಪ್ರವೇಶಿಸಲು ಅವಕಾಶ ನೀಡಬಾರದು. ರೋಗಿಗಳ ಅಗತ್ಯಗಳನ್ನು ನೋಡಿಕೊಳ್ಳಲು ಬೇಕಾದ ಸಿಬ್ಬಂದಿಗಳನ್ನು ಸ್ಥಳೀಯವಾಗಿ ನೇಮಕ ಮಾಡಿಕೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕದಲ್ಲಿ ಈಗಾಗಲೇ ಮೇ 24ರ ತನಕ ಲಾಕ್‌ಡೌನ್ ಜಾರಿಯಲ್ಲಿರಲಿದೆ. ಬಳಿಕ ಅದನ್ನು ವಿಸ್ತರಣೆ ಮಾಡಬೇಕು ಎಂಬ ಚರ್ಚೆಯೂ ನಡೆಯುತ್ತಿದೆ. ಸರ್ಕಾರ ಇನ್ನೂ ಯಾವುದೇ ತೀರ್ಮಾನವನ್ನು ಪ್ರಕಟಿಸಿಲ್ಲ.

English summary
Four days complete lock down in Shivamogga city from Thursday to Sunday will continue this week also said Shivamogga district in-charge minister K. S. Eshwarappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X