ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಗರ : ಟಿಕೆಟ್‌ ಗಲಾಟೆ, ರೈಲ್ವೆ ಸಿಬ್ಬಂದಿ ಮೇಲೆ ಹಲ್ಲೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ನವೆಂಬರ್ 17 : ರೈಲ್ವೆ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಸಾಗರದಲ್ಲಿ ನಡೆದಿದೆ. ಲಾಂಚ್ ಟಿಕೆಟ್ ತೆಗೆದುಕೊಳ್ಳುವ ವಿಚಾರದಲ್ಲಿ ಈ ಗಲಾಟೆ ನಡೆದಿದೆ.

ಸಿಗಂದೂರಿನ ದೇವಸ್ಥಾನಕ್ಕೆ ಹೋಗಿದ್ದ ನಾಲ್ವರು ರೈಲ್ವೆ ಇಲಾಖೆ ಸಿಬ್ಬಂದಿ ಮೇಲೆ ಲಾಂಚ್ ಸಿಬ್ಬಂದಿ ಹಾಗೂ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸರಿಗೆ ಈ ಕುರಿತು ದೂರು ನೀಡುವುದಾಗಿ ಸಿಬ್ಬಂದಿಗಳು ಹೇಳಿದ್ದಾರೆ.

ಗುಡ್ ನ್ಯೂಸ್ : ಬೆಂಗಳೂರು ಮಂಗಳೂರು ನಡುವೆ ಹೊಸ ರೈಲುಗುಡ್ ನ್ಯೂಸ್ : ಬೆಂಗಳೂರು ಮಂಗಳೂರು ನಡುವೆ ಹೊಸ ರೈಲು

Four railway officials attacked by locals in Sagara

ರೈಲ್ವೆ ಇಲಾಖೆ ಸಿಬ್ಬಂದಿಗಳಾದ ಬಸವರಾಜ್, ಚೇತನ್, ಹೇಮಂತ್ ಕುಮಾರ್, ಕಿರಣ್ ಮೇಲೆ ಹಲ್ಲೆ ನಡೆದಿದೆ. ಇವರೆಲ್ಲರೂ ರೈಲ್ವೆಯಲ್ಲಿ ಎಸಿ ಟೆಕ್ನಿಷಿಯನ್ ಹಾಗೂ ಅಸಿಸ್ಟೆಂಟ್ ಆಗಿ ಮೈಸೂರು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು-ಮೈಸೂರು ಜೋಡಿ ರೈಲು ಮಾರ್ಗ ಕಾಮಗಾರಿ ಪೂರ್ಣಬೆಂಗಳೂರು-ಮೈಸೂರು ಜೋಡಿ ರೈಲು ಮಾರ್ಗ ಕಾಮಗಾರಿ ಪೂರ್ಣ

ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಶರಾವತಿ ಹಿನ್ನೀರಿನ ಅಂಭಾರಗೊಡ್ಲು ದಡದಲ್ಲಿ ಈ ಘಟನೆ ನಡೆದಿದೆ. ಇಂತಹ ಸಾಕಷ್ಟು ಘಟನೆ ಈ ಭಾಗದಲ್ಲಿ ನಡೆದಿದ್ದು, ಸ್ಥಳದಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಿಲ್ಲ.

ಪೊಲೀಸರನ್ನು ನೇಮಿಸಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ದೇವಸ್ಥಾನಕ್ಕೆ ಲಾಂಚ್‌ನಲ್ಲಿ ಸಾಗುವ ಪ್ರಯಾಣಿಕರು ಒತ್ತಾಯಿಸಿದ್ದಾರೆ.

English summary
Four railway officials were injured in an attack by locals and launch (ferry) workers in Sagara, Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X