ಶಿವಮೊಗ್ಗ : 2.5 ಕೆಜಿ ಅಕ್ರಮ ಗಾಂಜಾ ವಶ. ನಾಲ್ವರ ಬಂಧನ
ಶಿವಮೊಗ್ಗ, ಡಿಸೆಂಬರ್ 31 : ಶಿವಮೊಗ್ಗಕ್ಕೆ ಅಕ್ರಮವಾಗಿ ಗಾಂಜಾ ಪೂರೈಕೆಯಾಗುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ನಗರದ ಎರಡು ಕಡೆ ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ಎಸ್ಪಿ ಅಭಿನವ್ ಖರೆ ಮತ್ತು ಹೆಚ್ಚುವರಿ ಎಸ್ಪಿ ಮುತ್ತುರಾಜ್ ಅವರ ಮಾರ್ಗದರ್ಶನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ 4 ಜನರನ್ನು ಪೊಲೀಸರು ಬಂಧಿಸಿದ್ದಾರೆ.

2.5 ಕೆಜಿ ಗಾಂಜಾ ಮತ್ತು 49 ಪೌಚ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಆರ್‌ಎಸ್ ನಿವಾಸಿ ಅರವಿಂದ, ರಂಗಸ್ವಾಮಿ, ಪುರಲೆ ಗ್ರಾಮದ ಕುಮಾರ್, ಮಂಜು ಎಂಬುವವರನ್ನು ಬಂಧಿಸಲಾಗಿದೆ.
ಶಂಕರ್ ಎನ್ನುವ ಆರೋಪಿ ತಲೆಮರೆಸಿಕೊಂಡಿದ್ದು, ಡಿಸಿಬಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ. ಶಂಕರ್ ಗಾಂಜಾ ಪೂರೈಕೆ ಮಾಡುತ್ತಿದ್ದ ಕಿಂಗ್ ಪಿನ್ ಎಂದು ತಿಳಿದುಬಂದಿದೆ.

ಆರೋಪಿಗಳು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ನಗರಕ್ಕೆ ಅಕ್ರಮವಾಗಿ ಗಾಂಜಾ ಪೂರೈಕೆಯಾಗುತ್ತಿದೆ ಎಂದು ಹಲವು ದಿನಗಳಿಂದ ಆರೋಪ ಮಾಡಲಾಗುತ್ತಿತ್ತು.












Click it and Unblock the Notifications