• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರದಿಂದ ಸಕಲ ನೆರವು: ಮುಖ್ಯಮಂತ್ರಿ ಭರವಸೆ

|

ಶಿವಮೊಗ್ಗ, ನವೆಂಬರ್ 8: ಕೋವಿಡ್ ಕಾರಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಭಾನುವಾರ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಜಂಟಿ ಸಹಯೋಗದಲ್ಲಿ ಆಯೋಜಿಸಿದ್ದ "ಜ್ಞಾನ ದೀವಿಗೆ' ಎಂಬ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆಯ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

RR ನಗರ, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಿಎಂ ಬಿಎಸ್ವೈ

ಅಂತರ್ಜಾಲ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅಡ್ಡಿಯುಂಟಾಗಿರುವುದು ಸರ್ಕಾರದ ಗಮನದಲ್ಲಿದೆ. ಅಂತಹ ವಿದ್ಯಾರ್ಥಿಗಳಿಗೆ ನೆರವು ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಈ ಕಾರ್ಯಕ್ರಮಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು ಒದಗಿಸಲಾಗುವುದು. ಖಾಸಗಿ ಸಂಸ್ಥೆಗಳು ಈ ರೀತಿಯ ಕಾರ್ಯಕ್ರಮಗಳಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಆನ್ ಲೈನ್ ಶಿಕ್ಷಣ ಸೇರಿದಂತೆ ಪರ್ಯಾಯ ಕ್ರಮ

ಆನ್ ಲೈನ್ ಶಿಕ್ಷಣ ಸೇರಿದಂತೆ ಪರ್ಯಾಯ ಕ್ರಮ

ಕೋವಿಡ್ ನಿಂದಾಗಿ ಶಿಕ್ಷಣ ಕ್ಷೇತ್ರ ಸೇರಿದಂತೆ ರಾಜ್ಯದ ಆರ್ಥಿಕತೆಗೆ ತೀವ್ರ ಹಿನ್ನಡೆ ಉಂಟಾಗಿದೆ. ಸರ್ಕಾರ ಈಗಾಗಲೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಆನ್ ಲೈನ್ ಶಿಕ್ಷಣ ಸೇರಿದಂತೆ, ಪರ್ಯಾಯ ಕ್ರಮಗಳನ್ನು ಕೈಗೊಂಡಿದೆ. ಇದೀಗ "ಜ್ಞಾನ ದೀವಿಗೆ' ಕಾರ್ಯಕ್ರಮದಡಿಯಲ್ಲಿ ರಾಜ್ಯದ 2.68 ಲಕ್ಷ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದು, ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಕಾರ್ಯಕ್ರಮ ಜಾರಿಯಾಗಲಿದೆ ಎಂದರು.

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು

ಜನರಲ್ಲಿ ಅರಿವು ಮೂಡಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಕೋವಿಡ್ ನಿಂದ ಪಾರಾಗಲು ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ವಿನಂತಿಸಿದರು. ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಸೇರಿದಂತೆ ಮತ್ತಿತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶರಾವತಿ ಸಂತ್ರಸ್ತರಿಗೆ ಪರಿಹಾರ

ಶರಾವತಿ ಸಂತ್ರಸ್ತರಿಗೆ ಪರಿಹಾರ

ಇದಕ್ಕೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯಯುತವಾದ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಶಾಸಕರೊಂದಿಗೆ ಸಭೆ

ಶಾಸಕರೊಂದಿಗೆ ಸಭೆ

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸೂಕ್ರ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶರಾವತಿ ಸಂತ್ರಸ್ತರ ಸಮಸ್ಯೆ ಆದಷ್ಟು ಶೀಘ್ರವೇ ಪರಿಹರಿಸುವ ನಿಟ್ಟಿನಲ್ಲಿ ಶಾಸಕರೊಂದಿಗೆ ಸಹ ಸಭೆ ನಡೆಸಲಾಗಿದ್ದು, ಸಮಸ್ಯೆಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

English summary
Chief Minister BS Yediyurappa said the state government would provide all kinds of assistance in the education of rural students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X