ಜೆಡಿಎಸ್ ಅಭ್ಯರ್ಥಿ ಪರ ಗೀತಾ ಶಿವರಾಜ್‌ಕುಮಾರ್ ಪ್ರಚಾರ
Recommended Video

ಶಿವಮೊಗ್ಗ, ಮಾರ್ಚ್ 13: ಜಿಲ್ಲೆಯ ಜೆಡಿಎಸ್ ಅಭ್ಯರ್ಥಿ ಪರ ಗೀತಾ ಶಿವರಾಜ್ ಕುಮಾರ್ ಪ್ರಚಾರ ನಡೆಸಲಿದ್ದಾರೆ ಎಂದು ಶಾಸಕ ಮಧುಬಂಗಾರಪ್ಪ ತಿಳಿಸಿದರು.
ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗೀತಾ ಶಿವರಾಜ್ ಕುಮಾರ್ ಅವರು ಮಾ.19 ರಿಂದ 4 ದಿನ ಮೊದಲ ಹಂತದ ಜಿಲ್ಲಾ ಪ್ರವಾಸ ನಡೆಸುತ್ತಾರೆ. ತೀರ್ಥಹಳ್ಳಿ, ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಭದ್ರಾವತಿ, ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. 2ನೇ ಹಂತದಲ್ಲಿ ಕಾರವಾರ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದ್ದಾರೆ ಎಂದರು.
ಚಿತ್ರನಟ ಶಿವರಾಜ್ ಕುಮಾರ್ ಪಕ್ಷಾತೀತ ನಾಯಕರಾಗಿದ್ದಾರೆ. ಅವರನ್ನು ಯಾವುದೇ ಕಾರಣಕ್ಕೂ ಪ್ರಚಾರಕ್ಕೆ ಎಳೆದುತರುವುದಿಲ್ಲ ಎಂದ ಮಧುಬಂಗಾರಪ್ಪ, ಮಾ.25ರ ನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಜೊತೆಗೆ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಮುಖಂಡರುಗಳಾದ ಹೆಚ್.ವಿಶ್ವನಾಥ್, ಪಿ.ಜಿ.ಆರ್.ಸಿಂದ್ಯಾ, ವೈ.ಎಸ್.ವಿ.ದತ್ತಾ, ಬಸವರಾಜ್ ಹೊರಟ್ಟಿ, ಶಶಿಭೂಷಣ್ ಹೆಗ್ಡೆ ಮತ್ತಿತರರು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.












Click it and Unblock the Notifications