ಶರಾವತಿ ಭೂಗರ್ಭ ವಿದ್ಯುತ್ ಯೋಜನೆ; ಸಮೀಕ್ಷೆಗೆ ತಡೆ
ಶಿವಮೊಗ್ಗ, ಅಕ್ಟೋಬರ್ 27: ಕರ್ನಾಟಕ ಹೈಕೋರ್ಟ್ ಶರಾವತಿ ಭೂಗರ್ಭ ವಿದ್ಯುತ್ ಯೋಜನೆ ಜಿಯೋ ಟೆಕ್ನಿಕಲ್ ಸಮೀಕ್ಷೆಗೆ ತಡೆ ನೀಡಿದೆ. ನವೆಂಬರ್ 4ರ ತನಕ ಯಾವುದೇ ಸಮೀಕ್ಷೆ ನಡೆಸದಂತೆ ಸರ್ಕಾರಕ್ಕೆ ಸೂಚಿಸಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಅವರಿದ್ದ ವಿಭಾಗೀಯ ಪೀಠ ಬಳ್ಳಾರಿಯ ಸಂತೋಷ್ ಮಾರ್ಟಿನ್ ಮತ್ತು ಬೆಂಗಳೂರಿನ ಯುನೈಟೆಡ್ ಕನ್ಸರ್ವೇಶನ್ ಮೂವ್ ಮೆಂಟ್ ಸಂಘಟನೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.
ಕೆಪಿಸಿಎಲ್ ನಡೆಸುತ್ತಿರುವ ಸಮೀಕ್ಷೆಗೆ ಅಕ್ಟೋಬರ್ 26ರ ತನಕ ಮೊದಲು ತಡೆ ನೀಡಲಾಗಿತ್ತು. ಅದನ್ನು ಈಗ ನವೆಂಬರ್ 4ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿತು.ಇದರಿಂದಾಗಿ ಮುಂದಿನ ಆದೇಶದ ತನಕ ಜಿಯೋ ಟೆಕ್ನಿಕಲ್ ಸಮೀಕ್ಷೆ ನಡೆಸುವಂತಿಲ್ಲ.

ಏನಿದು ಯೋಜನೆ: ಲಿಂಗನಮಕ್ಕಿ ಅಣೆಕಟ್ಟೆಯಿಂದ ವಿದ್ಯುತ್ ಉತ್ಪಾದನೆ ಬಳಿಕ ಪುನಃ ನದಿಗೆ ಸೇರುತ್ತಿರುವ ನೀರನ್ನು ಮೇಲೆತ್ತಿ ವಿದ್ಯುತ್ ಉತ್ಪಾದನೆ ಮಾಡಲು ಕೆಪಿಸಿಎಲ್ ಯೋಜನೆ ರೂಪಿಸಿದೆ. ಕರ್ನಾಟಕ ಸರ್ಕಾರ ಯೋಜನೆಯ ಸಮೀಕ್ಷೆ ಅವಕಾಶ ನೀಡಿದೆ.
ಆದರೆ, ಯೋಜನೆ ಕೈಗೆತ್ತಿಕೊಳ್ಳುತ್ತಿರುವ ಪ್ರದೇಶ ಶರಾವತಿ ವನ್ಯಜೀವಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿದೆ. ಕೆಪಿಸಿಎಲ್‌ಗೆ ಅನುಮತಿ ನೀಡುವಾಗ ಮಳೆಗಾಲದಲ್ಲಿ ಸಮೀಕ್ಷೆ ನಡೆಸದಂತೆ ಸೂಚನೆ ನೀಡಲಾಗಿತ್ತು. ಇದನ್ನು ಉಲ್ಲಂಘನೆ ಮಾಡಿ ಸಮೀಕ್ಷೆ ನಡೆದಿತ್ತು.
ಆದ್ದರಿಂದ ಪರಿಸರವಾದಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನಿಯಮ ಉಲ್ಲಂಘನೆ ಮಾಡಿ ಸಮೀಕ್ಷೆ ನಡೆಸುವುದು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಸೆಕ್ಷನ್ 29ರ ಉಲ್ಲಂಘನೆ ಎಂದು ಕೋರ್ಟ್ ಹೇಳಿದ್ದು, ಸಮೀಕ್ಷೆಗೆ ತಡೆ ನೀಡಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications