Bhadravati Bandh : ಫೆ.24 ರಂದು ಭದ್ರಾವತಿ ಬಂದ್‌ಗೆ ಕರೆ ನೀಡಿದ ಕಾರ್ಖಾನೆಯ ಕಾರ್ಮಿಕರು
ಹಲವಾರು ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಭದ್ರಾವತಿ ಬಂದ್‌ಗೆ ಬೆಂಬಲ ನೀಡಿದ್ದಾರೆ.
ಶಿವಮೊಗ್ಗ, ಫೆಬ್ರವರಿ. 21: ಭದ್ರಾವತಿಯ ವಿಐಎಸ್ಎಲ್ ಪುನಶ್ಚೇತನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು, ನಾಗರಿಕರ ಬೆಂಬಲದೊಂದಿಗೆ ಸ್ವಯಂ ಪ್ರೇರಿತ ಬಂದ್ ಮಾಡಲು ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಾರ್ಮಿಕರು ನಿರ್ಧರಿಸಿದ್ದಾರೆ.
ಈ ಹಿನ್ನೆಲೆ ಫೆ.24 ರಂದು ಭದ್ರಾವತಿ ಬಂದ್ ಗೆ ಕರೆ ನೀಡಲಾಗಿದೆ.
ಹಲವಾರು ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಭದ್ರಾವತಿ ಬಂದ್‌ಗೆ ಬೆಂಬಲ ನೀಡಿದ್ದಾರೆ. ಭದ್ರಾವತಿಯ ನಿವಾಸಿಗಳು ಕಾರ್ಖಾನೆ ಮುಚ್ಚುವ ನಿರ್ಧಾರವನ್ನು ವಿರೋಧಿಸಿ ಬಂದ್ ಆಚರಿಸಲು ಮುಂದಾಗಿದ್ದಾರೆ ಎಂದು ವಿಐಎಸ್‌ಪಿ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎಚ್.ಜಿ.ಸುರೇಶ್ ಹೇಳಿದ್ದಾರೆ.

ನಷ್ಟವನ್ನು ಉಲ್ಲೇಖಿಸಿ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವುದಾಗಿ ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಾರ್ಖಾನೆಗೆ ಕಬ್ಬಿಣದ ಅದಿರು ಗಣಿ ಅನುಪಸ್ಥಿತಿಯ ದೃಷ್ಟಿಯಿಂದ ಸ್ಥಾವರವನ್ನು ಮುಚ್ಚುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ತಂತ್ರಜ್ಞಾನ ಬಳಕೆಗೆ ಹೆಚ್ಚಿನ ವೆಚ್ಚ ಮತ್ತು ಕಡಿಮೆ ಉತ್ಪಾದನೆಯ ಕಾರಣದಿಂದ ಕಾರ್ಖಾನೆ ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಖಾನೆಯಲ್ಲಿ 250 ಖಾಯಂ ನೌಕರರು ಮತ್ತು 1,400 ಗುತ್ತಿಗೆ ನೌಕರರನ್ನು ಹೊಂದಿರುವ ಸ್ಥಾವರವನ್ನು ಮುಚ್ಚುವುದಕ್ಕೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ವಿರೋಧಿಸಿದ್ದಾರೆ.
ಫೆ.24 ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಭದ್ರಾವತಿ ಪಟ್ಟಣದಲ್ಲಿ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ವಿಐಎಸ್ಎಲ್ ಕಾರ್ಖಾನೆ ಮುಂಭಾಗದಿಂದ ಡಾ. ಅಂಬೇಡ್ಕರ್ ವೃತ್ತ, ಬಿ.ಹೆಚ್.ರಸ್ತೆ, ಚನ್ನಗಿರಿ ರಸ್ತೆ ಮೂಲಕ ತಹಶೀಲ್ದಾರ್ ಕಚೇರಿ ತಲುಪಲಾಗುತ್ತದೆ ಎಂದು ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಹೆಚ್.ಜಿ.ಸುರೇಶ್ ತಿಳಿಸಿದ್ದಾರೆ.












Click it and Unblock the Notifications