ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿ.ವೈ.ರಾಘವೇಂದ್ರ ಸೋಲಿಸಲು ಒಂದಾದ ಮೂವರು ನಾಯಕರು!

|
Google Oneindia Kannada News

Recommended Video

Lok Sabha elections 2019 : ಬಿ.ವೈ.ರಾಘವೇಂದ್ರ ಸೋಲಿಸಲು ಒಂದಾದ್ರು ಇವರು | Oneindia Kannada

ಶಿವಮೊಗ್ಗ, ಏಪ್ರಿಲ್ 17 : ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸೋಲಿಸಲು ಮೂವರು ನಾಯಕರು ಒಂದಾಗಿದ್ದಾರೆ. ಬಿಜೆಪಿ ಭದ್ರಕೋಟೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ತಂತ್ರಗಳನ್ನು ರೂಪಿಸಲಾಗುತ್ತಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಏಪ್ರಿಲ್ 23ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರು ಕಣದಲ್ಲಿದ್ದಾರೆ. ಬಿಜೆಪಿ ಭದ್ರಕೋಟೆ ಒಡೆಯಲು ಮೈತ್ರಿಕೂಟದ ನಾಯಕರು ಒಂದಾಗಿದ್ದಾರೆ.

ಶಿವಮೊಗ್ಗ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಸುದ್ದಿ ಠುಸ್ಶಿವಮೊಗ್ಗ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಸುದ್ದಿ ಠುಸ್

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸುವ ಮೂಲಕ ಯಡಿಯೂರಪ್ಪಗೆ ಮುಖಭಂಗ ಉಂಟು ಮಾಡಬೇಕು ಎಂಬುದು ಮೈತ್ರಿಕೂಟದ ನಾಯಕರ ಚಿಂತನೆಯಾಗಿದೆ.

ಶಿವಮೊಗ್ಗ ಕ್ಷೇತ್ರದ ಚುನಾವಣಾ ಪುಟ

ಕರ್ನಾಟಕ ಕಾಂಗ್ರೆಸ್ ಸಚಿವ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರನ್ನು ಶಿವಮೊಗ್ಗ ಉಸ್ತುವಾರಿಯಾಗಿ ನೇಮಕ ಮಾಡಿದೆ. ಏಪ್ರಿಲ್ 19 ರಿಂದ 21ರ ತನಕ ಅವರು ಕ್ಷೇತ್ರದಲ್ಲಿಯೇ ಉಳಿದು ಪ್ರಚಾರ ಮಾಡುವಂತೆ ಸೂಚನೆ ನೀಡಲಾಗಿದೆ. ಏಪ್ರಿಲ್ 23ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಶಿವಮೊಗ್ಗಕ್ಕೆ ಮೂವರು ನಾಯಕರು

ಶಿವಮೊಗ್ಗಕ್ಕೆ ಮೂವರು ನಾಯಕರು

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಒಂದಾಗಿದ್ದಾರೆ. ಬಿ.ವೈ.ರಾಘವೇಂದ್ರ ಸೋಲಿಸಲು ಎಲ್ಲರೂ ಒಂದಾಗಿದ್ದಾರೆ.

ಜಂಟಿ ಚುನಾವಣಾ ಪ್ರಚಾರ

ಜಂಟಿ ಚುನಾವಣಾ ಪ್ರಚಾರ

ಏಪ್ರಿಲ್ 18 ರಿಂದ 21ರ ತನಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಅವರ ಪರವಾಗಿ ಪ್ರಚಾರವನ್ನು ನಡೆಸಲಿದ್ದಾರೆ. ಮೂರು ದಿನಗಳ ಕಾಲ ಶಿವಮೊಗ್ಗದಲ್ಲಿಯೇ ನಾಯಕರು ವಾಸ್ತವ್ಯ ಹೂಡಲಿದ್ದು, ಬಿ.ವೈ.ರಾಘವೇಂದ್ರ ಸೋಲಿಗೆ ತಂತ್ರ ರೂಪಿಸಲಿದ್ದಾರೆ.

ಕಡಿಮೆ ಅಂತರದ ಸೋಲು

ಕಡಿಮೆ ಅಂತರದ ಸೋಲು

2018ರಲ್ಲಿ ನಡೆದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರು ಬಿ.ವೈ.ರಾಘವೇಂದ್ರ ಅವರ ವಿರುದ್ಧ 50 ಸಾವಿರ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಈ ಚುನಾವಣೆಯಲ್ಲಿ ಮತ್ತೆ ಅವರೇ ಎದುರಾಳಿಗಳು. ಆದ್ದರಿಂದ, ಈ ಬಾರಿ ಗೆಲುವು ಸಾಧಿಸಲೇಬೇಕು ಎಂದು ಮೈತ್ರಿಕೂಟದ ನಾಯಕರು ತೀರ್ಮಾನ ಮಾಡಿದ್ದಾರೆ.

ಒಂದು ಹಂತದ ಪ್ರಚಾರ ಮುಗಿಸಿದ್ದಾರೆ

ಒಂದು ಹಂತದ ಪ್ರಚಾರ ಮುಗಿಸಿದ್ದಾರೆ

ಸಚಿವ ಡಿ.ಕೆ.ಶಿವಕುಮಾರ್ ಅವರು ಶಿವಮೊಗ್ಗದಲ್ಲಿ ಒಂದು ಹಂತದ ಪ್ರಚಾರವನ್ನು ಮುಗಿಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರಚಾರದಲ್ಲಿ ತೊಡಗಿದ್ದಾರೆ. ಏ.18ರಿಂದ ಇಬ್ಬರು ನಾಯಕರು ಜಂಟಿಯಾಗಿ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.

English summary
Chief Minister H.D.Kumaraswamy and Minister D.K.Shivakumar joint election campaign in Shimoga lok sabha seat. Madhu Bangarappa JD(S)-Congress candidate and B.Y.Raghavendra BJP candidate in election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X