ಮಾರ್ಗ ಬದಲಾವಣೆ; ಕೊಲ್ಲೂರಿಗೆ ಭೇಟಿ ನೀಡುವವರ ಗಮನಕ್ಕೆ
ಶಿವಮೊಗ್ಗ, ಜೂನ್ 23 : ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ಸಂಚಾರ ನಡೆಸುವಂತೆ ಸೂಚನೆ ನೀಡಲಾಗಿದೆ.
ಶಿವಮೊಗ್ಗ ಜಿಲ್ಲಾಡಳಿತ ಮಂಗಳವಾರ ಈ ಕುರಿತು ಆದೇಶ ಹೊರಡಿಸಿದೆ. ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ರಾಷ್ಟ್ರೀಯ ಹೆದ್ದಾರಿ ನಂ 766ಸಿ ಸಂಪರ್ಕ ಕಲ್ಪಿಸುತ್ತದೆ. ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.
ಆಗುಂಬೆ ಘಾಟಿಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರ ನಿಷೇಧ
ಈ ಮಾರ್ಗದಲ್ಲಿನ ಚಿಕ್ಕಪೇಟೆ ಬಳಿ ಸೇತುವೆಯ ಕೆಳಗೆ ಗೋಡೆ ಕುಸಿತಗೊಂಡಿದೆ. ಆದ್ದರಿಂದ, ಭಾರಿ ವಾಹನ ಸಂಚಾರ ನಿಷೇಧಿಸಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚಾರ ನಡೆಸುವಂತೆ ಪ್ರಕಟಣೆಯಲ್ಲಿ ಸೂಚನೆ ಕೊಡಲಾಗಿದೆ.
ಕರ್ನಾಟಕದ 11,760 ಕಿ.ಮೀ ರಸ್ತೆ ಮೇಲ್ದರ್ಜೆಗೆ: ಗ್ರಾಮೀಣ ರಸ್ತೆಗಳೆಷ್ಟು?
ಪರ್ಯಾಯ ಮಾರ್ಗ: ಭಾರಿ ವಾಹನಗಳು ಹೊಸನಗರ-ನಗರ-ನಿಲ್ಸಕಲ್-ಹುಲಿಕಲ್-ಹೊಸಂಗಡಿ ಮುಖಾಂತರ ಸಂಚಾರ ನಡೆಸಬಹುದು ಎಂದು ಜಿಲ್ಲಾಡಳಿತ ಹೇಳಿದೆ.
ಬೆಂಗಳೂರು-ಮಾಗಡಿ ನಾಲ್ಕು ಪಥದ ರಸ್ತೆ ಕಾಮಗಾರಿಗೆ ಜುಲೈನಲ್ಲಿ ಚಾಲನೆ
ಸೇತುವೆ ಕೆಳಗೆ ಗೋಡೆ ಕುಸಿದಿರುವ ಮಾರ್ಗದಲ್ಲಿ ವಾಹನಗಳ ಸಂಚಾರ ನಿಷೇಧಿಸಿರುವ ಬಗ್ಗೆ ಜನರಿಗೆ ಮಾಹಿತಿ ತಿಳಿಸಲು ಅವಶ್ಯವಿರುವ ಸೂಚನಾಫಲಕಗಳನ್ನು ಅಳವಡಿಸಬೇಕು ಹಾಗೂ ನಿಯಂತ್ರಣ ಸಿಬ್ಬಂದಿಗಳನ್ನು ನೇಮಿಸಲು ಜಿಲ್ಲಾಡಳಿತ ಸೂಚನೆ ಕೊಟ್ಟಿದೆ.
ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಈ ಮಾರ್ಗದಲ್ಲಿ ಭಾರಿ ವಾಹನಗಳು ಸಂಚಾರ ನಡೆಸಿದರೆ ಸೇತುವೆ ಮತ್ತಷ್ಟು ಕುಸಿಯುವ ಸಂಭವವಿದೆ ಎಂದು ವರದಿ ನೀಡಿರುತ್ತಾರೆ. ಈ ವರದಿಯ ಅನ್ವಯ ವಾಹನ ಸಂಚಾರ ನಿಷೇಧಿಸಲಾಗಿದೆ.