ಹೃದಯ ವಿದ್ರಾವಕ ಘಟನೆ: 2 ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾಯಿ ಆತ್ಮಹತ್ಯೆ

ಶಿವಮೊಗ್ಗ ಆಗಸ್ಟ್ 9: ಶಿವಮೊಗ್ಗದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದಲ್ಲಿ ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜೇಶ್ ಅವರ ಪತ್ನಿ ವಾಣಿ(32), ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳಾಗಿದ್ದಾರೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಾವಿಯಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ನಗರ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದೆ.

Heartbreaking Incident Mother commits suicide by throwing two small children into a well

ಮನೆಯ ಪಕ್ಕದಲ್ಲಿ ಇರುವ ಬಾಯಿಯಲ್ಲಿ ತಾಯಿ ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾಯಿ ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಆತ್ಮಹತ್ಯೆ ತಡೆ ಸಹಾಯವಾಣಿ. ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ ಇಂತಿದೆ 080 - 25497777.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+