ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಗೀತಾ ಶಿವರಾಜ್ ಕುಮಾರ್
ಶಿವಮೊಗ್ಗ, ಮಾರ್ಚ್ 12; ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಸಹ ಶೀಘ್ರವೇ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದದಾರೆ.
ಶುಕ್ರವಾರ ಮಧು ಬಂಗಾರಪ್ಪ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು. ಗುರುವಾರ ಅವರು ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಪಕ್ಷ ಸೇರುವ ಕುರಿತು ಚರ್ಚಿಸಿದ್ದರು.
ಡಿ. ಕೆ. ಶಿವಕುಮಾರ್ ನಿವಾಸದದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಧು ಬಂಗಾರಪ್ಪ, ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾತನಾಡಿದರು. "ಅವರು ಸೇರಿದ್ದಾರೆ ಅಂತ ಅಂದುಕೊಳ್ಳಿ" ಎಂದರು.
ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಜೆಡಿಎಸ್ ಅಭ್ಯರ್ಥಿಯಾಗಿ 2014ರಲ್ಲಿ ಶಿವಮೊಗ್ಗದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಬಿ. ಎಸ್. ಯಡಿಯೂರಪ್ಪ ವಿರುದ್ಧ ಪರಾಭವಗೊಂಡಿದ್ದರು. ಈಗ ಮಧು ಬಂಗಾರಪ್ಪ ಅವರ ಜೊತೆ ಕಾಂಗ್ರೆಸ್ ಸೇರಲಿದ್ದಾರೆ.

ಕಾಂಗ್ರೆಸ್ ಸೇರಿದ್ದಾರೆ ಅಂದುಕೊಳ್ಳಿ
ಡಿ. ಕೆ. ಶಿವಕುಮಾರ್ ನಿವಾಸದಲ್ಲಿ ಮಾತನಾಡಿದ ಮಧು ಬಂಗಾರಪ್ಪ, "ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್‌ಗೆ ಬಂದಿದ್ದಾರೆ ಅಂದುಕೊಳ್ಳಿ" ಎಂದು ಹೇಳಿದರು. ಈ ಮೂಲಕ ಶೀಘ್ರವೇ ಅವರು ಪಕ್ಷ ಸೇರ್ಪಡೆಯಾಗುವ ಕುರಿತು ಸುಳಿವು ನೀಡಿದರು.

ಅವರ ಜೊತೆ ಮಾತನಾಡುತ್ತೇನೆ
ಮಾಧ್ಯಮಗಳ ಜೊತೆ ಮಾತನಾಡಿದ ಡಿ. ಕೆ. ಶಿವಕುಮಾರ್, "ಕಷ್ಟ ಕಾಲದಲ್ಲಿ ಗೀತಾ ಶಿವರಾಜ್ ಕುಮಾರ್ ಪಕ್ಷ ಉಳಿಸಲು ಹೋರಾಟ ಮಾಡಿದವರು. ಅವರನ್ನು ನಾವು ಗೌರವಿಸುತ್ತೇವೆ. ಅವರ ಜೊತೆ ಮಾತುಕತೆ ನಡೆಸುತ್ತೇನೆ" ಎಂದು ಹೇಳಿದರು.

ಮಧು ಬಂಗಾರಪ್ಪ ರಾಜಕೀಯ ಜೀವನ
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರರಾದ ಕುಮಾರ್ ಬಂಗಾರಪ್ಪ ಬಿಜೆಪಿಯಲ್ಲಿದ್ದಾರೆ. ಅವರು ಪ್ರಸ್ತುತ ಸೊರಬ ಕ್ಷೇತ್ರದ ಶಾಸಕರು. ಗೀತಾ ಶಿವರಾಜ್ ಕುಮಾರ್ ಮೊದಲಿನಿಂದಲೂ ರಾಜಕೀಯವಾಗಿ ಮಧು ಬಂಗಾರಪ್ಪ ಜೊತೆ ಗುರುತಿಸಿಕೊಂಡಿದ್ದಾರೆ. ಈಗ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಿದ್ದು, ಗೀತಾ ಶಿವರಾಜ್ ಕುಮಾರ್ ಸಹ ಪಕ್ಷಕ್ಕೆ ಸೇರಲಿದ್ದಾರೆ.

2014ರಲ್ಲಿ ಸೋತಿದ್ದರು
ಗೀತಾ ಶಿವರಾಜ್ 2014ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 2,40,636 ಮತಗಳನ್ನು ಪಡೆದು ಬಿಜೆಪಿಯ ಬಿ. ಎಸ್. ಯಡಿಯೂರಪ್ಪ ವಿರುದ್ಧ ಸೋಲು ಕಂಡಿದ್ದರು. 6,06,216 ಮತಗಳನ್ನು ಪಡೆದು ಯಡಿಯೂರಪ್ಪ ಗೆದ್ದಿದ್ದರು.












Click it and Unblock the Notifications