ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಮಿತ್ ಶಾ ಬಳಿ ಸ್ಪಷ್ಟನೆ ಕೇಳಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್!

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜನವರಿ 17: ದಕ್ಷಿಣ ಭಾರತದ ಮತ್ತು ಕರ್ನಾಟಕದ ಮೊದಲ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್‌) ಘಟಕ ಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭದ್ರಾವತಿಯಲ್ಲಿ ಶಂಕು ಸ್ಥಾಪನೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಕನ್ನಡ ಕಾಣೆಯಾದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಭಾನುವಾರ ಎಚ್. ಡಿ. ಕುಮಾರಸ್ವಾಮಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. "ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು" ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಸಮಾಜದಲ್ಲಿ ಪೊಲೀಸರನ್ನು ನೋಡುವ ದೃಷ್ಠಿ ಬದಲಾಗಬೇಕಿದೆ: ಅಮಿತ್ ಶಾಸಮಾಜದಲ್ಲಿ ಪೊಲೀಸರನ್ನು ನೋಡುವ ದೃಷ್ಠಿ ಬದಲಾಗಬೇಕಿದೆ: ಅಮಿತ್ ಶಾ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ ಘಟಕ ಸ್ಥಾಪನೆಯಾಗಲಿದೆ. ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಘಟಕ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಿದ್ದರು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ನಾಯಕರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಉಕ್ಕಿನ ನಗರಿ ಭದ್ರಾವತಿಯಲ್ಲಿ RAF ಘಟಕಕ್ಕೆ ಶಂಕುಸ್ಥಾಪನೆ ಮಾಡಿದ ಅಮಿತ್ ಶಾಉಕ್ಕಿನ ನಗರಿ ಭದ್ರಾವತಿಯಲ್ಲಿ RAF ಘಟಕಕ್ಕೆ ಶಂಕುಸ್ಥಾಪನೆ ಮಾಡಿದ ಅಮಿತ್ ಶಾ

ಶಂಕುಸ್ಥಾಪನೆ ಸಮಾರಂಭದ ಫಲಕ, ಸಮಾರಂಭದ ವೇದಿಕೆಯಲ್ಲಿದ್ದ ಫಲಕ ಸೇರಿದಂತೆ ಎಲ್ಲಾ ಕಡೆ ಕನ್ನಡ ಮಾಯವಾಗಿತ್ತು. ಹಿಂದಿ ಭಾಷೆಯ ಫಲಕಗಳನ್ನು ಆಳವಡಿಸಲಾಗಿತ್ತು. ಈ ಕುರಿತು ಎಚ್. ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಬೆಳಗಾವಿ ಕನ್ನಡ ಧ್ವಜ ವಿವಾದ; ಕುಮಾರಸ್ವಾಮಿ ಟ್ವೀಟ್ ಬೆಳಗಾವಿ ಕನ್ನಡ ಧ್ವಜ ವಿವಾದ; ಕುಮಾರಸ್ವಾಮಿ ಟ್ವೀಟ್

ಕನ್ನಡದ ಅವಗಣನೆ

ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಅಮಿತ್ ಶಾ ಸ್ಪಷ್ಟನೆ ನೀಡಬೇಕು

ಅಮಿತ್ ಶಾ ಸ್ಪಷ್ಟನೆ ನೀಡಬೇಕು

"ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು" ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕನ್ನಡಕ್ಕೆ ಬಗೆದ ದ್ರೋಹವಾಗಿದೆ

ಕನ್ನಡಕ್ಕೆ ಬಗೆದ ದ್ರೋಹವಾಗಿದೆ

"ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಎಚ್. ಡಿ. ಕುಮಾರಸ್ವಾಮಿ ಮಾತ್ರವಲ್ಲಿ ಭದ್ರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಾಣೆಯಾದ ಬಗ್ಗೆ ಹಲವಾರು ಜನರು ಪ್ರಶ್ನೆ ಎತ್ತಿದ್ದಾರೆ. ಬಿಜೆಪಿ ನಾಯಕರು ಕೇಂದ್ರದ ಗುಲಾಮರಾಗಿದ್ದಾರೆ ಎಂದು ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

English summary
Union home minister Amit Shah laid foundation stone for Rapid Action Force unit in Bhadravathi, Shivamogga. Former chief minister H. D. Kumaraswamy tweet about Hindi in function.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X