Breaking; ಶಿವಮೊಗ್ಗದಲ್ಲಿ ಮಳೆ ಅವಾಂತರ, ವ್ಯಕ್ತಿ ಸಾವು
ಶಿವಮೊಗ್ಗ, ಮೇ 20: ಭಾರೀ ಮಳೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಗದ್ದೆಯಲ್ಲಿ ಕಾಲು ಜಾರಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿದರು.
ತೀರ್ಥಹಳ್ಳಿ ತಾಲೂಕು ಮೇಲಿನ ತೂದೂರಿನಲ್ಲಿ ಶಂಕರ ಎಂಬುವವರು ಸಾವನ್ನಪ್ಪಿದ್ದಾರೆ. ರಾತ್ರಿ ಗದ್ದೆಗೆ ಅವರು ತೆರಳಿದ್ದರು. ಬೆಳಗ್ಗೆಯಾದರೂ ಮನೆ ಮರಳಿರಲಿಲ್ಲ. ಹಾಗಾಗಿ ಮನೆಯವರು ಹುಡುಕಿಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಭಾರೀ ಮಳೆಯ ಕಾರಣ ಗದ್ದೆಯಲ್ಲಿ ನೀರು ತುಂಬಿತ್ತು. ಕಾಲು ಜಾರಿ ಹೊಂಡಕ್ಕೆ ಬಿದ್ದು ಶಂಕರ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಹಶೀಲ್ದಾರ್ ಶ್ರೀಪಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನಿಸಲಾಗಿದೆ.












Click it and Unblock the Notifications