ಆಗುಂಬೆ ಘಾಟಿಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರ ನಿಷೇಧ
ಶಿವಮೊಗ್ಗ, ಜೂನ್ 16: ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಅತಿಯಾಗಿ ಮಳೆಯಾಗುತ್ತಿದ್ದು, ಅದರಲ್ಲೂ ಆಗುಂಬೆಯಲ್ಲಿ ಸುರಿಯುವ ಮಳೆಯಿಂದ ಘಾಟಿ ರಸ್ತೆ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಭಾರಿ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
12 ಟನ್ ಗಿಂತ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು, ಜೂನ್ 15 ರಿಂದ ಅಕ್ಟೋಬರ್ 15 ರ ವರೆಗೆ ಭಾರೀ ಗಾತ್ರದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಡಿಸಿ ಆದೇಶ ಹೊರಡಿಸಿದ್ದಾರೆ.

ಭಾರಿ ವಾಹನಗಳ ಸಂಚಾರಕ್ಕೆ ಎರಡು ಪರ್ಯಾಯ ಮಾರ್ಗವನ್ನು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಶಿವಮೊಗ್ಗ, ತೀರ್ಥಹಳ್ಳಿ, ಶೃಂಗೇರಿ, ಕೆರೆಕಟ್ಟೆ, ಕಾರ್ಕಳ, ಉಡುಪಿ, ಮಂಗಳೂರ ಮಾರ್ಗ ಶಿವಮೊಗ್ಗ, ತೀರ್ಥಹಳ್ಳಿ, ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರ, ಉಡುಪಿ, ಮಂಗಳೂರು ಮಾರ್ಗದಲ್ಲಿ ವಾಹನಗಳು ಸಂಚರಿಸಲು ಸೂಚನೆ ನೀಡಲಾಗಿದೆ.












Click it and Unblock the Notifications