ಹೊಸನಗರ ಕೊಲ್ಲೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿ ಮಣ್ಣು ಕುಸಿತ

ಶಿವಮೊಗ್ಗ, ಜುಲೈ 11: ಶಿವಮೊಗ್ಗ ಜಿಲ್ಲೆಯ ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾದ ಹೊಸನಗರದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಹೊಸನಗರ-ರಾಣೆಬೆನ್ನೂರು- ಕೊಲ್ಲೂರು ಮಾರ್ಗ ಮಧ್ಯೆ ರಸ್ತೆ ಬದಿ ಕುಸಿತ ಉಂಟಾಗಿದೆ.

Recommended Video

      Drone Prathap ಇಷ್ಟು ದಿನ ಹೇಳಿದ್ದೆಲ್ಲಾ ಸುಳ್ಳಾ ? | Oneindia Kannada

      ಕಳೆದೊಂದು ವಾರದಲ್ಲಿ ದಾಖಲೆ ಪ್ರಮಾಣದಲ್ಲಿ ಇಲ್ಲಿ ಮಳೆಯಾಗಿದ್ದು, ಭಾರೀ ಮಳೆಗೆ ಹೊಸನಗರದ ನಾಗೋಡಿ ಸಮೀಪದ ರಾಷ್ಟ್ರೀಯ ಬೈಂದೂರು-ರಾಣಿಬೆನ್ನೂರು ರಸ್ತೆಯ ಕೊಲ್ಲೂರು ಮಾರ್ಗದಲ್ಲಿ ರಸ್ತೆ ಬದಿಯ ಮಣ್ಣು ಕುಸಿಯಲು ಆರಂಭವಾಗಿದೆ.

      ರಸ್ತೆ ಕುಸಿತದ ಭೀತಿಯಿಂದ ಈ ಮಾರ್ಗದಲ್ಲಿ ವಾಹನ ಸವಾರರು ಆತಂಕದಿಂದಲೇ ಸಂಚಾರ‌ ನಡೆಸುವಂತಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ ಮಳೆಯಾದರೆ ರಸ್ತೆಗೆ ಹೆಚ್ಚಿನ ಮಟ್ಟದ ಹಾನಿಯಾಗಿ ಸಂಚಾರಕ್ಕೆ ತೊಂದರೆ ಆಗುವ ಸಾಧ್ಯತೆ ಇದೆ. ಕಳೆದ ವರ್ಷ ಸಹ ಈ ಭಾಗದಲ್ಲಿ ರಸ್ತೆಯ ಬದಿಯಲ್ಲಿ ಮಣ್ಣು ಕುಸಿದಿತ್ತು.

      Hosanagara Kolluru Road Damaged Due To Heavy Rain In Shivamogga

      ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭಾರಿ ವಾಹನಗಳ ಸಂಚಾರವಿರುವುದರಿಂದ ಈ ಬಗ್ಗೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಾಹನ ಸವಾರರು ಆಗ್ರಹಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+