ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆಶಿಗೆ ಕೊನೆಗೂ ತಪ್ಪಿನ ಅರಿವಾಗಿರೋದು ಸಂತೋಷ: ಬಿಎಸ್‌ವೈ

|
Google Oneindia Kannada News

ಬೈಂದೂರು, ಅಕ್ಟೋಬರ್ 19: ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಡಿಕೆ ಶಿವಕುಮಾರ್‌ಗೆ ಈಗಲಾದರೂ ತಪ್ಪಿನ ಅರಿವಾಗಿದ್ದು ಸಮಾಧಾನ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮ ಹೇಳಿಕೆ: ಡಿಕೆಶಿ ಮೇಲೆ ಎಂಬಿ.ಪಾಟೀಲ್ ಕಿಡಿಲಿಂಗಾಯತ ಪ್ರತ್ಯೇಕ ಧರ್ಮ ಹೇಳಿಕೆ: ಡಿಕೆಶಿ ಮೇಲೆ ಎಂಬಿ.ಪಾಟೀಲ್ ಕಿಡಿ

ಲೋಕಸಭೆ ಉಪಚುನಾವಣೆಗೆ ಶಿವಮೊಗ್ಗದಲ್ಲಿ ಪ್ರಚಾರ ನಿರತರಾಗಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಒಡೆದು ಕೈ ಸುಟ್ಟುಕೊಂಡಿದ್ದೇವೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ. ಇನ್ನು ಮುಂದೆ ಜಾತಿ-ಧರ್ಮದ ವಿಚಾರದಲ್ಲಿ ಯಾರು ಗೊಂದಲ ಸೃಷ್ಟಿ ಮಾಡಬಾರದು ಎಂದು ಎಲ್ಲಾ ಪಕ್ಷದವರಲ್ಲಿ ವಿನಂತಿಸುತ್ತೇನೆ ಎಂದರು.

ಮೈಸೂರು ದಸರಾ - ವಿಶೇಷ ಪುರವಣಿ

ರಾಜಕೀಯ ಮಾಡೋಣ ಆದರೆ ಜಾತಿ-ಧರ್ಮಗಳನ್ನು ಎಳೆದು ತರುವುದು ಬೇಡ ಎಂದು ಸಲಹೆ ನೀಡಿದ ಬಿಎಸ್‌ವೈ, ಎಂಬಿ ಪಾಟೀಲ್ ಹಾಗೂ ವಿನಯ್ ಕುಲಕರ್ಣಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಅವರು ಹೇಳಿದರು.

ಕೈಮುಗಿದು ಸಾರ್ವಜನಿಕವಾಗಿ ಕ್ಷಮಾಪಣೆ ಕೇಳಿದ ಸಚಿವ ಡಿ.ಕೆ.ಶಿವಕುಮಾರ್‌ ಕೈಮುಗಿದು ಸಾರ್ವಜನಿಕವಾಗಿ ಕ್ಷಮಾಪಣೆ ಕೇಳಿದ ಸಚಿವ ಡಿ.ಕೆ.ಶಿವಕುಮಾರ್‌

Glad that DK Shivakumar finally apologize for congress mistakes: Yeddyurappa

ನಿನ್ನೆ ಗದಗದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಲಿಂಗಾಯತ ಪ್ರತ್ಯೇಕ ಧರ್ಮ ವಿವಾದದಲ್ಲಿ ಹಸ್ತಕ್ಷೇಪ ಮಾಡಿ ನಾವು ದೊಡ್ಡ ತಪ್ಪು ಮಾಡಿದೆವು, ನಮ್ಮನ್ನು ಕ್ಷಮಿಸಿಬಿಡಿ ಎಂದು ಸಾರ್ವಜನಿಕವಾಗಿ ಕ್ಷಮಾಪಣೆ ಕೇಳಿದ್ದರು. ಅಲ್ಲದೇ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಹಸ್ತಕ್ಷೇಪ ಮಾಡಿದ್ದರಿಂದಲೇ ಕಾಂಗ್ರೆಸ್‌ ಸೋತಿದ್ದು ಎಂದು ಸಹ ಹೇಳಿದ್ದರು.

English summary
BJP president Yeddyurappa said that finally minister DK Shivakumar apologize for congress mistake of siting Lingayata community.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X