ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ 16ರಿಂದ ಅರ್ಧದಿನದ ಲಾಕ್ ಡೌನ್

|
Google Oneindia Kannada News

ಶಿವಮೊಗ್ಗ, ಜುಲೈ 15 : ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕಾಗಿ ಅರ್ಧದಿನದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ - 19 ಸೋಂಕು ಹರಡುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ 530ಕ್ಕೆ ಏರಿಕೆಯಾಗಿದೆ.

Recommended Video

Facebook ತ್ಯಜಿಸಿ ಇಲ್ಲ ಸೇನೆಯಿಂದ ಹೊರನಡೆಯಿರಿ | Oneindia Kannada

ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಈ ಕುರಿತು ಮಾಹಿತಿ ನೀಡಿದರು. "ಕೊರೊನಾ ನಿಯಂತ್ರಣದ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜುಲೈ 16ರಿಂದ ಮುಂದಿನ ಆದೇಶದವರೆಗೆ ಮಧ್ಯಾಹ್ನ 2ಗಂಟೆ ತನಕ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು" ಎಂದರು.

ಶಿವಮೊಗ್ಗ ನಗರದಲ್ಲಿ ಲಾಕ್ ಡೌನ್ ಘೋಷಣೆ; ಅಂಗಡಿಗಳು ಬಂದ್ ಶಿವಮೊಗ್ಗ ನಗರದಲ್ಲಿ ಲಾಕ್ ಡೌನ್ ಘೋಷಣೆ; ಅಂಗಡಿಗಳು ಬಂದ್

ಕೆ. ಎಸ್. ಈಶ್ವರಪ್ಪ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಯಿತು. ಜಿಲ್ಲೆಯ ಜನಪ್ರತಿನಿಧಿಗಳು ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಕೊರೊನಾ ಪರಿಸ್ಥಿತಿ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆಶಿವಮೊಗ್ಗ ಕೊರೊನಾ ಪರಿಸ್ಥಿತಿ ಬಗ್ಗೆ ಜಿಲ್ಲಾಧಿಕಾರಿ ಸ್ಪಷ್ಟನೆ

"ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಗೂಡುವುದು, ಮಾಸ್ಕ್ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ" ಎಂದು ಈಶ್ವರಪ್ಪ ಹೇಳಿದರು.

ಕಳ್ಳನಿಗೆ ಕೊರೊನಾ ವೈರಸ್ ಸೋಂಕು: ಶಿವಮೊಗ್ಗ ಪೊಲೀಸರಲ್ಲಿ ಆತಂಕ ಶುರುಕಳ್ಳನಿಗೆ ಕೊರೊನಾ ವೈರಸ್ ಸೋಂಕು: ಶಿವಮೊಗ್ಗ ಪೊಲೀಸರಲ್ಲಿ ಆತಂಕ ಶುರು

ವ್ಯಾಪಾರ ವಹಿವಾಟಿಗೆ ಅವಕಾಶ

ವ್ಯಾಪಾರ ವಹಿವಾಟಿಗೆ ಅವಕಾಶ

ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್ ಬಂಕ್‍, ಮದ್ಯದ ಅಂಗಡಿ, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2ಗಂಟೆವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧ ವಿಧಿಸಿರುವುದಿಲ್ಲ. ಆದರೆ, ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು.

ಮಾರ್ಗಸೂಚಿಗಳನ್ನು ಪಾಲಿಸಿ

ಮಾರ್ಗಸೂಚಿಗಳನ್ನು ಪಾಲಿಸಿ

"ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶವಿರುವುದಿಲ್ಲ. ಎಲ್ಲಾ ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸಬಹುದಾಗಿದೆ. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಸೂಚಿಸಲಾಗಿದೆ" ಎಂದು ಕೆ. ಎಸ್. ಈಶ್ವರಪ್ಪ ಹೇಳಿದರು.

ಪೊಲೀಸರಿಗೆ ಸಂಪೂರ್ಣ ಅಧಿಕಾರ

ಪೊಲೀಸರಿಗೆ ಸಂಪೂರ್ಣ ಅಧಿಕಾರ

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪುಗೂಡುವುದು, ಮಾಸ್ಕ್ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ನೀಡಲಾಗಿದೆ.

ಸಮಾಲೋಚನಾ ಸಭೆ

ಸಮಾಲೋಚನಾ ಸಭೆ

ಜಿಲ್ಲೆಯ ವಿವಿಧ ಸಂಘಟನೆಗಳ ಸದಸ್ಯರ ಜೊತೆ ಕೆ. ಎಸ್. ಈಶ್ವರಪ್ಪ ಸಮಾಲೋಚನೆ ನಡೆಸಿದರು. ಕೈಗಾರಿಕೆಗಳಿಗೆ ವಿನಾಯಿತಿ ನೀಡಬೇಕು, ಅಟೋ ಕಾಂಪ್ಲೆಕ್ಸ್‌ನಲ್ಲಿ ಸಂಜೆ 6ರವರೆಗೆ ಚಟುವಟಿಕೆಗಳಿಗೆ ಅವಕಾಶ ನೀಡಬೇಕು, ಸೀಲ್‍ಡೌನ್ ಪ್ರದೇಶದಲ್ಲಿರುವ ಬಡವರಿಗೆ ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ತರಕಾರಿ, ದಿನಸಿ ವಿತರಿಸಬೇಕು ಮುಂತಾದ ಸಲಹೆಗಳನ್ನು ಸಂಘಟನೆಗಳ ಸದಸ್ಯರು ನೀಡಿದರು.

English summary
Shivamogga district in-charge minister K. S. Eshwarappa announced half day lockdown in district from July 16, 2020 to control spread of COVID-19. Stall can open form morning 5 to 2 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X