ಶಿವಮೊಗ್ಗ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಹೋಟೆಲ್ ಸಪ್ಲೈಯರ್

ಶಿವಮೊಗ್ಗ, ಜನವರಿ 11: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹೋಟೆಲ್ ಸಪ್ಲೈಯರ್ ಒಬ್ಬಾತ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಈ ವಿಚಾರವನ್ನು ಹೊರಗೆ ತಿಳಿಸಿದರೆ ಕೊಲೆ ಮಾಡುವುದಾಗಿ ವಿದ್ಯಾರ್ಥಿನಿಗೆ ಬೆದರಿಕೆ ಒಡ್ಡಿದ್ದಾನೆ.

ಉಮೇಶ್ (28) ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿಯಾಗಿದ್ದು, ಭದ್ರಾವತಿ ಪಟ್ಟಣ ಸಮೀಪದ ಗ್ರಾಮವೊಂದರ ಹೋಟೆಲ್‌ನ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದನು.

ಪ್ರಕರಣ ಹಿನ್ನೆಲೆ
ಉಮೇಶ್ ಕೆಲಸ ಮಾಡುತ್ತಿದ್ದ ಹೋಟೆಲ್‌ನಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದರು. ಆ ಮಹಿಳೆಯ ಮಗಳು ಆಗಾಗ ಹೋಟೆಲ್‌ಗೆ ಬಂದು ಹೋಗುತ್ತಿದ್ದಳು. ಆಕೆಯನ್ನು ಪರಿಚಯಿಸಿಕೊಂಡ ಉಮೇಶ್ ಈ ಕೃತ್ಯವೆಸಗಿದ್ದಾನೆ.

Shivamogga: Hotel Supplier Raped a Student On Her Way To School

ಸೋಮವಾರ ಬೆಳಗ್ಗೆ ಅಪ್ರಾಪ್ತ ವಿದ್ಯಾರ್ಥಿನಿಯು ಶಾಲೆಗೆ ತೆರಳುತ್ತಿದ್ದಳು. ಈ ಸಂದರ್ಭ ಉಮೇಶ, ಆಕೆಯನ್ನು ಪುಸಲಾಯಿಸಿ, ಭದ್ರಾವತಿಯಿಂದ ಬಸ್ಸಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಗೆ ಕರೆದೊಯ್ದಿದ್ದಾನೆ. ಅಲ್ಲಿ ಲಾಡ್ಜ್ ಒಂದರಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಈ ವಿಚಾರ ಹೊರಗೆ ಗೊತ್ತಾದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+