ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ 16ರಿಂದ ಅರ್ಧದಿನದ ಲಾಕ್ ಡೌನ್

ಶಿವಮೊಗ್ಗ, ಜುಲೈ 15 : ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕಾಗಿ ಅರ್ಧದಿನದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ - 19 ಸೋಂಕು ಹರಡುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ 530ಕ್ಕೆ ಏರಿಕೆಯಾಗಿದೆ.

Recommended Video

      Facebook ತ್ಯಜಿಸಿ ಇಲ್ಲ ಸೇನೆಯಿಂದ ಹೊರನಡೆಯಿರಿ | Oneindia Kannada

      ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಈ ಕುರಿತು ಮಾಹಿತಿ ನೀಡಿದರು. "ಕೊರೊನಾ ನಿಯಂತ್ರಣದ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜುಲೈ 16ರಿಂದ ಮುಂದಿನ ಆದೇಶದವರೆಗೆ ಮಧ್ಯಾಹ್ನ 2ಗಂಟೆ ತನಕ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು" ಎಂದರು.

      ಕೆ. ಎಸ್. ಈಶ್ವರಪ್ಪ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಯಿತು. ಜಿಲ್ಲೆಯ ಜನಪ್ರತಿನಿಧಿಗಳು ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.

      "ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಗೂಡುವುದು, ಮಾಸ್ಕ್ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ" ಎಂದು ಈಶ್ವರಪ್ಪ ಹೇಳಿದರು.

      ವ್ಯಾಪಾರ ವಹಿವಾಟಿಗೆ ಅವಕಾಶ

      ವ್ಯಾಪಾರ ವಹಿವಾಟಿಗೆ ಅವಕಾಶ

      ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್ ಬಂಕ್‍, ಮದ್ಯದ ಅಂಗಡಿ, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2ಗಂಟೆವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧ ವಿಧಿಸಿರುವುದಿಲ್ಲ. ಆದರೆ, ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು.

      ಮಾರ್ಗಸೂಚಿಗಳನ್ನು ಪಾಲಿಸಿ

      ಮಾರ್ಗಸೂಚಿಗಳನ್ನು ಪಾಲಿಸಿ

      "ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶವಿರುವುದಿಲ್ಲ. ಎಲ್ಲಾ ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸಬಹುದಾಗಿದೆ. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಸೂಚಿಸಲಾಗಿದೆ" ಎಂದು ಕೆ. ಎಸ್. ಈಶ್ವರಪ್ಪ ಹೇಳಿದರು.

      ಪೊಲೀಸರಿಗೆ ಸಂಪೂರ್ಣ ಅಧಿಕಾರ

      ಪೊಲೀಸರಿಗೆ ಸಂಪೂರ್ಣ ಅಧಿಕಾರ

      ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪುಗೂಡುವುದು, ಮಾಸ್ಕ್ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ನೀಡಲಾಗಿದೆ.

      ಸಮಾಲೋಚನಾ ಸಭೆ

      ಸಮಾಲೋಚನಾ ಸಭೆ

      ಜಿಲ್ಲೆಯ ವಿವಿಧ ಸಂಘಟನೆಗಳ ಸದಸ್ಯರ ಜೊತೆ ಕೆ. ಎಸ್. ಈಶ್ವರಪ್ಪ ಸಮಾಲೋಚನೆ ನಡೆಸಿದರು. ಕೈಗಾರಿಕೆಗಳಿಗೆ ವಿನಾಯಿತಿ ನೀಡಬೇಕು, ಅಟೋ ಕಾಂಪ್ಲೆಕ್ಸ್‌ನಲ್ಲಿ ಸಂಜೆ 6ರವರೆಗೆ ಚಟುವಟಿಕೆಗಳಿಗೆ ಅವಕಾಶ ನೀಡಬೇಕು, ಸೀಲ್‍ಡೌನ್ ಪ್ರದೇಶದಲ್ಲಿರುವ ಬಡವರಿಗೆ ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ತರಕಾರಿ, ದಿನಸಿ ವಿತರಿಸಬೇಕು ಮುಂತಾದ ಸಲಹೆಗಳನ್ನು ಸಂಘಟನೆಗಳ ಸದಸ್ಯರು ನೀಡಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+